ನವದೆಹಲಿ: ಹೋಳಿ (Holi) ಹಬ್ಬದ ಪ್ರಯುಕ್ತ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಲಡಾಖ್‌ನ (Ladakh) ಲೇಹ್‌ಗೆ (Leh) ತೆರಳಿ ಭಾನುವಾರ ಸೈನಿಕರೊಂದಿಗೆ (Soldiers) ಬಣ್ಣದ ಹಬ್ಬ ಹೋಳಿಯನ್ನು ಆಚರಿಸಿದರು.
ಹೋಳಿ ಹಬ್ಬ ಆಚರಣೆ ವೇಳೆ ರಾಜನಾಥ್ ಸಿಂಗ್ ಜೊತೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಲೆಫ್ಟಿನೆಂಟ್ ಜನರಲ್ ರಶೀಮ್ ಬಾಲಿ ಉಪಸ್ಥಿತರಿದ್ದರು. ಇದಕ್ಕೂ ಮೊದಲು ರಕ್ಷಣಾ ಸಚಿವರು ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ (Siachen) ಪ್ರದೇಶಕ್ಕೆ ಭೇಟಿ ನೀಡಲು ನಿರ್ಧರಿಸಿದ್ದರು. ಆದರೆ ಪ್ರತಿಕೂಲ ಹವಾಮಾನದಿಂದ ಅದು ಸಾಧ್ಯವಾಗಲಿಲ್ಲ. ಭೇಟಿ ಅಸಾಧ್ಯವಾದ ಹಿನ್ನೆಲೆ ಅಲ್ಲಿನ ಕಮಾಂಡಿಂಗ್ ಅಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ರಾಜನಾಥ್ ಸಿಂಗ್, ಆದಷ್ಟು ಬೇಗ ಸಿಯಾಚಿನ್ ಪ್ರದೇಶಕ್ಕೆ ಭೇಟಿ ನೀಡಿ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದರು. ಇದನ್ನೂ ಓದಿ: ನಿವೃತ್ತ ವಾಯುಸೇನೆ ಮುಖ್ಯಸ್ಥ ಭದೌರಿಯಾ ಬಿಜೆಪಿ ಸೇರ್ಪಡೆ
Advertisement
Advertisement
ಈ ಸಂದರ್ಭದಲ್ಲಿ ಯೋಧರನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ನಮ್ಮ ರಾಜಧಾನಿಯಾದರೇ, ಲಡಾಖ್ ಶೌರ್ಯವನ್ನು ತೋರಿಸುವ ಮತ್ತೊಂದು ರಾಜಧಾನಿಯಾಗಿದೆ. ನಿಮ್ಮೆಲ್ಲರನ್ನು ಭೇಟಿ ಮಾಡಿ ಹೋಳಿ ಆಚರಿಸಿರುವುದು ನನಗೆ ಅತ್ಯಂತ ಸಂತೋಷದಾಯಕ ಕ್ಷಣ. ಸಿಯಾಚಿನ್ ಸಾಮಾನ್ಯ ಪ್ರದೇಶವಲ್ಲ. ಇದು ಭಾರತದ ಸಾರ್ವಭೌಮತ್ವ ಮತ್ತು ನಿರ್ಣಯದ ಸಂಕೇತ. ಇದು ನಮ್ಮ ರಾಷ್ಟ್ರೀಯ ನಿರ್ಣಯವನ್ನು ಪ್ರತಿನಿಧಿಸುತ್ತದೆ ಎಂದರು. ಇದನ್ನೂ ಓದಿ: ಇಡಿ ಕಸ್ಟಡಿಯಲ್ಲಿದ್ದುಕೊಂಡೇ ಮೊದಲ ಸರ್ಕಾರಿ ಆದೇಶ ಹೊರಡಿಸಿದ ಕೇಜ್ರಿವಾಲ್ – ಆದೇಶದಲ್ಲಿ ಏನಿದೆ?
Advertisement
Advertisement
ನಿಮ್ಮನ್ನು, ನಿಮ್ಮ ಮಕ್ಕಳನ್ನು, ನಿಮ್ಮ ಹೆತ್ತವರನ್ನು, ಕುಟುಂಬವನ್ನು ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಅದಕ್ಕೆ ನಾವು ಯಾವಾಗಲೂ ಸಿದ್ಧರಿದ್ದೇವೆ. ನಾನು ನಿಮಗೆ ಏನನ್ನೂ ಹೇಳಬೇಕಿಲ್ಲ. ನೀವು ನಿಮ್ಮ ದೇಹ ಮತ್ತು ಮನಸ್ಸನ್ನು ಅರ್ಪಿಸಿ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೀರಿ. ನಮ್ಮ ಸರ್ಕಾರವೂ ಸಶಸ್ತ್ರಪಡೆಗಳ ಸುಧಾರಣೆಗಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಉಗ್ರನಾಗಲು ಐಸಿಸ್ ಸೇರಲು ಮುಂದಾಗಿದ್ದ ಐಐಟಿ ವಿದ್ಯಾರ್ಥಿ ವಶಕ್ಕೆ