ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಈ ಬೆನ್ನಲ್ಲೇ ‘ಬಿ ಪಾರ್ಟ್’ ಅನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿತ್ತು. ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಬಿಡುಗಡೆ ಆಗಬೇಕಿತ್ತು. ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಆದರೆ, ನಿಗದಿತ ದಿನಾಂಕದಲ್ಲಿ ಸಿನಿಮಾ ರಿಲಿಸ್ ಆಗುತ್ತಿಲ್ಲ. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳಿಗೆ ನಿರಾಸೆ ಮೂಡಿದೆ.
ಈ ವೇಳೆಯಲ್ಲಿ ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ಸ್ಟಾರ್ ನಟರ ಚಿತ್ರಗಳು ತೆರೆ ಕಾಣಲು ಸಿದ್ಧತೆ ಮಾಡಿಕೊಳ್ಳುತ್ತಿವೆ. ಅಲ್ಲದೇ, ಪರಭಾಷೆಯ ಚಿತ್ರಗಳ ಹಾವಳಿಯೂ ಹೆಚ್ಚಾಗಿದೆ. ಒಂದೊಳ್ಳೆ ಸಿನಿಮಾ ಕಳೆದು ಹೋಗಬಾರದು ಎನ್ನುವ ಕಾರಣಕ್ಕಾಗಿ ಒಂದು ವಾರ ಚಿತ್ರ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದಾರೆ. ಅಕ್ಟೋಬರ್ 27ಕ್ಕೆ ಗ್ರ್ಯಾಂಡ್ ಆಗಿ ಸಪ್ತ ಸಾಗರದಾಚೆ ಎಲ್ಲೋ ಬಿ ಪಾರ್ಟ್ ಬಿಡುಗಡೆ ಆಗಲಿದೆ.
ರಕ್ಷಿತ್ ಶೆಟ್ಟಿ(Rakshit Shetty), ರುಕ್ಮಿಣಿ ವಸಂತ್ (Rukmini Vasanth) ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ (Tollywood) ಅತ್ಯುತ್ತಮ ಪ್ರತಿಕ್ರಿಯೆನ್ನು ಕಂಡಿದೆ. ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ.
‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೊಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.
Web Stories