ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ನನಗೆ ಟಿಕೆಟ್ ಕೊಡಬೇಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾಗೆ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಪತ್ರ ಬರೆದಿದ್ದಾರೆ.
ರಾಜ್ಯಸಭೆ ಚುನಾವಣೆಗೆ ತಮಗೆ ಟಿಕೆಟ್ ಕೊಡದಂತೆ ಪತ್ರದಲ್ಲಿ ಸುರಾನಾ ಮನವಿ ಮಾಡಿಕೊಂಡಿದ್ದಾರೆ. ರಾಜ್ಯಸಭೆ ಚುನಾವಣೆಗೆ ರಾಜ್ಯ ಕೋರ್ ಕಮಿಟಿಯಿಂದ ಸುರಾನಾ ಹೆಸರು ಶಿಫಾರಸು ಮಾಡಲಾಗಿತ್ತು. ಆದರೆ ವಿಧಾನ ಪರಿಷತ್ ಮೇಲೆ ಕಣ್ಣಿಟ್ಟಿದ್ದ ನಿರ್ಮಲ್ ಕುಮಾರ್ ಸುರಾನಾ ಅವರು ಇದೀಗ ನನಗೆ ರಾಜ್ಯಸಭೆ ಟಿಕೆಟ್ ಬೇಡ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜ್ಞಾನದೀವಿಗೆ ಅಭಿಯಾನಕ್ಕೆ ಸಾರ್ಥಕ ಭಾವ – SSLC ಯಲ್ಲಿ 621 ಅಂಕ ಗಳಿಸಿದ ನಿರಾಶ್ರಿತೆ
ಪರಿಷತ್ ಗೂ ನಿರ್ಮಲ್ ಕುಮಾರ್ ಸುರಾನಾ ಹೆಸರು ಶಿಫಾರಸು ಮಾಡಲಾಗಿತ್ತು. ಆದರೆ ವಿಧಾನಪರಿಷತ್ ಚುನಾವಣೆಯಲ್ಲಿ ಸುರಾನಾಗೆ ಟಿಕೆಟ್ ಸಿಕ್ಕಿರಲಿಲ್ಲ. ಸುರಾನಾಗೆ ರಾಜ್ಯಸಭೆಗೆ ಟಿಕೆಟ್ ಸಿಗುವ ಸಾಧ್ಯತೆ ಇತ್ತು. ಆದರೆ ಮೂಲಗಳ ಪ್ರಕಾರ ಪರಿಷತ್‍ಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸುರಾನಾ ಬೇಸರಗೊಂಡಿದ್ದರು. ಹೀಗಾಗಿ ರಾಜ್ಯಸಭೆಗೂ ಆಯ್ಕೆ ಬೇಡ ಎಂದು ಅವರು ಹೇಳಿದ್ದಾರೆ.
ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ಸುರಾನಾ ಅವರು, ಪಕ್ಷದ ಸಂಘಟನೆ ಕೆಲಸದ ಒತ್ತಡದಿಂದ ಟಿಕೆಟ್ ನಿರಾಕರಿಸಿರುವ ಕಾರಣವನ್ನು ನೀಡಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.