ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ 3 ಸ್ಥಾನ ಗೆಲ್ಲಲು ಬಿಜೆಪಿ – ಕಾಂಗ್ರೆಸ್ ಕಸರತ್ತು ನಡೆಸುತ್ತಿವೆ. ಈ ಸಂಬಂಧ ಇಂದು ಸರಣಿ ಸಭೆ ನಡೆಸಿದ ಬಿಜೆಪಿ ಚುನಾವಣಾ ಉಸ್ತುವಾರಿ, ಕೇಂದ್ರ ಸಚಿವ ಕಿಶನ್ ರೆಡ್ಡಿ, 3ನೇ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ರಣತಂತ್ರ ರೂಪಿಸಿದ್ದಾರೆ.
Advertisement
ಸಚಿವ ಆರ್.ಆಶೋಕ್ ಮೂಲಕ ಜೆಡಿಎಸ್, ಕಾಂಗ್ರೆಸ್ ಪಕ್ಷದ ಅಸಮಾಧಾನಿತರ ಮತ ಸೆಳೆಯಲು ಪ್ರಯತ್ನ ನಡೆಸಿದ್ದಾರೆ. ಸಚಿವ ಅಶೋಕ್ ಜೊತೆಗೆ ಕಿಶನ್ ರೆಡ್ಡಿ ಪ್ರತ್ಯೇಕ ಸಭೆ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ಮನೆಯಲ್ಲೂ ಲಂಚ್ ಮೀಟಿಂಗ್ ನಡೆದಿದೆ. ಇದನ್ನೂ ಓದಿ: ಅಂಬೇಡ್ಕರ್ `ಸಂವಿಧಾನ ಶಿಲ್ಪಿ’ ಬಿರುದು ಕೈಬಿಟ್ಟ ರೋಹಿತ್ ಚಕ್ರತೀರ್ಥ ಸಮಿತಿ – ಎಲ್ಲೆಡೆ ಆಕ್ರೋಶ
Advertisement
ಇನ್ನೂ ಕೆಪಿಸಿಸಿ ಅಧ್ಯಕ್ಷರು, ನಮ್ಮ ಪಕ್ಷಕ್ಕೆ ಆತ್ಮಸಾಕ್ಷಿಯ ಮತಗಳು ದಕ್ಕಲಿವೆ. ನಾವೇ ಗೆಲ್ಲೋದು ಎಂದಿದ್ದಾರೆ. ಇದೇ ಮಾತನ್ನು ಸಿದ್ದರಾಮಯ್ಯ ಕೂಡ ಹೇಳಿದ್ರು. ಇದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ಕೂಡ ನೀಡಿದ್ದಾರೆ.
Advertisement
Advertisement
ಈ ಕುರಿತಂತೆ ಮಾತನಾಡಿರುವ ಸಚಿವ ಆರ್.ಅಶೋಕ್, 2-3ನೇ ಪ್ರಾಶಸ್ತ್ಯದ ಮತಗಳ ಆಧಾರದಲ್ಲಿ ಬಿಜೆಪಿ 3ನೇ ಸ್ಥಾನವನ್ನು ಸುಲಭವಾಗಿ ಗೆಲ್ಲಲಿದೆ. ಸಿಎಂ ಬೊಮ್ಮಾಯಿ ಕೂಡ ಕ್ರಾಸ್‌ವೋಟ್ ಸುಳಿವು ನೀಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊಸಪೇಟೆಯಲ್ಲಿ 7.4 ಅಡಿ ಎತ್ತರದ ಪುನೀತ್ ಪ್ರತಿಮೆ ಅನಾವರಣ
ನಮ್ಮ ಬಳಿ ಅಗತ್ಯ ಮತಗಳು ಇರೋದಕ್ಕಾಗಿಯೇ 3ನೇ ಅಭ್ಯರ್ಥಿ ಹಾಕಿದ್ದೇವೆ. ನೂರಕ್ಕೆ ನೂರರಷ್ಟು ನಮ್ಮ ಮೂರು ಅಭ್ಯರ್ಥಿಗಳು ಆಯ್ಕೆ ಆಗುತ್ತಾರೆ. ಈಗಾಗಲೇ ಅಭ್ಯರ್ಥಿಗಳನ್ನು ಗೆಲ್ಲಿಸಲು ನಮ್ಮ ನಾಯಕರೆಲ್ಲರೂ ಸೇರಿ ಫೀಲ್ಡಿಗೆ ಇಳಿದಿದ್ದೇವೆ. ನಿಜವಾಗಿಯೂ ಮತದಾನ ನಡೆಯೋದು ಓಟ್ ವ್ಯಾಲ್ಯೂ ಮೇಲೆ. 2ನೇ ಪ್ರಾಶಸ್ತ್ಯದ ಮತ, 3ನೇ ಪ್ರಾಶಸ್ತ್ಯ ಮತ ಮೌಲ್ಯಗಳ ಮೇಲೆ ಚುನಾವಣೆ ನಡೆಯೋದು. ನಮಗೆ 122 ಮತಗಳು ಇವೆ. ಸುಲಭವಾಗಿ ಗೆಲ್ಲುವ ವಿಶ್ವಾಸ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.