ಉಡುಪಿ: ನಟ ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದ್ದು, ರಕ್ಷಿತ್ ಶೆಟ್ಟಿ ತಮ್ಮ ತವರೂರು ಉಡುಪಿಗೆ ಆಗಮಿಸಿ ಸಿನಿಮಾ ವೀಕ್ಷಿಸಿದ್ದಾರೆ.
ಉಡುಪಿಯ ಕಲ್ಪನಾ ಸಿನಿಮಾ ಮಂದಿರಕ್ಕೆ ಆಗಮಿಸಿದ ರಕ್ಷಿತ್ ಶೆಟ್ಟಿ ಅಭಿಮಾನಿಗಳ ಜೊತೆ ಸಿನಿಮಾ ನೋಡಿದ್ದಾರೆ. ನಟಿ ಶಾನ್ವಿ ಶ್ರೀವಾಸ್ತವ್ ಕೂಡ ರಕ್ಷಿತ್‍ಗೆ ಸಾಥ್ ಕೊಟ್ಟಿದ್ದರು. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ರಕ್ಷಿತ್, ಶ್ರೀಮನ್ನಾರಾಯಣ ಚಿತ್ರಕ್ಕೆ ರಾಜ್ಯಾದ್ಯಂತ ಒಳ್ಳೆಯ ಪ್ರತಿಕ್ರಿಯೆ ಬರುತ್ತಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲೂ ಒಳ್ಳೆಯ ರೆಸ್ಪಾನ್ಸ್ ಇದೆ ಎಂದು ಖುಷಿ ಪಟ್ಟಿದ್ದಾರೆ.
Advertisement
Advertisement
ಹಿಂದಿ ಭಾಷೆಯಲ್ಲೂ ಸಿನಿಮಾ ಬಿಡುಗಡೆಯ ದಿನವನ್ನು ನಿಗದಿ ಮಾಡುತ್ತೇವೆ. ಮಲಯಾಳಿ, ತೆಲುಗು, ತಮಿಳು ಭಾಷೆಯಲ್ಲೂ ಸಿನಿಮಾ ಯಶಸ್ವಿ ಕಾಣುತ್ತಿದೆ. ನನ್ನ ಮುಂದಿನ ಚಿತ್ರ ‘ಪುಣ್ಯಕೋಟಿ’ ಕೂಡ ಫ್ಯಾಂಟಸಿ ರೀತಿಯಲ್ಲೇ ತೆರೆಗೆ ಬರಲಿದೆ. ಅದರ ತಯಾರಿ ಕೂಡ ನಡೆಯುತ್ತಿದೆ. ಇನ್ನೂ ‘ಪುಣ್ಯಕೋಟಿ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿಲ್ಲ. ಸದ್ಯ ನಮ್ಮ ಎಲ್ಲಾ ಗಮನ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾದ ಮೇಲಷ್ಟೇ ಇದೆ ಎಂದು ಹೇಳಿದರು.