ರಾಮಮಂದಿರ ಉದ್ಘಾಟನೆಗೆ ರಾಕಿಭಾಯ್ ಗೂ ಆಹ್ವಾನ

Public TV
1 Min Read
Yash

ಕ್ಷಿಣದ ಕೆಲವೇ ಕೆಲವು ನಟರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಸಿಕ್ಕಿದೆ. ಮೊನ್ನೆಯಷ್ಟೇ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಆಹ್ವಾನ ಬಂದಿತ್ತು. ಇದೀಗ ಮತ್ತೋರ್ವ ನಟ ಯಶ್ (Yash) ಅವರಿಗೂ ಕೂಡ ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದೆ. ರಿಷಬ್ ಮತ್ತು ಯಶ್ ಉದ್ಘಾಟನೆ ಸಮಾರಂಭಕ್ಕೆ ಹೋಗಲಿದ್ದಾರೆ.  ಜೊತೆಗೆ ರಜನಿಕಾಂತ್, ಮೋಹನ್ ಲಾಲ್, ಚಿರಂಜೀವಿ ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂಥದ್ದೊಂದು ಆಹ್ವಾನ ಸಿಕ್ಕಿದೆ.

Yash 2

ಕರ್ನಾಟಕದಿಂದ ಸೇವೆ

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜನೆಗೊಂಡಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ.

Ram Mandir

2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ.

 

ಘಂಟಾದಾನ ಮತ್ತು ಪೂಜಾ ಸಾಮಾಗ್ರಿಯನ್ನು ಇಂದು ಅಯೋಧ್ಯೆಗೆ ಕೊಂಡೊಯ್ಯಲಿದ್ದಾರೆ. ತಮಿಳುನಾಡಿನ ನಾಮಕ್ಕಲ್‌ನಲ್ಲಿ ಈ ಘಂಟೆಗಳನ್ನು ತಯಾರು ಮಾಡಲಾಗಿದ್ದು, 2.5 ಟನ್ ತೂಕದ ಘಂಟೆಗಳನ್ನು ದೇವಸ್ಥಾನದ ಒಳಗಡೆ ಬಳಸಲಾಗುತ್ತದೆ. ಈ ಘಂಟೆಗಳನ್ನು ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ.

Share This Article