ಜೈಪುರ: ಕೊನೆ ಕ್ಷಣದಲ್ಲಿ ಬಿಜೆಪಿ ತನ್ನ ಶಾಸಕರನ್ನು ಸೆಳೆಯಬಹುದು ಎಂಬ ಭೀತಿಯಿಂದ ರಾಜಸ್ಥಾನ ಸರ್ಕಾರ ಜೈಪುರ ಜಿಲ್ಲೆಯ ಅಮೇರ್ ಪ್ರದೇಶದಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.
ಉದಯಪುರದಿಂದ ಹಿಂದಿರುಗಿದ ನಂತರ ಕೆಲ ಕಾಂಗ್ರೆಸ್ ಶಾಸಕರು ಗುರುವಾರ ರಾತ್ರಿ 9 ಗಂಟೆಯಿಂದ ಶುಕ್ರವಾರ ಬೆಳಗ್ಗೆ 9 ಗಂಟೆಯವರೆಗೆ ಜೈಪುರದ ಅಮೇರ್ ಪ್ರದೇಶದಲ್ಲಿ ತಂಗಿದ್ದಾರೆ. ಹೀಗಾಗಿ ಗುರುವಾರ ರಾತ್ರಿ 9 ಗಂಟೆಯಿಂದ ಶುಕ್ರವಾರ ಬೆಳಗ್ಗೆ 9 ಗಂಟೆಯವರೆಗೆ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಗೋಲ್ಡೀ ಬ್ರಾರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ – ಸಿಧು ಹತ್ಯೆ ಕೇಸ್‌ನಲ್ಲಿ ಅಲ್ಲ
Advertisement
Advertisement
ಶುಕ್ರವಾರ ಸಂಸತ್ತಿನ ಮೇಲ್ಮನೆಗೆ ಮತದಾನ ನಡೆಯಲಿದೆ. ಹೀಗಾಗಿ ಎಲ್ಲಾ ಕಾಂಗ್ರೆಸ್ ಶಾಸಕರನ್ನು ಅಮೇರ್ ಪ್ರದೇಶದ ಹೋಟೆಲ್ ಲೀಲಾಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಆದರೆ ಧ್ವನಿ ಕರೆಗಳು ಮತ್ತು ಬ್ರಾಡ್‍ಬ್ಯಾಂಡ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿಲ್ಲ ಎಂದು ತಿಳಿಸಿದ್ದಾರೆ.
Advertisement
Advertisement
ಶುಕ್ರವಾರ ನಡೆಯಲಿರುವ ರಾಜ್ಯಸಭಾ ಚುನಾವಣೆ ಮತದಾನಕ್ಕೂ ಮುನ್ನ ರಾಜಸ್ಥಾನದ ಕಾಂಗ್ರೆಸ್ ಶಾಸಕರನ್ನು ಉದಯಪುರದಿಂದ ಜೈಪುರಕ್ಕೆ ಸ್ಥಳಾಂತರಿಸಲಾಯಿತು ಮತ್ತು ಸಂಸತ್ತಿನ ಮೇಲ್ಮನೆಯಲ್ಲಿ ಮೂರು ಸ್ಥಾನಗಳನ್ನು ಪಡೆಯಲು ಕಾಂಗ್ರೆಸ್ ಸರ್ಕಸ್ ನಡೆಸುತ್ತಿದೆ.
ಬಲಾಬಲ ಹೇಗಿದೆ?
ವಿಧಾನಸಭೆಯಲ್ಲಿ ಕಾಂಗ್ರೆಸ್ 108 ಶಾಸಕರ ಬಲವನ್ನು ಹೊಂದಿದ್ದು ನಾಲ್ಕು ಸ್ಥಾನಗಳ ಪೈಕಿ ಎರಡನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಅಭ್ಯರ್ಥಿ ಗೆಲ್ಲಲು 41 ಮತಗಳ ಅಗತ್ಯವಿದ್ದು 26 ಹೆಚ್ಚುವರಿ ಮತಗಳಿದ್ದು 3ನೇ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲು 15 ಮತಗಳ ಕೊರತೆಯಿದೆ. ಇದನ್ನೂ ಓದಿ: ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ – ಬಿಎಸ್‍ವೈ ಆಪ್ತ ಎದುರೇ ಕಲ್ಲುತೂರಾಟ
ಬಿಜೆಪಿ 71 ಶಾಸಕರ ಬಲವನ್ನು ಹೊಂದಿದ್ದು 1 ಸ್ಥಾನವನ್ನು ಸುಲಭವಾಗಿ ಗೆಲ್ಲಲಿದೆ. ನಂತರ 30 ಹೆಚ್ಚುವರಿ ಮತಗಳಿವೆ. ಹೀಗಾಗಿ ಅಡ್ಡ ಮತದಾನ ಭೀತಿ ಕಾಂಗ್ರೆಸ್ಸಿಗಿದೆ. 13 ಪಕ್ಷೇತರ ಶಾಸಕರ ಪೈಕಿ 10 ಮಂದಿ ಜೊತೆ ಸಿಎಂ ಗೆಹ್ಲೋಟ್ ಮಾತನಾಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.