`777 ಚಾರ್ಲಿ’ ಸಕ್ಸಸ್ ನಂತರ ಹೊಸ ಸಿನಿಮಾ ನಿರ್ಮಾಣಕ್ಕೆ ಮುಂದಾದ ರಕ್ಷಿತ್ ಶೆಟ್ಟಿ

Advertisements

ಹೊಸ ಪ್ರತಿಭೆಗಳಿಗೆ ಅವಕಾಶ ಕೊಟ್ಟು ನಿರ್ಮಾಣ ಮಾಡುವುದಕ್ಕೆ ರಕ್ಷಿತ್ ಶೆಟ್ಟಿ ಯಾವಾಗಲೂ ಮುಂದು. ಈಗ ರಕ್ಷಿತ್ ನೇತೃತ್ವದ ಪರಂವಃ ಸ್ಟುಡಿಯೋಸ್ ಕಡೆಯಿಂದ ಹೊಸ ಸಿನಿಮಾ ನಿರ್ಮಾಣ ಮಾಡುವುದಕ್ಕೆ ಮುಂದಾಗಿದ್ದಾರೆ. ಭಿನ್ನ ಕಥೆ `ಮಿಥ್ಯ’ ಚಿತ್ರಕ್ಕೆ ರಕ್ಷಿತ್ ಬಂಡವಾಳ ಹೂಡಿದ್ದಾರೆ.

`777 ಚಾರ್ಲಿ’ ಚಿತ್ರದ ಸಕ್ಸಸ್ ನಂತರ ರಕ್ಷಿತ್ ಶೆಟ್ಟಿ ಮತ್ತೆ ಹೊಸ ಸಿನಿಮಾ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಸುಮಂತ್ ಭಟ್ ನಿರ್ದೇಶನದ `ಮಿಥ್ಯ’ ಸಿನಿಮಾ ಪ್ರಯತ್ನದಲ್ಲೇ ಅವರು 11 ವರ್ಷದ ಬಾಲಕನ ಕಥೆಯನ್ನು ಹೇಳ ಹೊರಟಿದ್ದಾರೆ. ಬಾಲಕನ ನೋವಿನ ಕಥೆಯನ್ನು ಹೇಳುವ ಪ್ರಯತ್ನ ಮಾಡುತ್ತಿದ್ದಾರೆ. ಚಿತ್ರದ ಪ್ರಮುಖ ಪಾತ್ರದಲ್ಲಿ ಬಾಲನಟ ಆತಿಶ್ ಶೆಟ್ಟಿ ನಟಿಸಿದ್ದಾರೆ. ಇದನ್ನೂ ಓದಿ:ಶೂಟಿಂಗ್ ವೇಳೆ ಶಿಲ್ಪಾ ಶೆಟ್ಟಿ ಕಾಲಿಗೆ ಗಂಭೀರ ಪೆಟ್ಟು

Advertisements

ಪುಟ್ಟ ಬಾಲಕನ ತಂದೆ ತಾಯಿ ನಿಧನ ಹೊಂದುತ್ತಾರೆ. ಅವರ ನೆನಪುಗಳಿಂದ ಹೊರಬರಲಾರದ ಈ ಬಾಲಕ ಹೊಸ ಪ್ರಪಂಚವನ್ನು ಹುಡುಕಿಕೊಂಡು ಹೊರಡುತ್ತಾನೆ. ಹಳೆಯ ಸಂಬಂಧಗಳಲ್ಲಿ ಹೊಸತನ ಕಾಣುವುದರ ಜತೆಗೆ ಹೊಸ ಸ್ನೇಹಿತರಲ್ಲಿ ಹಳೆಯ ಗೆಳೆತನ ಹುಡುಕುವ ಪಯಣವೇ ಈ ಮಿಥ್ಯ. ಸದ್ಯ ಚಿತ್ರದ ಪೋಸ್ಟರ್ ಮೂಲಕ ಅಭಿಮಾನಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

Live Tv

Advertisements
Exit mobile version