ಚಿಕ್ಕೋಡಿ: ತುಂಬಿದ ಸಭೆಯಲ್ಲಿ ನರ್ಸ್‌ಗಳ (Nurse) ಸೌಂದರ್ಯ ಬಗ್ಗೆ ಕಾಂಗ್ರೆಸ್ ಶಾಸಕ ರಾಜು ಕಾಗೆ (Raju Kage) ಮಾತನಾಡಿದ ವಿಚಾರಕ್ಕೆ ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ (Apology) ಕೇಳುತ್ತೇನೆ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿದ್ದಾರೆ.
ಈ ಕುರಿತು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ ಕಾಂಗ್ರೆಸ್ (Congress) ಶಾಸಕ ರಾಜು ಕಾಗೆ ಕ್ಷಮೆ ಕೋರಿದ್ದಾರೆ. ಭಾನುವಾರ ಸಮಾರಂಭದಲ್ಲಿ ಮಾತನಾಡಿದ್ದು ಯಾರನ್ನೂ ಉದ್ದೇಶಿಸಿ ಅಲ್ಲ. ನಾನೇನೂ ನಾಲ್ಕು ಗೋಡೆಯಲ್ಲಿ ಮಾತನಾಡಿಲ್ಲ. ಸಾವಿರಾರು ಜನರಿದ್ದ ಸಭೆಯಲ್ಲಿ ಮಾತನಾಡಿದ್ದೇನೆ. ನಾನು ಜವಾಬ್ದಾರಿಯಿಂದ ಮಾತನಾಡಿದ್ದೇನೆ. ನಾನು ಹೇಳಿದ್ದು ವಯಸ್ಸು ಆಯ್ತಲ್ಲ, ಮುದುಕನಾದೆನಲ್ಲ ಅಂತಾ ಮನಸ್ಸಿಗೆ ನೋವಾಯ್ತು ಅಂತಾ ಹೇಳಿದೆ ಎಂದರು. ಇದನ್ನೂ ಓದಿ: ನರ್ಸ್‌ಗಳು, ಚೆಂದ ಚೆಂದ ಹುಡುಗಿಯರು ಇದ್ದಾರೆ.. ನನ್ನನ್ನು ಅಜ್ಜ ಅಂತಾರೆ: ರಾಜು ಕಾಗೆ ಬೇಸರ
Advertisement
Advertisement
ಶಬ್ಧದ ಅರ್ಥ ಸಾವಿರಾರೂ ರೀತಿಯಲ್ಲಿ ನೀವು ಅರ್ಥ ಮಾಡಿಕೊಳ್ಳಬಹುದು. ನನಗೆ ವಯಸ್ಸಾಯ್ತು ಅಂತಾ ಮಾನಸಿಕ ನೋವಾಯ್ತು. ಏನಾದರೂ ನನ್ನ ಮಾತಿನಿಂದ ನೋವಾಗಿದ್ರೆ ಕ್ಷಮೆ ಕೇಳುತ್ತಿದ್ದೇನೆ. ಯಾವುದೇ ಉದ್ದೇಶದಿಂದ ನಾನು ಮಾತನಾಡಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ರಾಜು ಕಾಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಶೋಭಾ ಕರಂದ್ಲಾಜೆ ಹುಟ್ಟುಹಬ್ಬ – ಮಾವುತ, ಕಾವಾಡಿಗಳಿಗೆ ಉಪಹಾರಕೂಟ ಏರ್ಪಡಿಸಿ ಆಚರಣೆ
Advertisement
Advertisement
ತುಂಬಿದ ಸಭೆಯಲ್ಲಿ ನರ್ಸ್‌ಗಳ ಸೌಂದರ್ಯದ ಬಗ್ಗೆ ಶಾಸಕ ರಾಜು ಕಾಗೆ ಮಾತನಾಡಿದ ವಿಡಿಯೋ ವೈರಲ್ ಆಗಿತ್ತು. ಬೆಳಗಾವಿ (Belagvi) ಜಿಲ್ಲೆ ಅಥಣಿ ತಾಲೂಕಿನ ಪಿ.ಕೆ.ನಾಗನೂರು ಗ್ರಾಮದಲ್ಲಿ ದಸರಾ ಮಹೋತ್ಸವದಲ್ಲಿ ಭಾಷಣ ಮಾಡಿದ್ದ ಅವರು, ಲಿವರ್ ಟ್ರಾನ್ಸ್‌ಪ್ಲಾಂಟ್ ಆದಾಗ ಒಂದು ತಿಂಗಳು ಆಸ್ಪತ್ರೆಯಲ್ಲಿದ್ದೆ. ವೈದ್ಯರು ದಿನವೂ ಬಂದು ಹೇಗಿದ್ದೀರಿ ಅಂತಾ ಕೇಳೋರು. ಆಗ ಆಸ್ಪತ್ರೆಯಲ್ಲಿ ಇದ್ದ ಡಾಕ್ಟರ್‌ಗೆ ನಾನು ಹೇಳಿದ್ದೆ. ನನ್ನ ಆರೋಗ್ಯಕ್ಕೆ ಏನೂ ಆಗಿಲ್ಲ. ನನ್ನ ಆಪರೇಷನ್ ಸಕ್ಸಸ್ ಮಾಡಿದ್ದೀರಿ, ಎಲ್ಲಾ ಆಗಿದೆ. ಆದರೆ ನಿಮ್ಮಲ್ಲಿ ನರ್ಸ್ಗಳು ಚೆಂದ ಚೆಂದ ಹುಡುಗಿಯರು ಇದ್ದಾರೆ. ಅವರು ನನಗೆ ಅಜ್ಜ ಅನ್ನುತ್ತಿದ್ದಾರೆ. ಅದು ನನಗೆ ಮಾನಸಿಕ ಹಿಂಸೆ ಆಗಿದೆ ಎಂದಿದ್ದೆ ಎಂದು ಶಾಸಕ ರಾಜು ಕಾಗೆ ಹೇಳಿದ್ದರು. ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಕೌಂಟ್‍ಡೌನ್?- ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿ
Web Stories