‘ಬ್ಯಾಚುಲರ್ ಪಾರ್ಟಿ’ (Bachelor Party) ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ಸೈದುಲು ಅದಾವತ್ ತಿಳಿಸಿದ್ದಾರೆ. ಇದನ್ನೂ ಓದಿ:‘ಟೋಬಿ’ ನಟಿಗೆ ಸಿಕ್ತು ಬಿಗ್ ಚಾನ್ಸ್- ತಮಿಳು ನಟ ಸಿದ್ಧಾರ್ಥ್‌ಗೆ ಚೈತ್ರಾ ಆಚಾರ್ ನಾಯಕಿ
Advertisement
ಕಾಪಿರೈಟ್ ಅಡಿಯಲ್ಲಿ ಎಂಆರ್‌ಟಿ ಮ್ಯೂಸಿಕ್ ಮಾಲೀಕ ನವೀನ್ ಕುಮಾರ್ ದೂರು ದಾಖಲಿಸಿದ್ದಾರೆ. `ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಎರಡು ಹಾಡುಗಳನ್ನ ಅನುಮತಿ ಇಲ್ಲದೆ ಬಳಸಿದ್ದಾರೆ. ಇದರಲ್ಲಿ ಆರೋಪಿಯಾಗಿರುವವರು ಮೂವಿ ಸ್ಟುಡಿಯೋ ಮತ್ತು ಸಂಬಂಧಪಟ್ಟ ನಿರ್ಮಾಪಕರಿಗೆ ನೋಟಿಸ್ ನೀಡಿದ್ದೇವೆ ಎಂದು ಡಿಸಿಪಿ ಸೈದುಲು ಅದಾವತ್ ತಿಳಿಸಿದ್ದಾರೆ.
Advertisement
Advertisement
ಚಿತ್ರದ ಎರಡು ಟ್ಯೂನ್ ಬಳಕೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಇವತ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಸಿನಿಮಾ ಸಂಬಂಧ ಬೇರೆ ರಾಜ್ಯದಲ್ಲಿ ಇದ್ದಾರೆ. ಅವರು ಬೆಂಗಳೂರಿಗೆ ಬಂದ ನಂತರ ಹಾಜರಾಗುತ್ತೇವೆ ಎಂದಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.
Advertisement
ಏನಿದು ಪ್ರಕರಣ?
ರಕ್ಷಿತ್ ಶೆಟ್ಟಿ (Rakshit Shetty) ವಿರುದ್ಧ ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ನೀಡಿದ್ದಾರೆ. ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ ಹಾಡು’ ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಪರಮ್ವಾ ಸ್ಟುಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಬಳಕೆ ಆದ ‘ಗಾಳಿ ಮಾತು’ ಮತ್ತು `ನ್ಯಾಯ ಎಲ್ಲಿದೆ’ ಚಿತ್ರದ ಹಾಡುಗಳನ್ನು ಅಕ್ರಮವಾಗಿ ಬಳಕೆ ಮಾಡಿದ್ದಾರೆ. ಹಕ್ಕುಸ್ವಾಮ್ಯ ಹಾಗೂ ಪ್ರಸಾರದ ಹಕ್ಕನ್ನ ಖರೀದಿ ಮಾಡದೇ ಹಾಡುಗಳ ಬಳಕೆಯಾಗಿದೆ ಎಂದು ನವೀನ್ ಕುಮಾರ್ ಆರೋಪಿಸಿದ್ದಾರೆ.
2024ರ ಜನವರಿಯಲ್ಲಿ ಚಿತ್ರದ ಹಾಡುಗಳ ಬಳಕೆ ಬಗ್ಗೆ ಮಾತುಕತೆಯಾಗಿತ್ತು. ಆದರೆ ಈ ಸಿನಿಮಾದ ಹಾಡಿನ ಬಳಕೆ ಬಗ್ಗೆ ಮಾತುಕತೆ ಸರಿ ಹೊಂದದೇ ಇದ್ದರಿಂದ ಅಲ್ಲಿಗೆ ನಿಲ್ಲಿಸಲಾಗಿತ್ತು. ಬಳಿಕ 2024ರ ಮಾರ್ಚ್‌ನಲ್ಲಿ ಒಟಿಟಿಯಲ್ಲಿ ರಕ್ಷಿತ್ ಶೆಟ್ಟಿ `ಬ್ಯಾಚುಲರ್ ಪಾರ್ಟಿ’ ಸಿನಿಮಾ ರಿಲೀಸ್ ಆಗಿತ್ತು. ಈ ವೇಳೆ, ಸಿನಿಮಾ ಗಮಿಸಿದಾಗ ಎರಡು ಚಿತ್ರಗಳ ಹಾಡು ಬಳಕೆಯಾಗಿತ್ತು.