LatestMain PostNational

ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅಗತ್ಯವಿಲ್ಲ: ರಾಕೇಶ್ ಟಿಕಾಯತ್

ಲಕ್ನೋ: ನಾನು ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ, ಅದರ ಅಗತ್ಯವೂ ಇಲ್ಲ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಚುನಾವಣೆಗೆ ಸ್ಪರ್ಧಿಸುವಂತೆ ರಾಕೇಶ್ ಟಿಕಾಯತ್ ಅವರಿಗೆ ಮನವಿ ಮಾಡಿದ್ದರು. ಆದರೆ ಆ ಮನವಿಯನ್ನು ಟಿಕಾಯತ್ ತಿರಸ್ಕರಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಉತ್ತರಪ್ರದೇಶದ ಶಾಮ್ಲಿಯಲ್ಲಿ ಮಾತನಾಡಿರುವ ಅವರು, ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಅಗತ್ಯವಿಲ್ಲ. ಉತ್ತರಪ್ರದೇಶದಲ್ಲಿ ವಿದ್ಯುತ್ ದರ ಹೆಚ್ಚಳ ಹಾಗೂ ರಾಜ್ಯದ ಕಬ್ಬು ಬೆಳೆಗಾರರಿಗೆ ಹಣ ಪಾವತಿ ಮಾಡುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುವುದರ ವಿರುದ್ಧ ಮತ್ತೇ ಹೋರಾಡುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಚೀನಾದ 135 ವರ್ಷದ ವೃದ್ಧೆ ಸಾವು

ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರಿಗೆ ಸಮಯಕ್ಕೆ ಸರಿಯಾಗಿ ಹಣ ನೀಡುವಂತೆ ನೋಡಿಕೊಳ್ಳಬೇಕಾಗಿರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಹರಿಯಾಣದಲ್ಲಿ ವಿದ್ಯುತ್ ದರ ಎಷ್ಟಿದೆಯೋ ಆ ದರವನ್ನು ಉತ್ತರಪ್ರದೇಶದಲ್ಲೂ ಅಳವಡಿಕೆ ಮಾಡಿಕೊಳ್ಳಬೇಕು. ಶಿಕ್ಷಣ, ನಿರುದ್ಯೋಗ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆಯೂ ದನಿಯೆತ್ತಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 18ನೇ ವಯಸ್ಸಿಗೆ ಪ್ರಧಾನಿಯನ್ನೇ ಆಯ್ಕೆ ಮಾಡುವ ಹೆಣ್ಣಿಗೆ ಬಾಳ ಸಂಗಾತಿ ಹೊಂದುವ ಹಕ್ಕು ಯಾಕಿಲ್ಲ: ಓವೈಸಿ ಪ್ರಶ್ನೆ

ನಾನು ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಮಾಡುವುದಿಲ್ಲ. ರಾಜಕೀಯ ಪಕ್ಷಗಳು ತಮ್ಮ ಬ್ಯಾನರ್‌ನಲ್ಲಿ ನನ್ನ ಫೋಟೋ ಹಾಗೂ ಹೆಸರನ್ನು ಬಳಕೆ ಮಾಡಬಾರದು ಎಂದು ಹೇಳಿದ್ದರು. ಹಾಗೆ ಹೋರಾಟ ಮುಂದುವರೆಸುವುದಾಗಿಯೂ ಈ ಹಿಂದೆ ರಾಜಕೀಯ ಪಕ್ಷಗಳಿಗೆ ಎಚ್ಚರಿಗೆ ನೀಡಿದ್ದರು. ಇದನ್ನೂ ಓದಿ:  ಮಂಗ, ಶ್ವಾನಗಳ ವಾರ್‌ನಲ್ಲಿ ಪ್ರಾಣ ಕಳೆದುಕೊಂಡ 80 ನಾಯಿಮರಿಗಳು

Leave a Reply

Your email address will not be published.

Back to top button