ಬೆಂಗಳೂರು: ಬಿಜೆಪಿ (BJP) ನೀಡಿದ 1 ಪುಟದ ನೋಟಿಸ್‌ಗೆ ನಾವು 170 ಪುಟಗಳ ಉತ್ತರ ನೀಡಿದ್ದೇವೆ ಎಂದು ರೆಬೆಲ್ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ (ST Somashekar) ಹೇಳಿದ್ದಾರೆ.
ಸದಾಶಿವನಗರದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮಗೆ ಬಿಜೆಪಿಯವರು ನೀಡಿದ್ದ ನೋಟಿಸ್‌ಗೆ ದೀರ್ಘ ಉತ್ತರ ನೀಡಿದ್ದೇವೆ. ಯಾವ್ಯಾವ ರಾಜ್ಯದಲ್ಲಿ ಕೋರ್ಟ್ ತೀರ್ಪು ಏನು ಬಂದಿದೆ? ಯಾವ್ಯಾವ ರಾಜ್ಯದಲ್ಲಿ ಬಿಜೆಪಿ ಇಂತಹ ವಿಚಾರದಲ್ಲಿ ಯಾವ ನಿರ್ಧಾರ ಕೈಗೊಂಡಿದೆ? ಎಲ್ಲಾ ದಾಖಲೆ ಸೇರಿಸಿ 170 ಪುಟಗಳ ಉತ್ತರ ಕೊಟ್ಟಿದ್ದೇವೆ ಎಂದು ತಿಳಿಸಿದರು.
Advertisement
Advertisement
ಶಿವರಾಂ ಹೆಬ್ಬಾರ್ (Shivaram Hebbar) ಪ್ರತಿಕ್ರಿಯಿಸಿ, ಸೋಮಶೇಖರ್ ಅವರದ್ದು ಅಡ್ಡ ಮತದಾನ. ನನ್ನದು ಮತದಾನಕ್ಕೆ ಗೈರು ನೋಟಿಸ್‌ಗೆ ಬೇರೆ ರೀತಿಯ ಉತ್ತರ ಕೊಟ್ಟಿದ್ದೇನೆ. ನನ್ನದು ಸೋಮಶೇಖರ್ ಉತ್ತರಕ್ಕಿಂತ 2 ಪುಟ ಕಡಿಮೆ ಇರಬಹುದು. ಆದರೆ ಎಲ್ಲಾ ದಾಖಲೆ ಸಹಿತ ಉತ್ತರ ಕೊಟ್ಟಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿಯಲ್ಲೇ ಇದ್ದು ಶುದ್ದೀಕರಣದ ಕಡೆ ನನ್ನ ನಡೆ: ಡಿವಿಎಸ್ ಘೋಷಣೆ
Advertisement
Advertisement
ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಭೇಟಿಗೆ ಸದಾಶಿವನಗರ ನಿವಾಸಕ್ಕೆ ಬಿಜೆಪಿ ರೆಬೆಲ್ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಒಂದೇ ಕಾರಿನಲ್ಲಿ ಆಗಮಿಸಿದ್ದರು. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಡಿಸಿಎಂ ಭೇಟಿ ಮಾಡಿದ್ದೇವೆ ಎಂದು ಎಸ್‌ಟಿ ಸೋಮಶೇಖರ್ ಭೇಟಿ ಬಳಿಕ ಮಾಧ್ಯಮಗಳಿಗೆ ತಿಳಿಸಿದರು. ಇದನ್ನೂ ಓದಿ: ಡಬಲ್ ಮರ್ಡರ್ ಕೇಸ್ – ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗ!
ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Election) ಸೋಮಶೇಖರ್ ಅಡ್ಡ ಮತದಾನ ಮಾಡಿದ್ದರೆ ಶಿವರಾಂ ಹೆಬ್ಬಾರ್ ಮತದಾನಕ್ಕೆ ಗೈರು ಹಾಜರಿ ಹಾಕಿದ್ದರು. ವಿಪ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿತ್ತು.