– ಮೊದಲ ದಿನವೇ ಸ್ವದೇಶಿ ಯುದ್ಧ ವಿಮಾನಗಳ ಆರ್ಭಟ ಜೋರು
ಬೆಂಗಳೂರು: ಮೈನವಿರೇಳಿಸುವ, ನೋಡುಗರ ಹೃದಯ ಬಡಿತ ಹೆಚ್ಚಿಸುವ ವೈಮಾನಿಕ ಕಸರತ್ತು, ವೈಮಾನಿಕ ಹಾಗೂ ಬಾಹ್ಯಾಕಾಶ ಉದ್ದಿಮೆ, ಉದ್ಯಮಿಗಳ ಮುಖಾಮುಖಿಗೆ ವೇದಿಕೆಯಾಗಲಿರುವ ದೇಶದ 15ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ʻಏರೋ ಇಂಡಿಯಾ 2025ʼಕ್ಕೆ (Aero India 2025) ಚಾಲನೆ ಸಿಕ್ಕಿದೆ.
Advertisement
Advertisement
ಯಲಹಂಕ ವಾಯುನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath singh) ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ದೇಶ – ವಿದೇಶಗಳ ಪ್ರಮುಖ ನಾಯಕರು, ರಕ್ಷಣಾ ವಿಭಾಗದ ಅಧಿಕಾರಿಗಳು ಏರ್ ಶೋನಲ್ಲಿ (Aero India Air Show) ಭಾಗಿಯಾಗಿದ್ದರು. ಡಿಸಿಎಂ ಡಿ.ಕೆ ಶಿವಕುಮಾರ್ ಸಹ ಉಪಸ್ಥಿತರಿದ್ದರು. ಇದನ್ನೂ ಓದಿ: ಮದುವೆಯಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಹೃದಯ ಸ್ತಂಭನ – ವೇದಿಕೆಯಲ್ಲೇ ಎಂಬಿಎ ಪದವೀಧರೆ ಸಾವು
Advertisement
Advertisement
ಏರ್ ಶೋಗೆ ಚಾಲನೆ ನೀಡಿದ ಬಳಿಕ ಕಾರ್ಯಕ್ರಮ ಉದ್ದೇಶಿಸಿ ರಾಜನಾಥ್ ಸಿಂಗ್ ಮಾತನಾಡಿದರು. ಏರ್ ಶೋ ಮೂಲಕ ಮತ್ತೊಂದು ಕುಂಭ ಶುರುವಾದಂತಿದೆ. ಪ್ರಯಾಗ್‌ರಾಜ್‌ನ ಮಹಾ ಕುಂಭ ಮೇಳ ಸಂಸ್ಕೃತಿ ಬಗ್ಗೆ ತೋರಿಸಿದ್ರೆ, ಏರ್ ಶೋ ಭಾರತದ ರಕ್ಷಣಾ ಬಲಿಷ್ಠತೆಯನ್ನ ಜಗತ್ತಿಗೆ ಸಾರುತ್ತಿದೆ. ಅಲ್ಲದೇ ಅಭಿವೃದ್ಧಿ, ಉತ್ಪಾದನೆಯ ಬಗ್ಗೆ ಭಾರತ ಕೇಂದ್ರೀಕೃತವಾಗಿದೆ. ಏರ್ ಶೋ ರಾಷ್ಟ್ರ-ರಾಷ್ಟ್ರಗಳ ಮಧ್ಯೆ ಸಂಬಂಧ – ಬಾಂಧವ್ಯಗಳನ್ನ ಅಭಿವೃದ್ಧಿಗೊಳಿಸುತ್ತದೆ ಎಂದು ನುಡಿದರು.
ದೇಶ-ವಿದೇಶಗಳ ವಾಯುಪಡೆಯ ಅಧಿಕಾರಿಗಳು ಇಲ್ಲಿದ್ದಾರೆ. ಭಾರತದ ಜೊತೆ ಈ ಅಧಿಕಾರಿಗಳ ಸಹಭಾಗಿತ್ವ ಮುಖ್ಯವಾಗಿದೆ. ಈ ಸಂಬಂಧ ವೃದ್ಧಿಯಾದ್ರೆ ಜಗತ್ತಿನಲ್ಲಿ ಬಲಿಷ್ಠರಾಗುತ್ತೇವೆ. ಡಿಜಿಟಲ್, ಸ್ಟಾರ್ಟ್ ಆಪ್, ಕೈಗಾರಿಕೋದ್ಯಮ, ನವೋಧ್ಯಮದಲ್ಲಿ ಭಾರತ ಪ್ರಗತಿ ಹೊಂದುತ್ತಿದೆ. ಅದರಂತೆ ರಕ್ಷಣಾ ವಲಯ ಬಲಿಷ್ಠವಾಗುತ್ತಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ದೇಶದ ವಿವಿಧ ನಗರಗಳ ಮೆಟ್ರೋ ದರಕ್ಕಿಂತಲೂ ಬೆಂಗಳೂರು ಮೆಟ್ರೋ ದರವೇ ದುಬಾರಿ!
