ನವದೆಹಲಿ: ಕೃಷಿ ಮಸೂದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದರೂ ಕೂಡ ನಾವು ಪ್ರತಿಭಟನೆಯನ್ನು ಹಿಂಪಡೆಯಲ್ಲ ಎಂದು ಭಾರತ್ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.
Advertisement
ಕೃಷಿ ಮಸೂದೆಯನ್ನು ಹಿಂಪಡೆಯುತ್ತಿದ್ದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೈತರೊಂದಿಗೆ ಪ್ರತಿಭಟನೆಯನ್ನು ಕೈ ಬಿಟ್ಟು ಮನೆಗೆ ತೆರಳುವಂತೆ ಮನವಿ ಮಾಡಿದ್ದಾರೆ. ಈ ಮನವಿ ಬಳಿಕ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ರಾಕೇಶ್ ಟಿಕಾಯತ್, ಕೃಷಿ ಮಸೂದೆಯನ್ನು ಸಂಸತ್ತಿನಲ್ಲಿ ಪಾಸ್ ಮಾಡಲಾಗಿತ್ತು. ಇದೀಗ ಸಂಸತ್‍ನಲ್ಲಿ ಮತ್ತೆ ಕೃಷಿ ಮಸೂದೆ ಹಿಂಪಡೆಯುವ ಬಗ್ಗೆ ಬಿಲ್ ಪಾಸ್ ಆದ ಬಳಿಕ ನಾವು ಪ್ರತಿಭಟನಾ ಸ್ಥಳದಿಂದ ತೆರಳುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೃಷಿ ಕಾನೂನು ಹಿಂಪಡೆದಾಗ ರೈತರು ಹಿಂದಿರುಗುತ್ತಾರೆ: ರಾಕೇಶ್ ಟಿಕಾಯತ್
Advertisement
Advertisement
ಇದಲ್ಲದೆ ರೈತರ ಹಲವು ಸಮಸ್ಯೆಗಳು ಬಾಕಿ ಇದೆ. ಕನಿಷ್ಠ ಬೆಂಬಲ ಬೆಲೆ ಬಗ್ಗೆ ನರೇಂದ್ರ ಮೋದಿ ಅವರು ಯಾವುದೇ ಮಾತನಾಡಿಲ್ಲ ಈ ಬಗ್ಗೆ ನಮಗೆ ಸ್ಪಷ್ಟಪಡಿಸಿದ ಬಳಿಕ ಮನೆಗೆ ತೆರಳುವ ಬಗ್ಗೆ ರೈತರೊಂದಿಗೆ ಮಾತುಕತೆ ನಡೆಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸಂಸತ್‍ನಲ್ಲಿ ಕೃಷಿ ಮಸೂದೆ ಹಿಂಪಡೆದ ಬಿಲ್ ಪಾಸ್ ಆಗುವವರೆಗೆ ನಾವು ಯಾವುದೇ ಹೇಳಿಕೆಗಳನ್ನು ನಂಬುವುದಿಲ್ಲ ಎಂದರು. ಇದನ್ನೂ ಓದಿ: ಆ ಮೂರು ವಿವಾದಿತ ಕೃಷಿ ಕಾಯ್ದೆ ಯಾವುದು?- ರೈತರ ಹೋರಾಟಕ್ಕೆ ಜಯ ಸಿಕ್ಕಿದ್ದೇಗೆ?
Advertisement
ಕೃಷಿ ಮಸೂದೆ ಹಿಂಪಡೆದ ಬಗ್ಗೆ ಮಾಹಿತಿ ಸಿಕ್ಕಂತೆ ನಾನು ನಮ್ಮ ರೈತ ಹೋರಾಟದಲ್ಲಿರುವ ರೈತರೊಂದಿಗೆ ಮಾತುಕತೆ ನಡೆಸುತ್ತೇನೆ ಆ ಬಳಿಕ ಅವರು ಕೊಡುವಂತಹ ಸೂಚನೆಯ ಮೇಲೆ ನಮ್ಮ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ
ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ಕಾನೂನು ಹಿಂಪಡೆದ ದಿನ ರೈತರು ಪ್ರತಿಭಟನಾ ಸ್ಥಳದಿಂದ ಹಿಂದಿರುಗುತ್ತಾರೆ ಎಂದು ನಾಯಕ ರಾಕೇಶ್ ಟಿಕಾಯತ್ ಈ ಹಿಂದೆ ಹೇಳಿದ್ದರು. ರೈತರು ದೆಹಲಿಯ ಗಡಿಯಿಂದ ಹಿಂದಿರುಗಲ್ಲ. ಆದ್ರೆ ಒಂದು ಷರತ್ತಿನ ಮೇಲೆ ರೈತರು ಹಿಂದಿರಗಬಹುದು. ಅದು ಮೂರು ಕಾನೂನುಗಳನ್ನ ರದ್ದುಗೊಳಿಸಿ, ಎಂಎಸ್‍ಪಿ ಗೆ ಕಾನೂನು ರೂಪಿಸಿದ ದಿನ ಮನೆಗೆ ತೆರಳುತ್ತೇವೆ ಎಂದು ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಪ್ರತಿಭಟನೆ ಕೈ ಬಿಡುವಂತೆ ರೈತರಲ್ಲಿ ಮೋದಿ ಮನವಿ