ಸಾಕಷ್ಟು ಸಿನಿಮಾಗಳಲ್ಲಿ ಸಂಚಲನ ಮೂಡಿಸಿರುವ ಹಾಸ್ಯ ನಟ ರಾಜು ಶ್ರೀವಾಸ್ತವ್ ಅವರಿಗೆ ಹೃದಯಾಘಾತವಾಗಿದೆ. ಜಿಮ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದು ಈಗ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಭಿನ್ನ ಪಾತ್ರಗಳ ಮೂಲಕ ಚಿತ್ರರಂಗದಲ್ಲಿ ಸಂಚಲನ ಮೂಡಿಸಿರುವ ಜನಪ್ರಿಯ ಹಾಸ್ಯ ನಟ ರಾಜು ಶ್ರೀವಾಸ್ತವ್ ಅವರಿಗೆ ಹೃದಯಾಘಾತ ಆಗಿರುವುದು ನಿಜ. ಜಿಮ್‌ನಲ್ಲಿ ಅವರು ಕಸರತ್ತು ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಅವರು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. ಇದನ್ನೂ ಓದಿ:ಗುರೂಜಿಯನ್ನ ತಳ್ಳಿದ್ರಾ ಉದಯ್? ಬಿಗ್ ಬಾಸ್ ಮನೆಯಲ್ಲಿ ಬಿಗ್ ವಾರ್
ದಕ್ಷಿಣ ದೆಹಲಿಯಲ್ಲಿರುವ ಜಿಮ್‌ನಲ್ಲಿ ರಾಜು ಅವರು ವರ್ಕೌಟ್ ಮಾಡುತ್ತಿದ್ದರು. ಅವರಿಗೆ ಏನೋ ಸರಿ ಇಲ್ಲ ಎನಿಸಿದೆ. ಆ ಸಂದರ್ಭದಲ್ಲೇ ರಾಜು ನೆಲಕ್ಕೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರು ಬೇಗ ಗುಣಮುಖರಾಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ಇತ್ತೀಚೆಗೆ ಹಲವು ನಟರಿಗೆ ಹೃದಯಾಘಾತವಾಗಿದೆ. ಇದೇ ಸಂದರ್ಭದಲ್ಲಿ ರಾಜು ಅವರಿಗೂ ಹಾರ್ಟ್ ಅಟ್ಯಾಕ್ ಆಗಿದ್ದು, ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಆತಂಕ ಮೂಡಿಸಿದೆ.
Live Tv
[brid partner=56869869 player=32851 video=960834 autoplay=true]