ಬಾಲಿವುಡ್ (Bollywood) ನ ಖ್ಯಾತ ನಟಿ ರಕುಲ್ ಪ್ರೀತ್ ಸಿಂಗ್ ಸದ್ಯ ಮಾಲ್ಡೀವ್ಸ್ (Maldives) ಪ್ರವಾಸದಲ್ಲಿ ಇದ್ದಾರೆ. ಸಮುದ್ರದ ದಂಡೆಯಲ್ಲಿ ಮೈಮರೆತು ಬಿಕಿನಿಯಲ್ಲಿ (Bikini) ಕುಣಿದಿದ್ದಾರೆ. ಆ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲೂ ಶೇರ್ ಮಾಡಿದ್ದಾರೆ. ಅರಿಶಿಣ ಬಣ್ಣದ ಬಿಕಿನಿ ಧರಿಸಿರುವ ರಕುಲ್ ಪ್ರೀತ್ ಸಮುದ್ರಕ್ಕೂ ಬಿಸಿ ಮುಟ್ಟಿಸುವಷ್ಟು ಹಾಟ್ ಹಾಟ್ ಆಗಿ ಕಂಡಿದ್ದಾರೆ.
Advertisement
ಈ ಹಿಂದೆ ಡೇಟಿಂಗ್ ವಿಚಾರವಾಗಿ ರಕುಲ್ ಪ್ರೀತ್ ಸಿಂಗ್ (Rakul Preet Singh) ಸಾಕಷ್ಟು ಸುದ್ದಿಯಲ್ಲಿದ್ದರು. ಅವರ ಬಾಯ್ಫ್ರೆಂಡ್ ನಟ, ನಿರ್ಮಾಪಕ ಜ್ಯಾಕಿ ಭಗ್ನಾನಿ ‘ನೀನಿಲ್ಲದೆ ದಿನಗಳು ಎಂದಿನಂತೆ ದಿನಗಳಾಗಿರುವುದಿಲ್ಲ. ನೀನಿಲ್ಲದೆ ಎಂಥಾ ರುಚಿಕರ ತಿನಿಸನ್ನೂ ಆಸ್ವಾದಿಸಲಾಗುವುದಿಲ್ಲ. ನನ್ನ ಪಾಲಿಗೆ ಜಗತ್ತೇ ಆಗಿರುವ ಪ್ರೀತಿಯ ಪ್ರಿಯತಮೆಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಈ ದಿನ ನಿಮ್ಮಂತೆಯೇ ಸುಂದರವಾಗಿರಲಿ, ನಿಮ್ಮ ನಗುವಿನಂತೆಯೇ ಪ್ರಜ್ವಲಿಸಲಿ. ಹ್ಯಾಪಿ ಬರ್ತ್ಡೇ ಮೈ ಲವ್’ ಎಂದು ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಳ್ಳುವ ಮೂಲಕ ಪ್ರೀತಿಯನ್ನು ಒಪ್ಪಿಕೊಂಡಿದ್ದರು. ಇದನ್ನೂ ಓದಿ:ಕನ್ನಡ ಚಿತ್ರರಂಗಕ್ಕೆ ಜೆಕೆ ಗುಡ್ ಬೈ- ಅಷ್ಟಕ್ಕೂ ಆಗಿದ್ದೇನು.?
Advertisement
Advertisement
ಥ್ಯಾಂಕ್ಯು ಮೈ ಲವ್. ಈ ವರ್ಷ ನನಗೆ ಸಿಕ್ಕ ಅತ್ಯುತ್ತಮ ಉಡುಗೊರೆ ನೀವೇ. ನನ್ನ ಬದುಕಿಗೆ ಬಣ್ಣಗಳನ್ನು ತುಂಬಿದ ನಿಮಗೆ ಧನ್ಯವಾದಗಳು. ನನ್ನನ್ನ ಸದಾ ನಗುವಂತೆ ಮಾಡುವ ನಿಮಗೆ ಧನ್ಯವಾದಗಳು ಎಂದು ಜ್ಯಾಕಿ ಭಗ್ನಾನಿ ಅವರನ್ನು ಉಲ್ಲೇಖಿಸಿ ಇನ್ಸ್ಟಾಗ್ರಾಮ್ನಲ್ಲಿ ನಟಿ ರಕುಲ್ ಪ್ರೀತ್ ಸಿಂಗ್ ಬರೆದುಕೊಳ್ಳುವ ಮೂಲಕವಾಗಿ ತಮ್ಮ ಬಾಯ್ ಫ್ರೆಂಡ್ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
Advertisement
ಸ್ಯಾಂಡಲ್ವುಡ್, ಬಾಲಿವುಡ್ ಸಿನಿಮಾಗಳಲ್ಲಿ ರಕುಲ್ ಪ್ರೀತಿ ಸಿಂಗ್ ನಟಿಸಿದ್ದಾರೆ. ಕನ್ನಡದ ಗಿಲ್ಲಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಕುಲ್ ಪ್ರೀತ್ ಸಿಂಗ್ ಕಿಕ್ 2, ಸರೈನೋಡು, ನಾನಕು ಪ್ರೇಮತೋ, ಸ್ಪೈಡರ್ ಮುಂತಾದ ಹಿಟ್ ಚಿತ್ರಗಳಲ್ಲಿ ಅಭಿನಯಿಸುವ ಮೂಲಕವಾಗಿ ಅಪಾರ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿದ್ದಾರೆ.