ಸುಪ್ರೀಂ ಕೋರ್ಟ್ ಅಂಗಳಕ್ಕೆ ರಾಖಿ ಸಾವಂತ್ ಪ್ರಕರಣ

Public TV
1 Min Read
Rakhi Adil Khan 2

ಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಬಾಲಿವುಡ್ ನಟಿ ರಾಖಿ ಸಾವಂತ್ ಬಾಂಬೆ ಹೈಕೋರ್ಟ್ ಮೆಟ್ಟಿಲು ಏರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ಜಾಮೀನು ನೀಡಬೇಕು ಎಂದು ರಾಖಿ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಬಾಂಭೆ ಹೈಕೋರ್ಟ್ ತಿರಸ್ಕರಿಸಿದೆ. ಹಾಗಾಗಿ ರಾಖಿ ಇದೀಗ ಸುಪ್ರೀಂ ಕೋರ್ಟ್ (Supreme Court)  ಮೆಟ್ಟಿಲು ಏರಿದ್ದಾರೆ. ಇಂದು ಪ್ರಕರಣದ ವಿಚಾರಣೆ ನಡೆಯಲಿದೆ.

adil khan 1

ತಮ್ಮ ಖಾಸಗಿ ವಿಡಿಯೋಗಳನ್ನು ರಾಖಿ ಸಾವಂತ ಇತರರಿಗೆ ಹಂಚುತ್ತಿದ್ದಾರೆ. ಇದರಿಂದ ಮಾನನಷ್ಟವಾಗುತ್ತಿದೆ ಎಂದು ರಾಖಿ ಮಾಜಿ ಗೆಳೆಯ ಆದಿಲ್ (Adil Khan) ದೂರು ನೀಡಿದ್ದರು. ಜೊತೆಗೆ ಗಂಭೀರ ಆರೋಪವನ್ನೂ ಅವರು ಮಾಡಿದ್ದರು. ಈ ನಡುವೆ ಆದಿಲ್ ಬಿಗ್ ಬಾಸ್ ಸ್ಪರ್ಧಿ ಸೋಮಿ ಖಾನ್ (Somi Khan) ಜೊತೆ ಮದುವೆ (Marriage) ಆಗಿದ್ದಾರೆ, ಇದೇ ಮೊದಲ ಬಾರಿಗೆ ತಮ್ಮ ಮದುವೆ ಬಗ್ಗೆ ಮಾತನಾಡಿದ್ದಾರೆ. ನಾನು ರಾಖಿ ಸಾವಂತ್ ಜೊತೆ ಮದುವೆ ಆಗಿರಲಿಲ್ಲ. ಸೋಮಿ ಖಾನ್ ಜೊತೆಗಿನ ಮದುವೆಯೇ ನನ್ನ ಮೊದಲ ಮ್ಯಾರೇಜ್ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Adil Khan 1

ಸದ್ಯ ಬೆಂಗಳೂರಿನಲ್ಲಿರುವ ಆದಿಲ್ ಮುಂದಿನ ದಿನಗಳಲ್ಲಿ ಮುಂಬೈಗೆ ಹೋದ ನಂತರ ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ನೀಡುವುದಾಗಿ ಅವರು ಹೇಳಿಕೊಂಡಿದ್ದಾರೆ. ಜೊತೆಗೆ ತಮ್ಮ ಮದುವೆ ವಿಚಾರವನ್ನೂ ಅವರು ಖಚಿತ ಪಡಿಸಿದ್ದಾರೆ.

adil khan 3

ಕಾಂಟ್ರವರ್ಸಿ ಕ್ವೀನ್ ರಾಖಿ ಸಾವಂತ್‌ಗೆ (Rakhi Sawant) ಕೈ ಕೊಟ್ಟು ಇದೀಗ ಸೀಕ್ರೆಟ್ ಆಗಿ ಆದಿಲ್ ಖಾನ್ 2ನೇ ಮದುವೆಯಾಗಿದ್ದಾರೆ. ‘ಬಿಗ್ ಬಾಸ್ ಹಿಂದಿ 12’ರ (Bigg Boss Hindi 12) ಸ್ಪರ್ಧಿ ಸೋಮಿ ಖಾನ್ ಜೈಪುರನಲ್ಲಿ ಗ್ರ್ಯಾಂಡ್ ಆಗಿ ಮದುವೆಯಾಗಿದ್ದಾರೆ.

 

ಮಾರ್ಚ್ 2ರಂದು ಕುಟುಂಬಸ್ಥರ ಸಮ್ಮುಖದಲ್ಲಿ ಈ ಜೋಡಿ ನಿಖಾ ಆಗಿದ್ದಾರೆ. ನಟಿ ಸೋಮಿ ಖಾನ್ ಜೊತೆಗಿನ ಮದುವೆ ಬಗ್ಗೆ ಆದಿಲ್ ಯಾವುದೇ ಮಾಹಿತಿ ನೀಡಿರಲಿಲ್ಲ. ಈಗ ಫೋಟೋ ಕೂಡ ಹೊರ ಬಂದಿವೆ ಹಾಗೂ ಮದುವೆ ಕುರಿತು ಆದಿಲ್ ಮಾತನಾಡಿದ್ದಾರೆ.

Share This Article