Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಬ್ಬನಿ ತಬ್ಬಿದ ಇಳೆಯಲಿ ‘ಬ್ಯಾಚುಲರ್ ಪಾರ್ಟಿ’ ಕೊಟ್ಟ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಇಬ್ಬನಿ ತಬ್ಬಿದ ಇಳೆಯಲಿ ‘ಬ್ಯಾಚುಲರ್ ಪಾರ್ಟಿ’ ಕೊಟ್ಟ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

Cinema

ಇಬ್ಬನಿ ತಬ್ಬಿದ ಇಳೆಯಲಿ ‘ಬ್ಯಾಚುಲರ್ ಪಾರ್ಟಿ’ ಕೊಟ್ಟ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

Public TV
Last updated: September 3, 2022 2:49 pm
Public TV
Share
2 Min Read
FotoJet 13
SHARE

ರಕ್ಷಿತ್ ಶೆಟ್ಟಿ ಈಗ ಕೇವಲ ನಾಯಕರಾಗಷ್ಟೇ ಅಲ್ಲ. ನಿರ್ಮಾಪಕರಾಗೂ ಜನಪ್ರಿಯ. ತಮ್ಮ ಪರಂವಃ ಸ್ಟುಡಿಯೋಸ್ ಮೂಲಕ ಯುವಪ್ರತಿಭೆಗಳಿಗೆ ಅವಕಾಶ ನೀಡುತ್ತಾ ಬರುತ್ತಿದ್ದಾರೆ ರಕ್ಷಿತ್ ಶೆಟ್ಟಿ.  ಪ್ರಸ್ತುತ ಪರಂವಃ ಸ್ಟುಡಿಯೋಸ್ ನಿರ್ಮಿಸುತ್ತಿರುವ “ಬ್ಯಾಚುಲರ್ ಪಾರ್ಟಿ” ಹಾಗೂ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರಗಳ ಮುಹೂರ್ತ ಸಮಾರಂಭ ಧರ್ಮಗಿರಿ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.

FotoJet 3 3

ಚಿತ್ರರಂಗದಲ್ಲಿ ಹೊಸರೀತಿಯ ಕಥೆಗಳು ಬರಬೇಕು. ಹೊಸರೀತಿಯಲ್ಲಿ ಯೋಚಿಸುವ ಕಥೆಗಾರರನ್ನು ನಾವು ಬರಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ನಮ್ಮ ಪರಂವಃ ಸ್ಟುಡಿಯೋಸ್ ಸದಾ ಸಿದ್ದ.ನನ್ನ ಜೊತೆ “ಕಿರಿಕ್ ಪಾರ್ಟಿ” ಸಮಯದಿಂದ ಜೊತೆಗಿರುವ ಚಂದ್ರಜಿತ್ ಬೆಳ್ಳಿಯಪ್ಪ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರವನ್ನು ಹಾಗೂ ಅಭಿಜಿತ್ ಮಹೇಶ್ “ಬ್ಯಾಚುಲರ್ ಪಾರ್ಟಿ” ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಎರಡು ಬೇರೆಯದೇ ತರಹದ ಕಥೆಗಳು. ಎರಡು ಚಿತ್ರಗಳಿಗೂ ಶುಭವಾಗಲಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ರಕ್ಷಿತ್ ಶೆಟ್ಟಿ. ಇದನ್ನೂ ಓದಿ: ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್‌ ತನ್ನಿ ಎಂದ ರಿಯಲ್‌ ಸ್ಟಾರ್‌ ಉಪೇಂದ್ರ

