– ಇಂದು ರಾತ್ರಿಯೇ ನಿರ್ಧಾರ
ನವದೆಹಲಿ: 2024ರ ಲೋಕಸಭಾ ಚುನಾವಣೆಗೂ ಮುನ್ನ ದೇಶದ ವಿವಿಧ ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ (Rajyasabha Election) ನಡೆಯಲಿದೆ. ಈ ಬಾರಿಯ ಚುನಾವಣೆಗೆ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ ಕೂಡ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಈ ಬೆನ್ನಲ್ಲೇ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂಬುದಾಗಿ ವರದಿಯಾಗಿದೆ.
ಸೋನಿಯಾ ಗಾಂಧಿ (Sonia Gandhi) ಅವರು ಈ ಬಾರಿ ರಾಜ್ಯಸಭೆಗೆ ಸಿದ್ಧರಾಗಿದ್ದಾರೆ. ಅವರು ನಾಳೆ ನಾಮಪತ್ರ (Nomination) ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಸೋನಿಯಾ ಗಾಂಧಿ ಅವರ ಜೊತೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕೂಡ ಉಪಸ್ಥಿತರಿರುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ ಸೋನಿಯಾ ಗಾಂಧಿ ಯಾವ ರಾಜ್ಯದಿಂದ ಸ್ಪರ್ಧಿಸುತ್ತಾರೆ ಎಂಬುದು ಇಂದು ರಾತ್ರಿಯೊಳಗೆ ಅಂತಿಮ ನಿರ್ಧಾರವಾಗಲಿದೆ ಎನ್ನಲಾಗಿದೆ.
Advertisement
Advertisement
ಕಾಂಗ್ರೆಸ್‌ನಿಂದ ಸೋನಿಯಾ ಗಾಂಧಿ ಅವರನ್ನು ರಾಜ್ಯಸಭೆಗೆ ಕಳುಹಿಸಬಹುದು ಎಂಬ ವಿಷಯ ಬಹಳ ದಿನಗಳಿಂದ ಚರ್ಚೆಯಲ್ಲಿದೆ. ತೆಲಂಗಾಣ ಅಥವಾ ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ನಾಮಪತ್ರ ಸಲ್ಲಿಸುವ ಸಾಧ್ಯತೆ ಹಲವು ಬಾರಿ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಇದನ್ನೂ ಓದಿ: ರಾಜಸ್ಥಾನದಿಂದ ಸೋನಿಯಾ ಗಾಂಧಿ ರಾಜ್ಯಸಭಾ ಚುನಾವಣೆಗೆ ಸ್ಪರ್ಧೆ?