ಶ್ರಾವಣ ಮಾಸ ಬಂತೆಂದರೆ ಸಾಲು ಸಾಲಾಗಿ ಹಬ್ಬಗಳು ಬರುತ್ತವೆ. ಮೊದಲಿಗೆ ವರಮಹಾಲಕ್ಷ್ಮಿ ಹಬ್ಬ ಬರುತ್ತದೆ. ನಂತರ ಬರುವುದೇ ಸಂಬಂಧವನ್ನು ಬೆಸೆಯುವ ಬಾಂಧವ್ಯದ ರಾಖಿ ಹಬ್ಬ. ಸಹೋದರ ಮತ್ತು ಸಹೋದರಿ ನಡುವಿನ ಪ್ರೀತಿ ಹಾಗೂ ನೆನಪುಗಳು ಅಚ್ಚಳಿಯದೆ ಉಳಿಯಲು ಪ್ರತೀ ವರ್ಷ ರಕ್ಷಾ ಬಂಧನವನ್ನು (Raksha Bandhan) ಆಚರಿಸಲಾಗುತ್ತದೆ.
ಅಣ್ಣ-ತಂಗಿಯ (Brother Sister) ಬಂಧನಕ್ಕೆ ಬೆಲೆ ಕಟ್ಟಲಾಗದು. ಮನೆಯಲ್ಲಿ ಅಣ್ಣ ಅಥವಾ ತಮ್ಮನಿಗೆ ತಂಗಿ ಅಥವಾ ಅಕ್ಕ ಯಾವಾಗಲೂ ಬೆಂಬಲವಾಗಿ ನಿಲ್ಲುವರು. ಸಹೋದರ ಮತ್ತು ಸಹೋದರಿಯ ಸಂಬಂಧದ ಮಹತ್ವವನ್ನು ಸಾರುವಂತಹ ರಕ್ಷಾ ಬಂಧನವು ಪ್ರಮುಖವಾಗಿ ಭಾರತೀಯರು ಹೆಚ್ಚಾಗಿ ಆಚರಿಸುತ್ತಾರೆ. ಅಣ್ಣನ ಕೈಗೆ ತಂಗಿ ರಾಖಿ ಕಟ್ಟುವ ಮೂಲಕ ತಂಗಿ ಅಣ್ಣ ತನಗೆ ದುಷ್ಟಶಕ್ತಿಗಳಿಂದ ಸುರಕ್ಷತೆಯನ್ನು ನೀಡುತ್ತಾನೆ ಎಂಬ ನಂಬಿಕೆ ಇಟ್ಟುಕೊಂಡಿರುತ್ತಾಳೆ.
Advertisement
ರಕ್ಷಾ ಬಂಧನ ಹಬ್ಬವನ್ನು ರಾಷ್ಟ್ರದೆಲ್ಲೆಡೆಯಲ್ಲಿ ಸಂಭ್ರಮದಿಂದ ಆಚರಿಸುತ್ತಾರೆ. ಇದು ಹಿಂದೂಗಳ ಹಬ್ಬವಾದರೂ ಹೆಚ್ಚಿನ ಧರ್ಮಗಳಲ್ಲಿ ಇದನ್ನು ಆಚರಿಸಲಾಗುತ್ತದೆ. ಈ ದಿನ ಸೋದರಿಯು ತನ್ನ ಸೋದರನ ಕೈಗೆ ರಕ್ಷೆಯ ದಾರವನ್ನು ಕಟ್ಟುತ್ತಾಳೆ. ಅದನ್ನೇ ರಾಖಿ ಎಂದು ಕರೆಯಲಾಗುತ್ತದೆ. ಈ ದಾರವನ್ನು ಕಟ್ಟುವ ವೇಳೆ ತಂಗಿ ತನ್ನ ಅಣ್ಣನಿಗೆ ದೀರ್ಘಾಯುಷ್ಯ, ಆರೋಗ್ಯವು ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾಳೆ.
Advertisement
Advertisement
ಇದಕ್ಕೆ ಪ್ರತಿಯಾಗಿ ಸಹೋದರನು ಕೂಡ ತನ್ನ ಸಹೋದರಿಯನ್ನು ಯಾವುದೇ ಕಷ್ಟದ ಪರಿಸ್ಥಿತಿಯಲ್ಲೂ ರಕ್ಷಿಸುವ ಭರವಸೆಯನ್ನು ನೀಡುತ್ತಾನೆ. ಅಷ್ಟೇ ಅಲ್ಲದೇ ತನ್ನ ಪ್ರೀತಿಯ ತಂಗಿಗೆ ಇಷ್ಟವಾಗಿರುವ ಉಡುಗೊರೆ ನೀಡುತ್ತಾನೆ. ರಕ್ಷಾಬಂಧನ ಎಂಬುದರಲ್ಲಿ ಎರಡು ಪದಗಳಿವೆ. ಒಂದು ರಕ್ಷಾ ಮತ್ತು ಬಂಧನ. ರಕ್ಷಾ ಎಂದರೆ ರಕ್ಷಣೆ ಮತ್ತು ಬಂಧನ ಎಂದರೆ ಬಂಧವೆಂದರ್ಥ. ಅಣ್ಣ-ತಂಗಿ ಇಬ್ಬರು ಪರಸ್ಪರ ಹಂಚಿಕೊಳ್ಳುವ ಪ್ರೀತಿ ಯಾವತ್ತೂ ಕೊನೆಗೊಳ್ಳದು.