FotoJet 1 8

ನನಗೆ ಅವಕಾಶ ನೀಡಿರುವ ರಕ್ಷಿತ್ ಶೆಟ್ಟಿ ಅವರಿಗೆ ಧನ್ಯವಾದ. “ಬ್ಯಾಚುಲರ್ ಪಾರ್ಟಿ” ಹಾಸ್ಯ ಪ್ರಧಾನವಾದ ಉತ್ತಮ ಮನೋರಂಜನೆಯ ಚಿತ್ರ. ದಿಗಂತ್ ಮಂಚಾಲೆ, ರಿಷಬ್ ಶೆಟ್ಟಿ, ಅಚ್ಯುತಕುಮಾರ್, ಸಿರಿ ರವಿಕುಮಾರ್ ಮುಂತಾದವರು ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹೆಚ್ಚಿನ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತದೆ ಎಂದರು ನಿರ್ದೇಶಕ ಅಭಿಜಿತ್ ಮಹೇಶ್. ನಾನು, ಅಭಿಜಿತ್ ಹಾಗೂ ಚಂದ್ರಜಿತ್ ಒಟ್ಟಾಗಿ “ಕಿರಿಕ್ ಪಾರ್ಟಿ” ಯಲ್ಲಿ ಕೆಲಸ ಮಾಡಿದವರು. ಈಗ ಮತ್ತೊಮ್ಮೆ ಒಟ್ಟಾಗಿ ಸೇರಿದ್ದೇವೆ‌. ಅಭಿಜಿತ್ ಮಹೇಶ್ “ಬ್ಯಾಚುಲರ್ ಪಾರ್ಟಿ” ಯಲ್ಲಿ ಒಳ್ಳೆಯ ಪಾತ್ರ ನೀಡಿದ್ದಾರೆ. ಎರಡೂ ತಂಡಕ್ಕೂ ಒಳಿತಾಗಲಿ ಎಂದರು ರಿಷಬ್ ಶೆಟ್ಟಿ.

FotoJet 2 8

ನನಗೆ ಪರಂವಃ ಸ್ಟುಡಿಯೋಸ್ ನಲ್ಲಿ ಇದು ಎರಡನೇ ಚಿತ್ರ. ಅಭಿಜಿತ್ ಮಹೇಶ್ ಮಾಡಿಕೊಂಡಿರುವ ಕಥೆ ಚೆನ್ನಾಗಿದೆ. ಎಲ್ಲರನ್ನು ನಕ್ಕು ನಗಿಸುವ ಉತ್ತಮ ಕಾಮಿಡಿ ಜಾನರ್ ನ ಚಿತ್ರ ಇದಾಗಲಿದೆ ಎಂದು ನಟ ದಿಗಂತ್ ತಿಳಿಸಿದರು. ಚಿತ್ರದಲ್ಲಿ ಅಭಿನಯಿಸುತ್ತಿರುವ ಸಿರಿ ರವಿಕುಮಾರ್ ಹಾಗೂ ಜಯಲಕ್ಷ್ಮಿ ಸಹ ಪತ್ರಿಕಾಗೋಷ್ಠಿಯಲ್ಲಿದ್ದರು. ಚಿತ್ರದ ಆರಂಭದ ದಿನದಿಂದಲೂ  ನನ್ನ ತಂಡಕ್ಕೆ ಒಳ್ಳೆಯ ಕನಸುಗಳನ್ನು ತುಂಬಿದ್ದೀನಿ. ಅವರ ಕನಸುಗಳನ್ನು ನನಸು ಮಾಡುವ ಜವಾಬ್ದಾರಿ ನನ್ನ ಮೇಲಿದೆ. ನನ್ನ ನಂಬಿ ಬಂಡವಾಳ ಹಾಕಿರುವ ನಿರ್ಮಾಪಕರಿಗೆ ಹಣ ವಾಪಸು ಬರಬೇಕು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ.‌ ನೋಡಿದ ಜನ ಕೆಲವು ವರ್ಷಗಳವರೆಗೂ  ನೆನಪಿನಲ್ಲಿಟ್ಟಿಕೊಳ್ಳಬೇಕು ಅಂತಹ ಸಿನಿಮಾ ಮಾಡಲು ಪ್ರಯತ್ನ ಮಾಡುತ್ತೇನೆ. ರಾತ್ರಿ ಮಲಗಿದ್ದಾಗ ಒಂದು ಒಳ್ಳೆಯ ಕನಸು ಬೀಳುತ್ತದೆ. ಆ ಕನಸಿನಿಂದ ಬೆಳಗ್ಗೆ ಎದ್ದ ಕೂಡಲೇ ಒಂದು ತರಹ ಉತ್ಸಾಹವಿರುತ್ತದೆ. ಆ ರೀತಿ ನಮ್ಮ ಚಿತ್ರದ ಕಥೆ ಸಾಗುತ್ತದೆ. “ಇಬ್ಬನಿ ತಬ್ಬಿದ ಇಳೆಯಲಿ” ಒಂದೊಳ್ಳೆ ರೊಮ್ಯಾನ್ಸ್ ಡ್ರಾಮ ಎನ್ನಬಹುದು ಎಂದು ನಿರ್ದೇಶಕ ಚಂದ್ರಜಿತ್ ಬೆಳ್ಳಿಯಪ್ಪ ಚಿತ್ರದ ಬಗ್ಗೆ ಮಾಹಿತಿ ನೀಡಿದರು. ಇಂತಹ ಒಳ್ಳೆಯ ತಂಡದ ಜೊತೆಗೆ ಭಾಗಿಯಾಗಿರುವುದಕ್ಕೆ ಸಂತೋಷವಾಗಿದೆ ಎಂದು ನಾಯಕ ವಿಹಾನ್ ತಿಳಿಸಿದರು. “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರದಲ್ಲಿ  ಅಭಿನಯಿಸುತ್ತಿರುವುದು ಖುಷಿ ತಂದಿದೆ. ಪಾತ್ರ ಕೂಡ ಚೆನ್ನಾಗಿದೆ.‌ ಇದು ನನ್ನ ಮೊದಲ ಪತ್ರಿಕಾಗೋಷ್ಠಿ ಎಂದರು ನಾಯಕಿ ಅಂಕಿತಾ ಅಮರ್.

