ರಕ್ಷಿತ್ ಶೆಟ್ಟಿ (Rakshit Shetty) ಮುಖ್ಯ ಭೂಮಿಕೆಯ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರುತ್ತಿದ್ದು, ಮೊದಲ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ A’ ಸೆಪ್ಟೆಂಬರ್ 01 ಮತ್ತು ಎರಡನೆಯ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ B’ ಅಕ್ಟೋಬರ್ 20ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಮತ್ತು ವಿತರಣೆ ಸಂಸ್ಥೆಯಾದ ಕೆ.ವಿ.ಎನ್. ಪ್ರೊಡಕ್ಷನ್ಸ್ ಈ ಚಿತ್ರಗಳನ್ನು ಬಿಡುಗಡೆ ಮಾಡುತ್ತಿದೆ.
Advertisement
ಈ ರೀತಿಯಲ್ಲಿ ಒಂದೇ ಸಲ ಸಿನಿಮಾ ರೆಡಿ ಮಾಡಿ, ಎರಡು ಭಾಗವಾಗಿ ಬಿಡುಗಡೆ ಮಾಡುವುದು ತೀರಾ ಅಪರೂಪ. ಹಾಲಿವುಡ್‌ನ ಪೀಟರ್ ಜಾಕ್ಸನ್ ‘ಲಾರ್ಡ್ ಆಫ್ ದ ರಿಂಗ್ಸ್’ ಮತ್ತು ‘ಹಾಬಿಟ್’ ಸಿನಿಮಾಗಳನ್ನು ಸಂಪೂರ್ಣ ಶೂಟ್ ಮುಗಿಸಿ ಪ್ರತಿ ವರ್ಷದ ಡಿಸೆಂಬರ್‌ಗೆ ಒಂದೊಂದು ಸಿನಿಮಾ ರಿಲೀಸ್ ಮಾಡಿದ್ದರು. ಭಾರತೀಯ ಹೆಮ್ಮೆಯ ನಿರ್ದೇಶಕ ಮಣಿರತ್ನಂ ಕೂಡ ಪೊನ್ನಿಯನ್ ಸೆಲ್ವನ್ ಸಿನಿಮಾನ ಸಂಪೂರ್ಣ ಮುಗಿಸಿ ರೆಡಿ ಇಟ್ಕೊಂಡು ಒಂದು ವರ್ಷದ ಗ್ಯಾಪಲ್ಲಿ ಎರಡು ಪಾರ್ಟುಗಳನ್ನು ರಿಲೀಸ್ ಮಾಡಿದರು. ಇದೇ ಮಾದರಿಯನ್ನೇ ಸಪ್ತ ಸಾಗರದಾಚೆ ಎಲ್ಲೋ ಟೀಮ್ ಅನುಸರಿಸುತ್ತಿದೆ.
Advertisement
Advertisement
ಸಿಂಪಲ್ ಸ್ಟಾರ್ ರಕ್ಷಿತ್ ಇದೀಗ `ಸಪ್ತಸಾಗರದಾಚೆ ಎಲ್ಲೋ’ (Saptasagaradache Yello) ಚಿತ್ರದ ಮೂಲಕ ಗಮನ ಸೆಳೆಯುತ್ತಿದ್ದಾರೆ. ರಕ್ಷಿತ್‌ಗೆ ನಾಯಕಿಯರಾಗಿ ರುಕ್ಮಿಣಿ ವಸಂತ್ (Rukmini Vasanth) ಮತ್ತು ಚೈತ್ರಾ ಆಚಾರ್ (Chaitra Achar) ನಟಿಸಿದ್ದಾರೆ. ಇನ್ನೂ ಬರೋಬ್ಬರಿ 137 ದಿನಗಳ ಕಾಲ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಇದನ್ನೂ ಓದಿ:ಡಿವೋರ್ಸ್ ಆಗಿ ಒಂದು ವಾರ ಕಳೆದಿಲ್ಲ ಹೆಂಡ್ತಿ ಬೇಕು ಎಂದ ಸುಶ್ಮಿತಾ ಸೇನ್ ಅಣ್ಣ
Advertisement
`ಕವಲು ದಾರಿ’ (Kavaludari) ಚಿತ್ರದ ನಂತರ ನಿರ್ದೇಶಕ ಹೇಮಂತ್ `ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್‌ಗೆ ಒಂದಷ್ಟು ದಿನ ವರ್ಕ್ಶಾಪ್ ನಡೆಸಿ ನಂತರ ಚಿತ್ರೀಕರಣ ಆರಂಭಿಸಿದ್ದರು. ಚಿತ್ರದಲ್ಲಿ 2 ಭಿನ್ನ ಶೇಡ್‌ಗಳಿರೋ ಪಾತ್ರದಲ್ಲಿ ರಕ್ಷಿತ್ ನಟಿಸಿದ್ದಾರೆ.
ತನ್ನ ಪಾತ್ರಕ್ಕಾಗಿ ರಕ್ಷಿತ್ 15 ರಿಂದ 20 ಕೆಜಿ ತೂಕ ಹೆಚ್ಚಿಸಿಕೊಂಡು ಮತ್ತೆ ತೂಕ ಇಳಿಸಿಕೊಂಡು ಕಸರತ್ತು ಕೂಡ ಮಾಡಿದ್ದಾರೆ. ಚಿತ್ರದಲ್ಲಿ ನಾಯಕನ 25 ಹಾಗೂ 45ರ ವಯೋಮಾನದ ಕುರಿತ ಕಥೆ ಇದೆ. ಅದಕ್ಕೆ ತಕ್ಕಂತೆ ಅರ್ಧ ಸಿನಿಮಾ ಸ್ಲಿಮ್ ಅಂಡ್ ಸ್ಮಾರ್ಟ್ ಕಾಲೇಜು ಹುಡುಗನಾಗಿ ರಕ್ಷಿತ್ ಮಿಂಚಿದ್ದಾರೆ. ಹಾಗೆಯೇ ಗಡ್ಡ ಬಿಟ್ಟು ರಗಡ್ ಆಗಿ ಕೂಡ ಕಾಣಿಸಿಕೊಂಡಿದ್ದಾರೆ. `777 ಚಾರ್ಲಿ’ ಸಿನಿಮಾದ ಸೂಪರ್ ಸಕ್ಸಸ್ ನಂತರ ರಕ್ಷಿತ್ ಶೆಟ್ಟಿ ಅವರನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ.
ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಅವರ ಪಾತ್ರ ಎರಡು ಶೇಡ್ ಗಳಲ್ಲಿರುತ್ತದೆ. ಎರಡು ಕಾಲಘಟ್ಟಗಳಲ್ಲಿ ಕಥೆ ನಡೆಯಲಿದೆ. ರಕ್ಷಿತ್ ಶೆಟ್ಟಿ ಜೊತೆಗೆ ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ಗೋಪಾಲಕೃಷ್ಣ ದೇಶಪಾಂಡೆ, ರಮೇಶ್ ಇಂದಿರಾ ಮುಂತಾದವರು ನಟಿಸಿದ್ದಾರೆ.