ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ (Rajneesh Goel) ನೇಮಕಗೊಂಡಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ ತಿಂಗಳ ಅಂತ್ಯಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮಾ (Vandita Sharma) ಅವರ ಅಧಿಕಾರ ಅವದಿ ಮುಕ್ತಾಯಗೊಳ್ಳಲಿದೆ. ನಂತರ ತೆರವಾಗುವ ಸ್ಥಾನಕ್ಕೆ ಮುಖ್ಯ ಕಾರ್ಯದರ್ಶಿ ಆಗಿ ರಜನೀಶ್ ಗೋಯೆಲ್ ಅವರನ್ನು ನೇಮಕ ಮಾಡಲಾಗಿದೆ. ಇದನ್ನೂ ಓದಿ: ಮುರುಘಾ ಶ್ರೀ ವಿರುದ್ಧದ ಕೇಸ್‍ನ ಎಲ್ಲಾ ದಾಖಲಾತಿಗಳನ್ನು ಒಪ್ಪಿಸಿ: ಹೈಹೋರ್ಟ್ ಆದೇಶ
Advertisement
Advertisement
ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ 5-6 ಹೆಸರುಗಳ ಪಟ್ಟಿಯಲ್ಲಿ ಸೀನಿಯಾರಿಸಿ ಪ್ರಕಾರ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರನ್ನು ಸಿಎಸ್ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಹಾಲಿ ಕಾರ್ಯರ್ಶಿಗಳು ತೆರವಾದ ನಂತರ ಅಧಿಕಾರ ಸ್ವೀಕರಿಸಲಿದ್ದಾರೆ. ಇದನ್ನೂ ಓದಿ: ಶಕ್ತಿ-ನಿಶ್ಯಕ್ತಿ, ಅನ್ನಭಾಗ್ಯ-ಕನ್ನಭಾಗ್ಯ, ಗೃಹ ಜ್ಯೋತಿ-ಪ್ರತಿ ಮನೆಗಳಲ್ಲೂ ಕಗ್ಗತ್ತಲು – ಕಾಂಗ್ರೆಸ್ ಗ್ಯಾರಂಟಿಗಳ ಕುರಿತು ಬಿಜೆಪಿ ಲೇವಡಿ
Advertisement
Advertisement
ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸಿದ್ದ 4ನೇ ಮಹಿಳೆಯಾಗಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು. ಇದನ್ನೂ ಓದಿ: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ: ಕಾಂಗ್ರೆಸ್ ವಕ್ತಾರ