Live Tv
[brid partner=56869869 player=32851 video=960834 autoplay=true]

TAGGED:Ankita AmarDiganthnew movieRakshit ShettyRishabh ShettysandalwoodVihaanಅಂಕಿತಾ ಅಮರ್‌ದಿಗಂತ್ರಕ್ಷಿತ್ ಶೆಟ್ಟಿರಿಷಭ್ ಶೆಟ್ಟಿವಿಹಾನ್ಸ್ಯಾಂಡಲ್ ವುಡ್ಹೊಸ ಸಿನಿಮಾ
Share This Article
Facebook Whatsapp Whatsapp Telegram

Cinema news

sudeep darshan
ದರ್ಶನ್‌ಗೆ ಯಾವಾಗ್ಲೂ ಒಳ್ಳೆಯದಾಗಲಿ ಎಂದು ಬಯಸುತ್ತೇನೆ: ಸುದೀಪ್
Cinema Latest Main Post Sandalwood
Sangeetha Bhat
ನೀಳ ಕೇಶರಾಶಿಗೆ ಕತ್ತರಿ ಹಾಕಿದ ಸಂಗೀತಾ ಭಟ್
Cinema Latest Sandalwood Top Stories
Rashmika Mandanna Mysaa
ರಶ್ಮಿಕಾ ಮಂದಣ್ಣ `ಮೈಸಾ’ ಸಿನಿಮಾದ ಮೊದಲ ಗ್ಲಿಂಪ್ಸ್‌ ರಿಲೀಸ್
Cinema Latest South cinema Top Stories
Allu Arjun Trivikram 3
ಸಾವಿರ ಕೋಟಿ ಬಜೆಟ್‌ನಲ್ಲಿ ಅಲ್ಲು ಅರ್ಜುನ್ ಮತ್ತೊಂದು ಸಿನಿಮಾ..!
Cinema Latest Top Stories

You Might Also Like

Explosion In Dhaka
Latest

ಬಾಂಗ್ಲಾದೇಶ ಬಿಕ್ಕಟ್ಟು ಮತ್ತಷ್ಟು ತೀವ್ರ – ಢಾಕಾದಲ್ಲಿ ಸ್ಫೋಟ; ಓರ್ವ ಸಾವು

Public TV
By Public TV
19 minutes ago
Alcoholic Drink copy
Bengaluru City

ಗ್ಯಾರಂಟಿಗಾಗಿ 569 ಮದ್ಯದಂಗಡಿಗಳಿಗೆ ಇ-ಹರಾಜು ಲೈಸೆನ್ಸ್ – 700 ಕೋಟಿ ಆದಾಯ ಸಂಗ್ರಹ ಗುರಿ

Public TV
By Public TV
22 minutes ago
Mysuru Ahinda Samavesha Meeting
Districts

ಜ.25ಕ್ಕೆ ಸಿಎಂ ತವರಿನಲ್ಲಿ ಅಹಿಂದ ಸಮಾವೇಶ

Public TV
By Public TV
51 minutes ago
KN Rajanna
Districts

ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡಲ್ಲ: ರಾಜಣ್ಣ

Public TV
By Public TV
1 hour ago
digital arrest old man
Crime

‘ಡಿಜಿಟಲ್‌ ಅರೆಸ್ಟ್‌’ ವಂಚನೆ; 9 ಕೋಟಿ ಹಣ ಕಳೆದುಕೊಂಡ 85ರ ವೃದ್ಧ

Public TV
By Public TV
2 hours ago
Unnao Rape Survivor Met Rahul Gandhi
Latest

ರಾಹುಲ್‌ ಗಾಂಧಿ ಭೇಟಿಯಾದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?