Advertisement
ರಾಖಿ ಕಟ್ಟುವುದು: ಮೊದಲಿಗೆ ಸಹೋದರಿ, ಸಹೋದರನ ಹಣೆಗೆ ತಿಲಕವನ್ನು ಇಟ್ಟು, ನೆತ್ತಿಯ ಮೇಲೆ ಅಕ್ಕಿ ಅಥವಾ ಅಕ್ಷತೆಯನ್ನು ಹಾಕಬೇಕು. ಬಳಿಕ ಅಣ್ಣಿನಿಗೆ ಆರತಿ ಬೆಳಗಬೇಕು. ಕೊನೆಯಲ್ಲಿ ಸಹೋದರನಿಗೆ ರಾಖಿಯನ್ನು ಕಟ್ಟಿ ಸಿಹಿಯನ್ನು ತಿನ್ನಿಸಬೇಕು. ತಂಗಿ ರಾಖಿ ಕಟ್ಟಿದ ನಂತರ ಅಣ್ಣ ಪ್ರೀತಿಯ ಸಹೋದರಿಗೆ ಉಡುಗೊರೆ ಕೊಡುತ್ತಾನೆ.
ರಕ್ಷಾ ಬಂಧನದ ಹಿನ್ನೆಲೆ ಏನು?
ಪ್ರತಿಯೊಂದು ಹಬ್ಬಕ್ಕೂ ಪುರಾಣದಲ್ಲಿ ತನ್ನದೇ ಆದ ಹಿನ್ನೆಲೆ ಇತಿಹಾಸವನ್ನು ಹೊಂದಿರುತ್ತವೆ. ಅದೇ ರೀತಿ ರಕ್ಷಾ ಬಂಧನಕ್ಕೂ ಕೂಡ ಅನೇಕ ಇತಿಹಾಸಗಳಿವೆ. ಭಗವಾನ್ ಕೃಷ್ಣನು ಶಿಶುಪಾಲನನ್ನು ಕೊಲ್ಲಲು ತನ್ನ ಸುದರ್ಶನ ಚಕ್ರವನ್ನು ಬಳಸುತ್ತಾನೆ. ಈ ವೇಳೆ ಆತನ ಕೈ ಬೆರಳಿಗೆ ಗಾಯವಾಗುತ್ತದೆ. ಎಲ್ಲರೂ ಕೈಬೆರಳಿಗೆ ಕಟ್ಟಲು ಬಟ್ಟೆಯನ್ನು ತರಲು ಹೋಗುತ್ತಾರೆ. ಆದರೆ ದ್ರೌಪದಿ ತನ್ನ ಸೀರೆಯ ಒಂದು ತುಂಡನ್ನು ಕತ್ತರಿಸಿ ರಕ್ತ ಸುರಿಯುತ್ತಿರುವ ಕೃಷ್ಣನ ಕೈಗೆ ಕಟ್ಟುತ್ತಾಳೆ. ಇದಕ್ಕೆ ಪ್ರತಿಫಲವನ್ನು ನೀಡಿದ ಶ್ರೀಕೃಷ್ಣ ಹಸ್ತಿನಾಪುರದ ಅರಮನೆಯಲ್ಲಿ ದುಶ್ಯಾಸನ ದ್ರೌಪದಿಯ ಸೀರೆಯನ್ನು ಎಳೆದಾಗ ಅದು ಎಳೆದಷ್ಟು ಉದ್ದವಾಗುವಂತೆ ಮಾಡಿ ದ್ರೌಪದಿಯ ಮಾನ ಕಾಪಾಡುತ್ತಾನೆ.
