ಸಮಂತಾ ನಟನೆಯ ‘ಯಶೋದಾ’ಗೆ ಸಿನಿಮಾಗೆ ರಕ್ಷಿತ್ ಶೆಟ್ಟಿ ಸಾಥ್

Public TV
1 Min Read
FotoJet 3 50

ಮಂತಾ (Samantha) ಅಭಿನಯದ ‘ಯಶೋದಾ’ (Yashoda) ಚಿತ್ರವು ನವೆಂಬರ್ 11ರಂದು ಜಗತ್ತಿನಾದ್ಯಂತೆ ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು, ಈ ಚಿತ್ರದ ಬಹುನಿರೀಕ್ಷಿತ ಟ್ರೇಲರ್ ಬಿಡುಗಡೆಯಾಗಲಿದೆ.

samantha 2 1

ಐದು ಭಾಷೆಗಳ ಟ್ರೇಲರ್ಗಳ ಪೈಕಿ ಕನ್ನಡದ ಟ್ರೇಲರ್ನ್ನು ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ  (Rakshit Shetty) ಇದೇ ಅಕ್ಟೋಬರ್ 27ರಂದು ಸಂಜೆ 5:36ಕ್ಕೆ ಬಿಡುಗಡೆ ಮಾಡಲಿದ್ದಾರೆ. ಬೇರೆ ಭಾಷೆಗಳ ಟ್ರೇಲರ್ಗಳನ್ನು (trailer) ಆಯಾ ಭಾಷೆಗಳ ಜನಪ್ರಿಯ ನಟರು ಬಿಡುಗಡೆ ಮಾಡಲಿದ್ದಾರೆ. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

samantha 4

‘ಯಶೋದಾ’ ಒಂದು ಹೊಸ ಶೈಲಿಯ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಈ ಚಿತ್ರವನ್ನು ಶಿವಲೆಂಕ ಕೃಷ್ಣ ಪ್ರಸಾದ್ ತಮ್ಮ ಶ್ರೀದೇವಿ ಮೂವಿ ಪ್ರೊಡಕ್ಷನ್ಸ್ ಬ್ಯಾನರ್ನಡಿ ನಿರ್ಮಿಸಿದ್ದಾರೆ. ಹರಿ-ಹರೀಶ್ ಈ ಚಿತ್ರವನ್ನು ಜಂಟಿಯಾಗಿ ನಿರ್ದೇಶಿಸಿದ್ದಾರೆ. ಸಮಂತಾ ಜತೆಗೆ ಈ ಚಿತ್ರದಲ್ಲಿ ವರಲಕ್ಷ್ಮೀ ಶರತ್ಕುಮಾರ್, ಉನ್ನಿ ಮುಕುಂದನ್, ರಾವ್ ರಮೇಶ್, ಮುರಳಿ ಶರ್ಮ, ಸಂಪತ್ ರಾಜ್, ಶತ್ರು, ಮಧಿರಿಮಾ, ಕಲ್ಪಿಕಾ ಗಣೇಶ್, ದಿವ್ಯ ಶ್ರೀಪಾದ, ಪ್ರಿಯಾಂಕಾ ಶರ್ಮ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಎಂ. ಸುಕುಮಾರ್ ಅವರ ಛಾಯಾಗ್ರಹಣವಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *