ಮುಂಬೈ: ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಶನಿವಾರ ನಿಧನರಾದರು. ಅರುಣ್ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸೇರಿದಂತೆ ಹಲವು ಬಾಲಿವುಡ್ ಕಲಾವಿದರು ಸಂತಾಪ ಸೂಚಿಸಿದ್ದಾರೆ. ಈ ನಡುವೆ ಡ್ರಾಮಾ ಕ್ವೀನ್ ನಟಿ ರಾಖಿ ಸಾವಂತ್ ಅವರು ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಇದೀಗ ಟ್ರೋಲ್ ಆಗುತ್ತಿದ್ದಾರೆ.
ರಾಖಿ ಸಾವಂತ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು, ಅರುಣ್ ಜೇಟ್ಲಿ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅಲ್ಲದೆ ಜೇಟ್ಲಿ ಅವರ ನಿಧನದ ವಿಷಯ 10 ದಿನಗಳ ಮೊದಲೇ ತಿಳಿದಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವಿಡಿಯೋದಲ್ಲಿ ಏನಿದೆ?
ನಮಸ್ಕಾರ ಸ್ನೇಹಿತರೇ. ಬಿಜೆಪಿ ನಾಯಕ ಜೇಟ್ಲಿ ಈಗ ನಮ್ಮ ನಡುವೆ ಇಲ್ಲ. ನಾನು ಒಂದು ವಾರ ಮೊದಲು ಅಲ್ಲ 10 ದಿನದ ಮೊದಲೇ ಹೇಳಿದ್ದೆ. ನನಗೆ ಕೆಲವು ಬಾರಿ ಈ ರೀತಿಯ ಕನಸುಗಳು ಬರುತ್ತದೆ. ನನಗೆ ಮೊದಲೇ ಈ ವಿಷಯಗಳು ತಿಳಿಯುತ್ತದೆ. ಹೇಗೆ ಎಂದು ಗೊತ್ತಿಲ್ಲ. ಆದರೆ ಇದು ದೇವರ ಶಕ್ತಿ. ಈ ರೀತಿಯ ಶಕ್ತಿ ನೀಡಿದ್ದಕ್ಕೆ ದೇವರಿಗೆ ಧನ್ಯವಾದ ತಿಳಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಲು ಇಷ್ಟಪಡುತ್ತೇನೆ. ಇಡೀ ಭಾರತ ಅವರನ್ನು ನೆನಪಿಸಿಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜೇಟ್ಲಿ ಅವರನ್ನು ಇದೇ ತಿಂಗಳ 9ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಸುದೀರ್ಘ 15 ದಿನಗಳ ಕಾಲ ವೆಂಟಿಲೇಟರ್, ಐಸಿಯುನಲ್ಲಿಟ್ಟರೂ ಚಿಕಿತ್ಸೆ ಫಲಿಸದೇ ಶನಿವಾರ ಮಧ್ಯಾಹ್ನ 12.07ಕ್ಕೆ ಕೊನೆಯುಸಿರೆಳೆದಿದ್ದರು.
View this post on Instagram