ಬೆಂಗಳೂರು: 2023-24ನೇ ಸಾಲಿನ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ (Rajya Sangeetha Vidwan Award) ಬೆಂಗಳೂರಿನ ಡಾ.ಪದ್ಮಮೂರ್ತಿ (Dr.Padma Murthy) ಅವರು ಭಾಜನರಾಗಿದ್ದಾರೆ.
ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಅಕ್ಟೋಬರ್ 15ರಂದು ಮೈಸೂರು ಅರಮನೆ (Mysuru Palace) ಮುಖ್ಯವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಪ್ರಶಸ್ತಿ 5 ಲಕ್ಷ ರೂ. ಬಹುಮಾನ ಮೊತ್ತವನ್ನು ಒಳಗೊಂಡಿದೆ. ಅಲ್ಲದೇ ಸರಸ್ವತಿ ವಿಗ್ರಹದ ಸ್ಮರಣಿಕೆ, ಫಲತಾಂಬೂಲ, ಶಾಲು ಮತ್ತು ಹಾರವನ್ನು ಒಳಗೊಂಡಿದೆ. ಇದನ್ನೂ ಓದಿ: ಬೆಂಗಳೂರು ಬಿಜೆಪಿ ಶಾಸಕರ ಅನುದಾನಕ್ಕೆ ಕತ್ತರಿ ಹಾಕಿದ ಕಾಂಗ್ರೆಸ್ – ಯಾರ ಕ್ಷೇತ್ರಕ್ಕೆ ಎಷ್ಟು ಹಂಚಿಕೆ?
Advertisement
Advertisement
2023-24ನೇ ಸಾಲಿನ ರಾಜ್ಯ ಸಂಗೀತ ವಿದ್ವಾನ್ ಗೌರವ ಪ್ರಶಸ್ತಿಗೆ ಬೆಂಗಳೂರಿನ ಡಾ.ಪದ್ಮಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ (Shivaraj Tangadagi) ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಪಟಾಕಿ ಬ್ಯಾನ್: ಸಿದ್ದರಾಮಯ್ಯ
Advertisement
Advertisement
91 ವರ್ಷದ ಡಾ.ಪದ್ಮಮೂರ್ತಿಯವರು ಕರ್ನಾಟಕ ಶಾಸ್ತ್ರೀಯ ಸಂಗೀತ (Carnatic Classical Music) ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಡಾ.ಪಂಡಿತ್ ನರಸಿಂಹಲು ವಡವಾಟಿ ಅವರ ಅಧ್ಯಕ್ಷತೆಯ ಸಮಿತಿ ಡಾ.ಪದ್ಮಮೂರ್ತಿ ಅವರನ್ನು ಆಯ್ಕೆ ಮಾಡಿದೆ. ಇದನ್ನೂ ಓದಿ: ಮಾಜಿ ಸಿಎಂಗಳಿಗೆ ಮತ್ತೆ Z ಭದ್ರತೆ ನೀಡಲು ಸರ್ಕಾರ ನಿರ್ಧಾರ
Web Stories