ಬೆಂಗಳೂರು: ಕರ್ನಾಟಕದಲ್ಲಿ ಸಲ್ಲಿಕೆಯಾದ ರಾಜ್ಯಸಭಾ ಚುನಾವಣೆಯ ಎಲ್ಲ ನಾಮಪತ್ರಗಳು ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿ ಮತ್ತು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದರು.
ಕರ್ನಾಟಕ ವಿಧಾನ ಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ @MansoorKhanINC ಅವರು ಕೆಪಿಸಿಸಿ ಅಧ್ಯಕ್ಷರಾದ @DKShivakumar, ವಿಧಾನಸಭಾ ವಿರೋಧ ಪಕ್ಷದ ನಾಯಕರಾದ @siddaramaiah ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. pic.twitter.com/s5GyEEq4Qm
— Karnataka Congress (@INCKarnataka) May 30, 2022
Advertisement
ನಾಮಪತ್ರ ಸಲ್ಲಿಕೆ ಕುರಿತು ಮಾಹಿತಿ ಕೊಟ್ಟ ಅವರು, ಕರ್ನಾಟಕದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಸ್ವೀಕೃತವಾಗಿರುವ ಭಾರತೀಯ ಜನತಾ ಪಕ್ಷದ ಮೂವರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಇಬ್ಬರು ಹಾಗೂ ಜಾತ್ಯತೀತ ಜನತಾದಳದ ಓರ್ವ ಅಭ್ಯರ್ಥಿ ನಾಮಪತ್ರಗಳೂ ಒಳಗೊಂಡಂತೆ ಎಲ್ಲ ಆರು ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಹಾಗೂ ಅಂಗೀಕೃತವಾಗಿವೆ ಎಂದು ವಿವರಿಸಿದರು. ಇದನ್ನೂ ಓದಿ: ರಾಮಮಂದಿರ ಸುತ್ತಮುತ್ತಲಿನ ಮದ್ಯ ಮಾರಾಟಗಾರರ ಪರವಾನಗಿ ರದ್ದು: ಯುಪಿ ಸರ್ಕಾರ
Advertisement
ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರ ಉಪಸ್ಥಿತಿಯಲ್ಲಿ ಇಂದು ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಗಳಾಗಿ ಶ್ರೀ @Jaggesh2 ಮತ್ತು ಶ್ರೀ ಲೆಹರ್ ಸಿಂಗ್ ಸಿರೋಯಾ ಅವರು ನಾಮಪತ್ರ ಸಲ್ಲಿಸಿದರು. pic.twitter.com/SYXNFhO5QC
— BJP Karnataka (@BJP4Karnataka) May 31, 2022
Advertisement
ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್, ಲೆಹರ್ ಸಿಂಗ್, ಕಾಂಗ್ರೆಸ್‍ನಿಂದ ಹಾಲಿ ಸದಸ್ಯ ಜೈರಾಂ ರಮೇಶ್ ಮತ್ತು ಮನ್ಸೂರ್ ಖಾನ್ ಹಾಗೂ ಜೆಡಿಎಸ್‍ನಿಂದ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದ್ದು, ಕ್ರಮಬದ್ಧವಾಗಿದೆ. ನಾಮಪತ್ರ ವಾಪಸ್ ಪಡೆಯಲು ಶುಕ್ರವಾರ ಕೊನೆಯ ದಿನ ಎಂದು ಹೇಳಿದರು.