Connect with us

Bengaluru City

ರಾಜ್ಯ ಬಿಜೆಪಿಯಿಂದ ರಾಜ್ಯಸಭೆಗೆ ಮೂವರ ಹೆಸರು ಶಿಫಾರಸು

Published

on

ಬೆಂಗಳೂರು: ರಾಜ್ಯಸಭಾ ಚುನಾವಣಾ ಕಣ ರಂಗೇರಿದೆ. ಈಗಾಗ್ಲೇ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿ ಫೈನಲ್ ಆಗಿದೆ. ಬಿಜೆಪಿ ಅಭ್ಯರ್ಥಿ ಆಯ್ಕೆ ಮಾತ್ರ ಬಾಕಿಯಿದೆ.

ಬೆಂಗಳೂರಿನಲ್ಲಿ ಇಂದು ಸಂಜೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮೂವರ ಹೆಸರುಗಳನ್ನು ಬಿಜೆಪಿ ಹೈಕಮಾಂಡ್ ಶಿಫಾರಸು ಮಾಡಲಾಗಿದೆ. ಹಾಲಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಅಥವಾ ರಮೇಶ್ ಕತ್ತಿ, ಮತ್ತೊಂದು ಸ್ಥಾನಕ್ಕೆ ಉದ್ಯಮಿ ಪ್ರಕಾಶ್ ಶೆಟ್ಟಿ ಹೆಸರನ್ನು ರಾಜ್ಯ ಬಿಜೆಪಿ ಫೈನಲ್ ಮಾಡಿದೆ.

ರಾಜ್ಯದ ಶಿಫಾರಸುಗಳನ್ನು ಆಧರಿಸಿ ಬಿಜೆಪಿ ಹೈಕಮಾಂಡ್ ಸೋಮವಾರದೊಳಗೆ ತೀರ್ಮಾನ ಕೈಗೊಳ್ಳಲಿದೆ. ಕೋರ್ ಕಮಿಟಿ ಸಭೆಗೂ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಸಭೆಗಳ ಮೇಲೆ ಸಭೆ ನಡೆಸಲಾಗಿತ್ತು. ಈ ವೇಳೆ ಉತ್ತರ ಕರ್ನಾಟಕ ನಾಯಕರ ಜೊತೆ ಸಿಎಂ ಚರ್ಚೆ ನಡೆಸಿದ್ದರು.

ಇತ್ತ ಕಾಂಗ್ರೆಸ್ ಪಾಳಯದಲ್ಲೂ ಎಲೆಕ್ಷನ್‍ಗೆ ಭರ್ಜರಿಯಾಗೇ ತಯಾರಿ ನಡೆಯುತ್ತಿದೆ. ರಾಜ್ಯಸಭೆ ಚುನಾವಣೆ ಹಾಗೂ ವಿಧಾನ ಪರಿಷತ್ ಷುನಾವಣೆ ಹಿನ್ನೆಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಸಭೆ ಕರೆದಿದ್ದಾರೆ. ಸೋಮವಾರ ಬೆಳಗ್ಗೆ 9 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಸಿಎಲ್‍ಪಿ ಮೀಟಿಂಗ್ ನಡೆಯಲಿದೆ.