ಹೆಚ್‌ಎಎಲ್ ಬಗ್ಗೆ ಮೆಚ್ಚುಗೆ:
ಇದೇ ವೇಳೆ ಬೆಂಗಳೂರಿನ ಹೆಚ್‌ಎಎಲ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜನಾಥ್ ಸಿಂಗ್, ಗುಜರಾತ್ ನಲ್ಲಿ ರಕ್ಷಣಾ ವ್ಯವಸ್ಥೆಗೆ ಸಂಬಂಧಿಸಿದ ಉತ್ಪಾದನಾ ಘಟಕ ಆರಂಭವಾಗಿದೆ. ಬೆಂಗಳೂರನ್ನ ಸಿಲಿಕಾನ್ ವ್ಯಾಲಿ ಎನ್ನಬಹುದು. ಯುದ್ಧ ವಿಮಾನಗಳು, ಡ್ರೋನ್ಸ್, ರಡಾರ್ ಸೇರಿ ರಕ್ಷಣಾ ಉತ್ಪಾದನೆಯಲ್ಲಿ ಭಾರತ ಪ್ರಗತಿ ಸಾಧಿಸುತ್ತಿದೆ. 400ಕ್ಕೂ ಹೆಚ್ಚು ದೇಶಿಯ ರಕ್ಷಣಾ ವ್ಯವಸ್ಥೆಗೆ ಸಂಬಂಧಪಟ್ಟ ಖಾಸಗಿ ಕಂಪನಿಗಳು ಪ್ರದರ್ಶಕರು ಭಾಗಿಯಾಗಿದ್ದಾರೆ. ಮುಂದಿನ 2 ವರ್ಷಗಳಲ್ಲಿ ಮತ್ತಷ್ಟು ಅಭಿವೃದ್ಧಿ ಸಾಧಿಸಲಿದ್ದೇವೆ. ಡಿಫೆನ್ಸ್ ರಪ್ತು 21,000 ಕೋಟಿಗೂ ಹೆಚ್ಚಾಗಿದೆ. ಅಲ್ಲದೇ ಮುಂದುವರೆದ ರಾಷ್ಟ್ರಗಳಲ್ಲಿ ರಕ್ಷಣಾ ಉತ್ಪನ್ನಗಳ ಪಾಲುದಾರಿಕೆಯಲ್ಲಿ ಭಾರತ ಭಾಗಿಯಾಗಿದೆ ಎಂದು ಶ್ಲಾಘಿಸಿದ್ರು.
ಬಾನಂಗಳ ಬೆಳಗಿದ ʻತೇಜಸ್ʼ:
ವೇದಿಕೆ ಕಾರ್ಯಕ್ರಮದ ಬಳಿಕ ಮೊದಲ ದಿನವೇ ಸ್ವದೇಶಿ ಯುದ್ಧ ವಿಮಾನಗಳು ತಮ್ಮ ಸಾಮರ್ಥ್ಯ ಪ್ರದರ್ಶನಕ್ಕಿಳಿದಿವೆ. ಮೊದಲ ದಿನವೇ ತೇಜಸ್ ಎಂಕೆ1ಎ, ಹೆಚ್‌ಎಎಲ್ ನಿರ್ಮಾಣದ ಹಿಂದೂಸ್ತಾನ್ ಟರ್ಬೋ ಟ್ರೈನರ್-40 ಘರ್ಜಿಸಿವೆ. ಇದರೊಂದಿಗೆ ʻನೂರು ಕೋಟಿ ಅವಕಾಶಗಳಿಗೆ ರಹದಾರಿʼ ಪರಿಕಲ್ಪನೆಯಡಿ ದೇಶಿಯ ವಸ್ತುಗಳ ಪ್ರದರ್ಶನ ಶುರುವಾಗಿವೆ. ಇದನ್ನೂ ಓದಿ: Bengaluru | ಏರ್ ಶೋ ಹಿನ್ನೆಲೆ ಟ್ರಾಫಿಕ್ ಜಾಮ್ ಬಿಸಿ – ಕಿಲೋಮೀಟರ್‌ಗಟ್ಟಲೆ ನಿಂತ ವಾಹನಗಳು