ಪಾರ್ವತಿಯು ಸಹ ವಿಷ್ಣುವಿಗೆ ರಕ್ಷಾ ಬಂಧನವನ್ನು ಕಟ್ಟಿ ಆತನನ್ನು ತನ್ನ ಅಣ್ಣನಾಗಿ ಸ್ವೀಕರಿಸಿದ್ದಳು. ಅದಕ್ಕೆ ಪ್ರತಿಯಾಗಿ ವಿಷ್ಣು ಪಾರ್ವತಿ ದೇವಿಗೆ ಅಪಾಯವೊದಗಿದಾಗ ಆಕೆಯನ್ನು ತಾನು ಕಾಪಾಡುವುದಾಗಿ ಭರವಸೆ ನೀಡುತ್ತಾನೆ.
ಇನ್ನೊಂದು ಕಥೆಯೆಂದರೆ, ಬಲಿ ಚಕ್ರವರ್ತಿಯು ವಿಷ್ಣು ದೇವರನ್ನು ತನ್ನ ಅರಮನೆಗೆ ಆಹ್ವಾನಿಸುತ್ತಾನೆ. ಬಲಿಯ ಅರಮನೆಯಲ್ಲಿ ಉಳಿಯಲು ವಿಷ್ಣು ದೇವರು ಬಯಸುತ್ತಾರೆ. ಆದರೆ ಲಕ್ಷ್ಮೀ ದೇವಿಗೆ ಇದು ಇಷ್ಟವಾಗುವುದಿಲ್ಲ. ಆಕೆ ವಿಷ್ಣು ದೇವರನ್ನು ಹಿಂಬಾಲಿಸಿಕೊಂಡು ಬಂದು ಬಲಿ ಚಕ್ರವರ್ತಿ ಮುಂದೆ ಬಂದು ನಿಲ್ಲುತ್ತಾಳೆ. ಬಲಿ ಚಕ್ರವರ್ತಿಯ ಭಕ್ತಿಯಿಂದ ಪ್ರಸನ್ನಳಾದ ಲಕ್ಷ್ಮೀ ದೇವಿಯು ಆತನನ್ನು ತನ್ನ ಸಹೋದರನೆಂದು ಸ್ವೀಕರಿಸಿ ರಾಖಿ ಕಟ್ಟುತ್ತಾಳೆ. ತನ್ನ ರಾಜ್ಯದಿಂದ ಏನು ಬೇಕಾದರೂ ಕೇಳಬಹುದೆಂದು ಬಲಿ ಚಕ್ರವರ್ತಿಯು ಲಕ್ಷ್ಮೀ ದೇವಿಗೆ ಹೇಳುತ್ತಾನೆ. ಹೀಗೆ ರಕ್ಷಾ ಬಂಧನಕ್ಕೆ ತನ್ನದೆ ಆದ ಹಿನ್ನೆಲೆಯನ್ನು ಹೊಂದಿದೆ.
ಮಹತ್ವ:
ರಕ್ಷಾಬಂಧನವು ಸಹೋದರ ಮತ್ತು ಸಹೋದರಿಯರ ನಡುವಿನ ಅನುಬಂಧವನ್ನು ಹೆಚ್ಚಿಸುತ್ತದೆ. ಈ ಹಬ್ಬದ ಮೂಲಕ ದೂರದಲ್ಲಿರುವ ಕುಟುಂಬ ಸದಸ್ಯರನ್ನು ಹತ್ತಿರಕ್ಕೆ ತರುತ್ತದೆ. ಬಲಗೈಗೆ ಕಟ್ಟಿಕೊಳ್ಳುವ ಈ ಪವಿತ್ರ ದಾರವಾದ ರಾಖಿಯು ಪ್ರತಿಯೊಬ್ಬರಿಗೂ ಪ್ರಪಂಚದ ಐಹಿಕ ಸುಖ ಭೋಗಗಳಿಗೆ ಮರುಳಾಗದಿರುವಂತೆ ನೆನಪಿಸುತ್ತದೆ. ರಾಖಿಯನ್ನು ಕಟ್ಟುವ ಸೋದರಿಯು ತನ್ನ ಸೋದರನಲ್ಲಿ ತನ್ನ ಧಾರ್ಮಿಕ ನಂಬಿಕೆ ಮತ್ತು ಹಂಬಲಗಳನ್ನು ಕಾಣುತ್ತಾಳೆ. ಸದಾ ಆತನ ಶ್ರೇಯಸ್ಸನ್ನು ಕೋರಿ ಕಟ್ಟುವ ಈ ರಾಖಿಯು ಒಂದು ನಿಷ್ಕಲ್ಮಶವಾದ ಪ್ರೀತಿಯ ಸಂಕೇತವಾಗಿದೆ. ಈ ಬಂಧನ ಆಕೆಯ ಭರವಸೆ, ನಂಬಿಕೆ ಹಾಗೂ ಶಕ್ತಿಯನ್ನು ಸೋದರನಿಗೆ ನೆನಪು ಮಾಡಿಕೊಡುತ್ತದೆ.
Web Stories