ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಜೊತೆ ದೂರವಾಣಿ ಮೂಲಕ ಮಾತನಾಡಿದ್ದು, ಈ ಕುರಿತು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
Had a warm telephone conversation with @SecDef Mr Lloyd Austin. We discussed issues pertaining to bilateral defence cooperation & regional matters including situation in Afghanistan.We agreed to continue the useful dialogue & look forward to strengthening the partnership further.
— Rajnath Singh (@rajnathsingh) September 20, 2021
ರಾಜನಾಥ್ ಸಿಂಗ್ ಅವರು ಟ್ವಿಟರ್ ನಲ್ಲಿ, ಲಾಯ್ಡ್ ಆಸ್ಟಿನ್ ಅವರೊಂದಿಗೆ ಇಂದು ದೂರವಾಣಿ ಸಂಭಾಷಣೆ ನಡೆಸಿದ್ದೇನೆ. ಅಫ್ಘಾನಿಸ್ತಾನದ ಪರಿಸ್ಥಿತಿ ಸೇರಿದಂತೆ ದ್ವಿಪಕ್ಷೀಯ ರಕ್ಷಣಾ ಸಹಕಾರ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ನಾವು ಚರ್ಚಿಸಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಪ್ರಚಾರದ ಹುಚ್ಚಿಗೆ ಬಿದ್ದು ಯಡವಟ್ಟು ಮಾಡಿಕೊಂಡ್ವಿ -ಪೊಲೀಸರ ಮುಂದೆ ಕಣ್ಣೀರಿಟ್ಟ ಯುವಕರು
ಈ ಮೂಲಕ ನಾವು ಉಪಯುಕ್ತವಾಗಿ ಸಂಭಾಷಣೆ ನಡೆಸಲು ಒಪ್ಪಿಕೊಂಡಿದ್ದು, ಭಾರತ ಮತ್ತು ಯುಎಸ್ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೇವ್ ಪಾರ್ಟಿ ಜಾಗದಲ್ಲಿ ಗೋಶಾಲೆ ನಿರ್ಮಾಣ – ಮಾಲೀಕರಿಗಾಗಿ ಪೊಲೀಸರ ಹುಡುಕಾಟ