ನವದೆಹಲಿ: ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿರವಾಗಿದೆ ಅಂತ ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಶನಿವಾರ ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ವಾಜಪೇಯಿಗೆ ಡಯಾಲಿಸಿಸ್ ಮಾಡಲಾಗಿದ್ದು ಮೂತ್ರಪಿಂಡದ ಸೋಂಕು ನಿಯಂತ್ರಣಕ್ಕೆ ಬಂದಿದ್ದು ಸಹಜವಾಗಿ ಕಾರ್ಯನಿರ್ವಹಿಸುತ್ತಿದೆ ಅಂತ ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
Advertisement
Advertisement
ಕಳೆದ ಜೂನ್ 11ರಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದ್ದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಏಮ್ಸ್ ನಿರ್ದೇಶಕರಾದ ಡಾಕ್ಟರ್ ರಂದೀಪ್ ಗುಲೆರಿಯಾ ಮಾರ್ಗದರ್ಶನದಲ್ಲಿ ನುರಿತ ವೈದ್ಯರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರಿಗೆ ಚಿಕಿತ್ಸೆ ನೀಡುತ್ತಿದ್ದರು. ಏಮ್ಸ್ ಆಸ್ಪತ್ರೆ ಮಂಗಳವಾರ(ಜೂನ್12)ರಂದು ಬಿಡುಗಡೆ ಮಾಡಿದ ಮೆಡಿಕಲ್ ಬುಲೆಟಿನ್ ನಲ್ಲಿ, ವಾಜಪೇಯಿಯವರು ಮೂತ್ರನಾಳದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಶೀಘ್ರವೇ ಗುಣಮುಖರಾಗಲಿದ್ದಾರೆ. ಸೋಂಕು ಗುಣಮುಕ್ತವಾಗುವವರೆಗೂ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿಯಲಿದೆ ಎಂದು ತಿಳಿಸಿತ್ತು.
Advertisement
Advertisement
93 ವರ್ಷದ ವಾಜಪೇಯಿ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಕೆಲ ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ವಾಜಪೇಯಿ ಅವರು 1991, 1996, 1998, 1999 ಹಾಗೂ 2004ರಲ್ಲಿ ಲಕ್ನೋ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಆಗಿದ್ದರು. 1924ರಲ್ಲಿ ಜನಿಸಿದ ವಾಜಪೇಯಿ ಅವರು 1942 `ಭಾರತ ಬಿಟ್ಟು ತೊಲಗಿ ಚಳುವಳಿ’ಯಲ್ಲಿ ರಾಜಕಾರಣಕ್ಕೆ ಪ್ರವೇಶಿಸಿದ್ದರು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ ಮೊದಲ ವಿದೇಶಾಂಗ ವ್ಯವಹಾರಗಳ ಸಚಿವ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews