ಬೆಂಗಳೂರು: ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರ ಮತ ತಿರಸ್ಕೃತವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷಗಳು ವಿಪ್ ಜಾರಿ ಮಾಡಿದ್ದರಿಂದ ಶಾಸಕರು ಕಡ್ಡಾಯವಾಗಿ ಮತ ಹಾಕಿದ ಬಳಿಕ ತಾನು ಯಾರಿಗೆ ಮತ ಹಾಕಿದ್ದೇನೆ ಎನ್ನುವುದನ್ನು ಕೊಠಡಿಯಲ್ಲಿ ಕುಳಿತಿದ್ದ ತನ್ನ ಪಕ್ಷದ ಏಜೆಂಟ್‌ಗೆ ತೋರಿಸಬೇಕಾಗುತ್ತದೆ. ಇದನ್ನೂ ಓದಿ: ಬೇರೆಯವರು ತಾಳಿಕಟ್ಟಿದವರ ಬಳಿ ಹೋಗಿ ಲವ್ ಲೆಟರ್ ಬರೆದರೆ ಆಗುತ್ತಾ : ಸಿಎಂ ಇಬ್ರಾಹಿಂ
ಇಂದು ನಡೆದ ಚುನಾವಣೆಯಲ್ಲಿ ರೇವಣ್ಣ ಮತವನ್ನು ಹಾಕಿದ ಬಳಿಕ ಡಿಕೆಶಿಗೆ ತೋರಿಸಿದ್ದಾರೆ. ಜೆಡಿಎಸ್ ಶಾಸಕರಿಗೆ ಮಾತ್ರ ತೋರಿಸಬೇಕಾದ ರೇವಣ್ಣ ಡಿಕೆ ಶಿವಕುಮಾರ್ ಅವರಿಗೆ ಪೇಪರ್ ತೋರಿಸಿದ್ದಕ್ಕೆ ಬಿಜೆಪಿ ಏಜೆಂಟರು ಕೊಠಡಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಬಿಜೆಪಿ ನಾಯಕರು ರೇವಣ್ಣ ಅವರ ಮತವನ್ನು ತಿರಸ್ಕೃತಗೊಳಿಸಬೇಕೆಂದು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಮೊದಲ ಅಡ್ಡಮತದಾನ
ಈ ಬಗ್ಗೆ ಪ್ರತಿಕ್ರಿಯಿಸಿದ ರೇವಣ್ಣ, ನಾನು ಯಾಕೆ ಮತ ತೋರಿಸಿ ಹಾಕಲಿ. ವಿಡಿಯೋ ಇರುತ್ತೆ ಬೇಕಾದ್ರೆ ನೋಡಿಕೊಳ್ಳಲಿ. ಸೋಲುವ ಭೀತಿಯಿಂದ ಬಿಜೆಪಿಯವರು ಹಾಗೆ ಹೇಳ್ತಿದ್ದಾರೆ. ನಾನು ಪುಟ್ಟರಾಜು ಅವರಿಗೆ ತೋರಿಸಿ ಹಾಕಿದ್ದಾರೆ. ನಾನು ಡಿಕೆ ಶಿವಕುಮಾರ್ ಅವರಿಗೆ ಯಾಕೆ ತೋರಿಸಲಿ. ಅಲ್ಲೇ ಯಾಕೆ ದೂರು ಕೊಡಲಿಲ್ಲ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.