ಬೆಂಗಳೂರು: ರಾಜ್ಯಸಭೆ ಮತ್ತು ವಿಧಾನಪರಿಷತ್‍ಗೆ ಪಕ್ಷದ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ಭಾನುವಾರ ನವದೆಹಲಿಯಲ್ಲಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ವರಿಷ್ಠರ ಬುಲಾವ್ ಮೇರೆಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಸಂಜೆ ದೆಹಲಿಗೆ ದೌಡಾಯಿಸಲಿದ್ದಾರೆ. ಇತ್ತೀಚೆಗೆ ಬಿಜೆಪಿ ರಾಜ್ಯ ಕೋರ್ ಕಮಿಟಿ, ಪಕ್ಷದ ಅಭ್ಯರ್ಥಿಗಳ ಆಕಾಂಕ್ಷಿತರ ಪಟ್ಟಿಯನ್ನು ವರಿಷ್ಠರಿಗೆ ರವಾನಿಸಿತ್ತು. ಪರಿಷತ್‍ನ ನಾಲ್ಕು ಸ್ಥಾನಗಳಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಸೇರಿದಂತೆ 30 ಮಂದಿಯ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ. ಇದನ್ನೂ ಓದಿ: ಬಿಪಿಎಲ್ ಇರಲಿ ಯಾವುದೇ ಕಾರ್ಡ್ ಇದ್ರೂ ಸರ್ಕಾರ ಪರಿಹಾರ ಕೊಡ್ಬೇಕು: ಸಿದ್ದರಾಮಯ್ಯ
Advertisement
Advertisement
ಅದೇ ರೀತಿ ರಾಜ್ಯಸಭೆಯ ಎರಡು ಸ್ಥಾನಗಳಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಾಲಿ ಸದಸ್ಯ ಕೆಸಿ ರಾಮಮೂರ್ತಿ, ಪಕ್ಷದ ಉಪಾಧ್ಯಕ್ಷ ನಿರ್ಮಲ್ ಸುರಾನ, ಲೆಹರ್ ಸಿಂಗ್, ಉದ್ಯಮಿಗಳಾದ ಪ್ರಕಾಶ್ ಶೆಟ್ಟಿ, ಲಹರಿ ವೇಲು ಮೊದಲಾದವರ ಹೆಸರನ್ನು ಕಳುಹಿಸಿಕೆೊಟ್ಟಿದೆ. ಇವೆಲ್ಲವನ್ನೂ ಪರಿಶೀಲಿಸಿ ಭಾನುವಾರ ಪಕ್ಷದ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ. ಅದಕ್ಕೂ ಮುನ್ನ ಸಿಎಂ ಜೊತೆ ವರಿಷ್ಠರ ಒಂದು ಸುತ್ತು ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ. ನಾಳೆ ತಡ ರಾತ್ರಿ ಸಿಎಂ ಬೊಮ್ಮಾಯಿ ದಾವೋಸ್‍ಗೆ ಪ್ರಯಾಣ ಬೆಳೆಸಲಿದ್ದು, ಅದಕ್ಕೂ ಮುನ್ನ ಸಮಾಲೋಚನೆಗೆ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.