ಲಕ್ನೋ: ಹಿಂದೂ, ಮುಸ್ಲಿಮರನ್ನು ಒಡೆದು ಆಳುವ ನೀತಿ ಉತ್ತರಪ್ರದೇಶದಲ್ಲಿ ನಡೆಯುವುದಿಲ್ಲ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯುಪಿಯಲ್ಲಿ ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ವಿದ್ಯುತ್ ದರ ಏರಿಕೆಯಿಂದಾಗಿ ಅನ್ನದಾತರು ಸಂಕಷ್ಟ ಅನುಭವಿಸುವಂತ ಸ್ಥಿತಿ ನಿರ್ಮಾಣವಾಗಿದೆ. ಇಂಥ ಸಂದರ್ಭದಲ್ಲಿ ರೈತರ ಸಮಸ್ಯೆಗಳು, ನಿರುದ್ಯೋಗ, ಹಣದುಬ್ಬರದಿಂದ ಮಧ್ಯಮ ವರ್ಗದ ಜನರು ಅನುಭವಿಸುತ್ತಿರುವ ಸಂಕಷ್ಟಗಳು ಚುನಾವಣೆ ವಿಷಯಗಳಾಗಬೇಕು. ಉತ್ತರ ಪ್ರದೇಶದ ಮತದಾರರು ರೈತರ ಏಳ್ಗೆ ಮತ್ತು ಕಲ್ಯಾಣದ ಬಗ್ಗೆ ಮಾತನಾಡುವವರಿಗೆ ಮಾತ್ರ ಮಣೆ ಹಾಕುತ್ತಾರೆಯೇ ವಿನಃ ಧಾರ್ಮಿಕ ನೆಲೆಯಲ್ಲಿ ಮಾತನಾಡುವುದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಕಿನಿ ತೊಟ್ಟು ಪಡ್ಡೆಗಳ ಹಾರ್ಟ್‍ಬಿಟ್ ಹೆಚ್ಚಿಸಿದ ಮಾಳವಿಕಾ ಮೋಹನನ್
Advertisement
Advertisement
ಮೊಹಮ್ಮದ್ ಅಲಿ ಜಿನ್ನಾ ಮತ್ತು ಪಾಕಿಸ್ತಾನದ ಬಗ್ಗೆ ಮಾತನಾಡುವ ಮೂಲಕ ಹಿಂದೂ-ಮುಸ್ಲಿಮರನ್ನು ಒಡೆಯುವ ಪ್ರಯತ್ನ ಮಾಡಲಾಗುತ್ತಿದೆ. ಹಿಂದೂ-ಮುಸ್ಲಿಂ ಹೆಸರಿನಲ್ಲಿ ಒಡೆದು ಆಳುವುದಕ್ಕೆ ಹೊರಟಿರುವುದು ಅವರಿಗೆ ಲಾಭಕ್ಕಿಂತ ಹೆಚ್ಚು ನಷ್ಟವನ್ನು ಉಂಟು ಮಾಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
Advertisement
ನಾನು ರಾಜಕಾರಣಿಯಲ್ಲ, ರಾಜಕೀಯ ಪಕ್ಷಗಳಿಂದ ದೂರ ಉಳಿದಿದ್ದೇನೆ, ರೈತರ ಸಮಸ್ಯೆಗಳ ಬಗ್ಗೆ ಮಾತ್ರ ಮಾತನಾಡುತ್ತೇನೆ. ಅವರ ನಾಯಕರನ್ನು ಪ್ರಶ್ನಿಸುವುದಕ್ಕೆ ಜನರಿಗೆ ಒತ್ತಾಯಿಸುತ್ತೇನೆ, ನಾನು ರೈತರ ಸಮಸ್ಯೆಗಳನ್ನು ಮಾತ್ರ ಪ್ರಸ್ತಾಪಿಸುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಪುಷ್ಪ ಮಾಸ್ ಡೈಲಾಗ್ ಹೇಳಿದ ಡೇವಿಡ್ ವಾರ್ನರ್- Viral Video
ಬಿಜೆಪಿ ವಿರುದ್ಧ ಪ್ರಚಾರ ಮಾಡುತ್ತಾರೆಯೇ ಎಂಬ ಪ್ರಶ್ನೆಗೆ ರಾಕೇಶ್ ಟಿಕಾಯತ್ ಪ್ರತಿಕ್ರಿಯೆ ನೀಡಿದ್ದು, ಅಂಥ ಯಾವುದೇ ಯೋಜನೆಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.