ಬೆಳಗಾವಿ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ (Eranna Kadadi) ಕಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಅವರ ಬೆಂಬಲಿಗರು ಮುತ್ತಿಗೆ ಹಾಕಿರುವ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿ ವಿವಿಧ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದವು. ಈ ವೇಳೆ ಸತೀಶ್ ಜಾರಕಿಹೊಳಿ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಬಿಜೆಪಿ ಪಕ್ಷದ ವಿರುದ್ಧ ಪ್ರತಿಭಟನೆ ಮಾಡಿದ್ದಲ್ಲದೇ ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Advertisement
Advertisement
ಪ್ರತಿಭಟನೆ ವೇಳೆ ಇದೇ ಮಾರ್ಗವಾಗಿ ತೆರಳುತ್ತಿದ್ದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರಿಗೆ ದಲಿತಪರ ಸಂಘಟನೆಯ ಕಾರ್ಯಕರ್ತರು ಸುತ್ತುವರಿದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಪ್ರತಿಭಟನೆನಿರತರನ್ನು ತೆರವುಗೊಳಿಸಲು ಪೊಲೀಸರು ಹರಸಾಹಸಪಟ್ಟರು. ಇದನ್ನೂ ಓದಿ: ಕೆಂಪೇಗೌಡ ಪೇಟದಲ್ಲಿ ಕಂಗೊಳಿಸಿದ ಪ್ರಧಾನಿ ಮೋದಿ
Advertisement
Advertisement
ಕಳೆದೊಂದು ವಾರದ ಹಿಂದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಿಪ್ಪಾಣಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂ ಶಬ್ದದ ಮೂಲವನ್ನು ಕೆದಕಿ ಭಾಷಣ ಮಾಡಿದ್ದರು. ಸತೀಶ್ ಜಾರಕಿಹೊಳಿ ಹೇಳಿಕೆ ವಿರುದ್ಧ ದೇಶಾದ್ಯಂತ ಬಿಜೆಪಿ ಪಕ್ಷದ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಇದಲ್ಲದೇ ಕರ್ನಾಟಕ ರಾಜ್ಯದಲ್ಲೂ ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಮಣಿದ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆ ಹಿಂಪಡೆದು ವಿಷಾದ ವ್ಯಕ್ತಪಡಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಹೇಳಿಕೆ ವಿರುದ್ಧ ತನಿಖೆ ಮಾಡುವಂತೆ ಪತ್ರ ಬರೆದಿದ್ದರು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ಆದಿತ್ಯ ಠಾಕ್ರೆ