ಶ್ರೀನಗರ: ಹೊಸ ವರ್ಷದಂದೇ ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಾಜೌರಿಯಲ್ಲಿ (Rajouri) ಉಗ್ರರ ದಾಳಿಗೆ (Terrorists Attack) 7 ಜನರು ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಬೃಹತ್ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. 50ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ಜನವರಿ 1 ರಂದು ಜಮ್ಮು ಮತ್ತು ಕಾಶ್ಮೀರದ ಧಂಗ್ರಿ ಗ್ರಾಮದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ 7 ಜನರು ಸಾವನ್ನಪ್ಪಿದ್ದರು. 14 ಜನರು ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಭಯೋತ್ಪಾದಕರ ಬಗ್ಗೆ ವಿಶ್ವಾಸಾರ್ಹ ಮಾಹಿತಿ ನೀಡುವವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿರುವುದಾಗಿ ನಗರದಲ್ಲಿ ಪೊಲೀಸರು ಪೋಸ್ಟರ್‌ಗಳನ್ನು ಅಳವಡಿಸಿದ್ದಾರೆ.
Advertisement
Advertisement
ದಾಳಿಗೂ ಮೊದಲು ಭಯೋತ್ಪಾದಕರ ಉಪಸ್ಥಿತಿಯ ವರದಿಗಳಿದ್ದ 10ಕ್ಕೂ ಹೆಚ್ಚು ಗ್ರಾಮಗಳಲ್ಲಿ ಸೇನೆ, ಪೊಲೀಸರು ಹಾಗೂ ಸಿಆರ್‌ಪಿಎಫ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ರಾಜೌರಿಯ ಹೊರಗಿನಿಂದ ಜಮ್ಮು ಮತ್ತು ಕಾಶ್ಮೀರದ ಪೊಲೀಸರ ವಿಶೇಷ ತಂಡವನ್ನೂ ಕಾರ್ಯಾಚರಣೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮ್ಯೂಸಿಕ್ ಸೌಂಡ್ ಕಡಿಮೆ ಮಾಡಿ ಎಂದಿದ್ದಕ್ಕೆ ಸೇನಾಧಿಕಾರಿ ಕಾರಿಗೆ ಬೆಂಕಿ ಇಟ್ಟವರ ಹೋಟೆಲ್‌ಗೆ ಬಿತ್ತು ಬೀಗ
Advertisement
ಧಂಗ್ರಿ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರನ್ನು ಸೆರೆಹಿಡಿಯಲು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಬೃಹತ್ ಪ್ರಮಾಣದಲ್ಲಿ ನಡೆಯುತ್ತಿದೆ. ವಿಚಾರಣೆ ವೇಳೆ ಕೆಲವು ಪ್ರಮುಖ ಸುಳಿವುಗಳು ದೊರಕಿವೆ. ಉಗ್ರರನ್ನು ಸೆರೆಹಿಡಿಯಲು ಎಲ್ಲಾ ರೀತಿಯ ಕೆಲಸಗಳು ನಡೆಯುತ್ತಿವೆ ಎಂದು ರಾಜೌರಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಅಸ್ಲಾಮ್ ಹೇಳಿದ್ದಾರೆ.
Advertisement
ಶಂಕಿತ ವ್ಯಕ್ತಿಗಳ ವಿಚಾರಣೆ ವೇಳೆ ಹಲವು ಪ್ರಮುಖ ಸುಳಿವುಗಳು ಪತ್ತೆಯಾಗಿವೆ. ದಾಳಿ ನಡೆಸುವ ಮುನ್ನ ಭಯೋತ್ಪಾದಕರು ಇದೇ ಊರಿನಲ್ಲಿದ್ದರು ಎಂಬುದು ಬಹುತೇಕ ಸ್ಪಷ್ಟವಾಗಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಜೋಶಿಮಠದ ಅಪಾಯಕಾರಿ ಕಟ್ಟಡ ನೆಲಸಮ ಕಾರ್ಯಾಚರಣೆ ಪ್ರಾರಂಭ – 600ಕ್ಕೂ ಹೆಚ್ಚು ಕಡೆ ಗುರುತು
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k