ಕಾರವಾರ: ದೇಶದ ಪ್ರತಿಷ್ಠಿತ ನೌಕಾ ನೆಲೆಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿರುವ ಕದಂಬ ನೌಕಾನೆಲೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಭೇಟಿ ನೀಡಿದರು.
Advertisement
ರಕ್ಷಣಾ ಸಚಿವರನ್ನು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್.ಹರಿ ಕುಮಾರ್ ಮತ್ತು ವೈಸ್ ಅಡ್ಮಿರಲ್ ಅಜೇಂದ್ರ ಬಹದ್ದೂರ್ ಸಿಂಗ್, ಕಮಾಂಡಿಂಗ್ ಇನ್ ಚೀಫ್ ವೆಸ್ಟರ್ನ್ ನೇವಲ್ ಕಮಾಂಡ್ ಜೊತೆಗೆ ರಿಯರ್ ಅಡ್ಮಿರಲ್ ಅತುಲ್ ಆನಂದ್, ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ಕರ್ನಾಟಕ ನೇವಲ್ ಏರಿಯಾ (ಎಫ್‍ಒಕೆ) ಬರಮಾಡಿಕೊಂಡರು. ಇದನ್ನೂ ಓದಿ: ಎಲ್ ನಿನೋ ಎಫೆಕ್ಟ್ – ಕೇರಳಕ್ಕೆ ಮುಂಗಾರು ನಾಲ್ಕು ದಿನ ವಿಳಂಬ
Advertisement
Advertisement
ರಕ್ಷಣಾ ಸಚಿವರು ಕದಂಬ ನೌಕಾ ಪ್ರದೇಶದ ರಕ್ಷಣಾ ಸಿಬ್ಬಂದಿ ಮತ್ತು ಅವರ ಕುಟುಂಬಗಳೊಂದಿಗೆ ಸಂವಾದ ನಡೆಸಿದರು. ಎರಡು ದಿನದ ಕಾರ್ಯಕ್ರಮದ ನಿಮಿತ್ತ ಆಗಮಿಸಿರುವ ರಾಜನಾಥ್ ಸಿಂಗ್ ಮೆ 27 ರಂದು ಐಎನ್‍ಎಸ್ ವಿಕ್ರಮಾದಿತ್ಯ ನೌಕೆಯ ಜಲಾಂತರ್ಗಾಮಿ ಸಮುದ್ರಯಾನದಲ್ಲಿ ಪಾಲ್ಗೊಳ್ಳುವ ಜೊತೆ ಕದಂಬ ನೌಕಾನೆಲೆಯ ಫೇಸ್-2 ಕಾಮಗಾರಿ ವೀಕ್ಷಣೆ ಮಾಡಲಿದ್ದಾರೆ. ಇದನ್ನೂ ಓದಿ: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ವೇಗೆ ಶಂಕು: ವಿಶೇಷ ಏನು?
Advertisement