ಯಾದಗಿರಿ: ಈ ಸೋಲಿಗೆ ನಾನೇ ಕಾರಣ ಇದು ನನ್ನ ನಾಯಕತ್ವದಲ್ಲಿ ನಡೆದ ಚುನಾವಣೆ, ಹೀಗಾಗಿ ಈ ಸೋಲಿನ ಹೊಣೆಯನ್ನು ನಾನೇ ಹೊತ್ತುಕೊಳ್ಳುತ್ತೇನೆ ಎಂದು ಸುರಪುರ ಶಾಸಕ ರಾಜೂಗೌಡ ಹೇಳಿದ್ದಾರೆ.
ಈ ಕುರಿತಂತೆ ಪಬ್ಲಿಕ್ ಟಿವಿ ಜೊತೆಗೆ ಸುರಪುರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಕಕ್ಕೇರಿ ಪುರಸಭೆ ಸೋಲಿಗೆ ನಾನೇ ಕಾರಣ ಇದು ನನ್ನ ನಾಯಕತ್ವದಲ್ಲಿ ನಡೆದ ಚುನಾವಣೆ, ಹೀಗಾಗಿ ಈ ಸೋಲಿನ ಹೊಣೆಯನ್ನು ನಾನೇ ಹೊತ್ತುಕೊಳ್ಳುತ್ತೇನೆ. ಇದು ನನಗೆ ಎಚ್ಚರಿಕೆ ಗಂಟೆ ಅಂತ ಸೋಲಿನ ವಿಮರ್ಶೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: 4 ಬಾರಿ ಕೋವಿಡ್ ಲಸಿಕೆ ಪಡೆದಿದ್ದ ಮಹಿಳೆಗೆ ಕೊರೊನಾ ಪಾಸಿಟಿವ್
Advertisement
Advertisement
ಜನರ ನನ್ನ ಮೇಲೆ ಸಿಟ್ಟಾಗಿದ್ದಾರೆ ಇದನ್ನು ಅರಿತು ಇನ್ನು ಮುಂದೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇನೆ. ಜನರು ಎಷ್ಟು ಕೆಲಸ ಮಾಡಿದರೂ ನಮ್ಮ ಬಗ್ಗೆ ಒಲವು ಹೊಂದಿಲ್ಲ. ಒಂದಲ್ಲಾ, ಒಂದು ಕಾರಣಕ್ಕಾಗಿ ಸಿಟ್ಟಾಗಿದ್ದಾರೆ. ಜನರ ಅಸಮಾಧಾನಕ್ಕೆ ಕಾರಣ ಹುಡುಕಲು ಯತ್ನಿಸುತ್ತೇನೆ. ಬಳಿಕ ಅವರ ಸಮಸ್ಯೆಗೆ ಪರಿಹಾರ ನೀಡುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.
Advertisement
Advertisement
ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಡಿ.27ರಂದು ಚುನಾವಣೆ ನಡೆದಿತ್ತು. 58 ಪುರಸಭೆ, 57 ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಇದನ್ನೂ ಓದಿ: ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರತನ್ ಟಾಟಾ