ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
ಕಾಂಗ್ರೆಸ್ ಎರಡನೇ ಅಭ್ಯರ್ಥಿ ಕಣಕ್ಕಿಳಿಸಿದ ಬೆನ್ನಲ್ಲೇ ಬಿಜೆಪಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಅವರಿಗೆ ಭಾರತೀಯ ಜನತಾ ಪಾರ್ಟಿ ಟಿಕೆಟ್ ನೀಡಿದೆ.
ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ಅವರನ್ನು ಕಣಕ್ಕಿಳಿಸಿದೆ. ಇತ್ತ ಬಿಜೆಪಿಯಿಂದ ನಿರ್ಮಲಾ ಸೀತರಾಮನ್ ಮತ್ತು ನಟ ಜಗ್ಗೇಶ್ ಅಂತಿಮ ಹೆಸರನ್ನು ನಿನ್ನೆ ಘೋಷಣೆ ಮಾಡಿತ್ತು. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‍ನಿಂದ ಜೈರಾಮ್ ರಮೇಶ್‍ಗೆ ಟಿಕೆಟ್
ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. ಇದರಲ್ಲಿ ಉತ್ತರ ಪ್ರದೇಶವೊಂದರಲ್ಲೇ 11 ಸ್ಥಾನಗಳಿವೆ. ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ 6 ಸ್ಥಾನಗಳಿವೆ. ಬಿಹಾರದಲ್ಲಿ 5, ಕರ್ನಾಟಕ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ 4 ಸ್ಥಾನಗಳು ತೆರವಾಗಿದ್ದು, ಚುನಾವಣೆ ನಡೆಯಲಿದೆ. ಈ 57 ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷ ಎಂಟು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.
ರಾಜಸ್ಥಾನದಲ್ಲಿ 2, ಛತ್ತೀಸ್‍ಗಡದಲ್ಲಿ 2, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ತಲಾ ಒಂದೊಂದು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. ರಾಜಸ್ಥಾನದಲ್ಲಿ ಬಿಜೆಪಿಯೇತರ ಎಲ್ಲಾ ಪಕ್ಷಗಳ ಬೆಂಬಲ ಸಿಕ್ಕರೆ ಒಂದು ಹೆಚ್ಚುವರಿ ಸ್ಥಾನ ಕೂಡ ಕಾಂಗ್ರೆಸ್‍ಗೆ ದಕ್ಕಬಹುದು.