ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಇಂದು ನವದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.
ಇಂದಿಗೆ ಗೌರಿ ಲಂಕೇಶ್ ಹತ್ಯೆಯಾಗಿ ಒಂದು ತಿಂಗಳಾದರೂ ಇದುವರೆಗೂ ಹಂತಕರ ಸುಳಿವು ಸಿಕ್ಕಿಲ್ಲ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಗೌರಿ ಹತ್ಯೆಯನ್ನು ಸಂಭ್ರಮಿಸಿದ ವ್ಯಕ್ತಿಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಫಾಲೋ ಮಾಡುತ್ತಿದ್ದು, ಪ್ರಧಾನಿ ನಡೆಯನ್ನು ವಿರೋಧಿಸಿ ದೊಡ್ಡ ಮಟ್ಟದ ರ‍್ಯಾಲಿ ಮಾಡಲು ಚಿಂತಿಸಲಾಗಿದೆ.
Advertisement
ಗೌರಿ ಲಂಕೇಶ್ ಹತ್ಯೆ ವಿರೋಧಿ ವೇದಿಕೆಯಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಮಧ್ಯಾಹ್ನ ಒಂದು ಗಂಟೆಗೆ ನವದೆಹಲಿಯ ಮಂಡಿ ಹೌಸ್‍ನಲ್ಲಿ ಪ್ರತಿಭಟನೆ ಆರಂಭವಾಗಲಿದೆ. ಮಂಡಿ ಹೌಸ್ ನಿಂದ ಜಂತರ್ ಮಂತರ್ ತನಕ ಪಾದಯಾತ್ರೆ ಮಾಡುವ ಮೂಲಕ ಪ್ರತಿಭಟನಾಕಾರರು ತಮ್ಮ ವಿರೋಧವನ್ನು ವ್ಯಕ್ತಪಡಿಸಲಿದ್ದಾರೆ.
Advertisement
ಪ್ರತಿಭಟನೆಯಲ್ಲಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಹಿರಿಯ ಪತ್ರಕರ್ತ ಕುಲದೀಪ್ ನಾಯರ್, ಮರಿಯಂ ದಾವಳೆ, ರಾಜ್ಯ ಹೈಕೊರ್ಟ್ ನ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸೇರಿದಂತೆ ಹಲವು ರಾಜ್ಯಗಳಿಂದ ವಿವಿಧ ಕ್ಷೇತ್ರಗಳ ಗಣ್ಯರು ಭಾಗಿಯಾಗಲಿದ್ದಾರೆ.