ಈ ಹಿಂದೆ ರಕ್ಷಿತ್ ಶೆಟ್ಟಿ (Rakshit Shetty) ತಮ್ಮ ಅಭಿಮಾನಿಗಳಿಗೆ ಇನ್ ಡೈರೆಕ್ಟ್ ಆಗಿ ರಿಚರ್ಡ್ ಆಂಟನಿ (Richard Antony) ಕುರಿತು ಅಪ್ ಡೇಟ್ ವೊಂದನ್ನು ನೀಡಿದ್ದರು. ರಿಚರ್ಡ್ ಆಂಟನಿ ಯಾವಾಗಿಂದ ಶುರು ಎಂದು ಕೇಳಲಾದ ಪ್ರಶ್ನೆಗೆ ತಮ್ಮ ಉಳಿದವರು ಕಂಡಂತೆ ಸಿನಿಮಾ ರಿಲೀಸ್ ಡೇಟ್ ಹೇಳಿದ್ದರು. ಹಾಗಾಗಿ ಮಾರ್ಚ್ 28ರ ಡೇಟ್ ಗಾಗಿ ಅಭಿಮಾನಿಗಳು ಕಾಯುತ್ತಿದ್ದರು. ಆದರೆ, ಇಂದು ಆ ಕುರಿತು ಹೇಳದೇ ನಿರಾಸೆ ಮೂಡಿಸಿದ್ದಾರೆ ರಕ್ಷಿತ್ ಶೆಟ್ಟಿ.
ಇವತ್ತು ರಿಚರ್ಡ್ ಆಂಟನಿ ಕುರಿತಂತೆ ಒಂದಷ್ಟು ಮಾಹಿತಿಯನ್ನು ರಕ್ಷಿಕ್ ಹೇಳಲಿದ್ದಾರೆ ಎಂದೇ ನಂಬಲಾಗಿತ್ತು. ಆದರೆ, ಇಂದಿನ ದಿನಕ್ಕಿಂತ ಇನ್ನೊಂದು ವಿಶೇಷ ದಿನಾಂಕವನ್ನು ಗೊತ್ತು ಮಾಡಿದ್ದೇವೆ. ಅಂದು ರಿಚರ್ಡ್ ಆಂಟನಿ ಬಗ್ಗೆ ಮಾಹಿತಿ ನೀಡುವೆ ಎಂದು ರಕ್ಷಿತ್ ಬರೆದುಕೊಂಡಿದ್ದಾರೆ. ಉಳಿದವರೆ ಕಂಡಂತೆ ಸಿನಿಮಾವನ್ನೂ ಅವರು ನೆನಪಿಸಿಕೊಂಡಿದ್ದಾರೆ.
ಈ ಹಿಂದೆ ಹೊಂಬಾಳೆ ಸಂಸ್ಥೆಯ ಆಪ್ತರು ಕೂಡ ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತಾಡ್ತಾ ಒಂದಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದರು. ಮಾರ್ಚ್ ಕೊನೆಯ ವಾರದ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಚಿತ್ರಕ್ಕೆ ಮುಹೂರ್ತ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಹೊಂಬಾಳೆ ಫಿಲ್ಮ್ಸ್ (Hombale Films) ಅಂಗಳದಿಂದಲೇ ಬಂದಿತ್ತು. ಈ ಚಿತ್ರವನ್ನು ಅದ್ಧೂರಿಯಾಗಿ ತಯಾರಿಸುವುದಕ್ಕಾಗಿ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿತ್ತು. ಚುನಾವಣೆ ಕಾರಣದಿಂದಾಗಿ ಮುಂದೂಡುತ್ತಾರಾ ಅಥವಾ ಏಪ್ರಿಲ್ ನಲ್ಲಿ ಏನಾದರೂ ಮಾಹಿತಿ ನೀಡ್ತಾರಾ ಕಾದು ನೋಡಬೇಕು.
ಹಲವು ತಿಂಗಳ ಹಿಂದೆಯೇ ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಿತ್ತು.ರಕ್ಷಿತ್ ಶೆಟ್ಟಿ ನಟನೆಯಲ್ಲೇ ಬ್ಯುಸಿಯಾಗಿದ್ದರಿಂದ ಮುಹೂರ್ತಕ್ಕೆ ತಡವಾಗಿತ್ತು. ಸಪ್ತ ಸಾಗರದಾಚೆ ಶೂಟಿಂಗ್ ಮತ್ತು ಬಿಡುಗಡೆಯ ಎಲ್ಲ ಕೆಲಸಗಳನ್ನು ಮುಗಿಸಿ, ಸ್ಕ್ರಿಪ್ಟ್ ನಲ್ಲಿ ತೊಡಗಿದ್ದರು ರಕ್ಷಿತ್ ಶೆಟ್ಟಿ, ಈಗ ಸ್ಕ್ರಿಪ್ಟ್ ಕೆಲಸ ಕೂಡ ಬಹುತೇಕ ಮುಗಿದಿದ್ದು, ಶೀಘ್ರದಲ್ಲೇ ಶೂಟಿಂಗ್ ಕೂಡ ಶುರುವಾಗಲಿದೆಯಂತೆ.
ಈ ನಡುವೆ ಹೊಂಬಾಳೆ ಮತ್ತು ರಕ್ಷಿತ್ ನಡುವೆ ಬಿರುಕು ಉಂಟಾಗಿದ್ದು, ಬೇರೊಂದು ಸಂಸ್ಥೆಯು ರಿಚರ್ಡ್ ಆಂಟನಿ ಚಿತ್ರವನ್ನು ನಿರ್ಮಾಣ ಮಾಡಲಿದೆ ಎನ್ನುವ ಸುದ್ದಿಯೂ ಹರಿದಾಡಿತ್ತು. ಈ ಕುರಿತು ಹೊಂಬಾಳೆ ಫಿಲ್ಮ್ಸ್ ಆಪ್ತರೇ ಹೇಳುವಂತೆ, ‘ಸಿನಿಮಾ ಮುಹೂರ್ತಕ್ಕೆ ಹೊಂಬಾಳೆಯೇ ತಯಾರಿ ಮಾಡಿಕೊಳ್ಳುತ್ತಿದೆ ಅಂದ ಮೇಲೆ ಈ ಪ್ರಶ್ನೆಯೇ ಅಪ್ರಸ್ತುತ’ ಎನ್ನುತ್ತಾರೆ.