ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯಸಭಾ ಚುನಾವಣೆ ನಡೆಯಲಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಪಿಂಗ್ ತೆರಳಿರುವುದು ಗಮನಸೆಳೆದಿದೆ.
ರಾಜ್ಯಸಭೆ ಸಂಬಂಧ ಜೆಡಿಎಸ್ ನಿಯೋಗ ಸಿದ್ದರಾಮಯ್ಯರನ್ನ ಭೇಟಿ ಮಾಡಿ ಮಾತುಕತೆ ನಡೆಸಿತ್ತು. ನಿಯೋಗದ ಭೇಟಿ ಬಳಿಕ ನೇರವಾಗಿ ಸಿದ್ದರಾಮಯ್ಯ ಶಾಪಿಂಗ್ ಗೆ ತೆರಳಿದ್ದಾರೆ.
ಬೆಂಗಳೂರಿನ ಅವೆನ್ಯೂ ರಸ್ತೆಯ ಖಾದಿ ಭಂಡಾರ್ ಮಳಿಗೆಯಲ್ಲಿ ತೆರಳಿದ ಸಿದ್ದರಾಮಯ್ಯ ಪಂಚೆಗಳನ್ನ ಖರೀದಿಸಿದ್ದಾರೆ. 30 ಪಂಚೆಗಳನ್ನ ಏಕ ಕಾಲಕ್ಕೆ ಖರೀದಿ ಮಾಡಿದ್ದಾರೆ. ಒಂದು ಪಂಚೆಗೆ ಸಿದ್ದರಾಮಯ್ಯ 650 ರೂ. ನೀಡಿದ್ದಾರೆ. ಡಿಸ್ಕೌಂಟ್ ಹೋಗಿ ಪ್ರತಿ ಪಂಚೆಗೆ 650 ರೂ.ಗೆ ನೀಡಿ ಖರೀದಿ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಜೆಡಿಎಸ್‍ಗೆ ಸಿದ್ದರಾಮಯ್ಯ ಚೆಕ್ – ಬಿಜೆಪಿಗೆ ಕುದುರುತ್ತಾ ಲಕ್?
ಪಂಚೆ ಖರೀದಿ ಸಮಯದಲ್ಲಿ ವಿವಿಧ ಬ್ರ್ಯಾಂಡ್ ಬಗ್ಗೆಯೂ ಸಿದ್ದರಾಮಯ್ಯ ವಿಚಾರಿಸಿದ್ದಾರೆ. ಮೈಸೂರು ತಿರುಪುರು ಖಾದಿಯಲ್ಲಿ ತೆಗೆದುಕೊಂಡಿದ್ದ ಪಂಚೆ ಬಗ್ಗೆ ಸಿದ್ದರಾಮಯ್ಯ ಅಂಗಡಿಯವರ ಬಳಿ ವಿಚಾರಿಸಿದ್ದಾರೆ. ಅಂತಿಮವಾಗಿ ಮೈಸೂರಿನ ತಿರುಪುರು ಖಾದಿಯ 30 ಪಂಚೆಗಳನ್ನ ಖರೀದಿ ಮಾಡಿದ್ದಾರೆ.
ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. ಇದರಲ್ಲಿ ಉತ್ತರ ಪ್ರದೇಶವೊಂದರಲ್ಲೇ 11 ಸ್ಥಾನಗಳಿವೆ. ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ 6 ಸ್ಥಾನಗಳಿವೆ. ಬಿಹಾರದಲ್ಲಿ 5, ಕರ್ನಾಟಕ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ 4 ಸ್ಥಾನಗಳು ತೆರವಾಗಿದ್ದು, ಚುನಾವಣೆ ನಡೆಯಲಿದೆ. ಈ 57 ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷ ಎಂಟು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ರಾಜಸ್ಥಾನದಲ್ಲಿ 2, ಛತ್ತೀಸ್‍ಗಡದಲ್ಲಿ 2, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ತಲಾ ಒಂದೊಂದು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. ರಾಜಸ್ಥಾನದಲ್ಲಿ ಬಿಜೆಪಿಯೇತರ ಎಲ್ಲಾ ಪಕ್ಷಗಳ ಬೆಂಬಲ ಸಿಕ್ಕರೆ ಒಂದು ಹೆಚ್ಚುವರಿ ಸ್ಥಾನ ಕೂಡ ಕಾಂಗ್ರೆಸ್‍ಗೆ ದಕ್ಕಬಹುದು.