ಖ್ಯಾತ ನಿರ್ದೇಶಕ ಶಂಕರ್ (Shankar) ಮತ್ತು ರಾಮ್ ಚರಣ್ ಕಾಂಬಿನೇಷನ್ ನ ಗೇಮ್ ಚೇಂಜರ್ ಕಥೆ ಲೀಕ್ ಆಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಪವನ್ ಕಲ್ಯಾಣ್ (Pawan Kalyan) ಬದುಕಿನ ಕುರಿತಾದ ಕಥೆಯು ಸಿನಿಮಾದಲ್ಲಿದ್ದು, ಪವನ್ ಕಲ್ಯಾಣ್ ಪಾತ್ರವನ್ನು ರಾಮ್ ಚರಣ್ (Ram Charan) ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಕುರಿತಂತೆ ಚಿತ್ರತಂಡ ಯಾವುದೇ ಮಾಹಿತಿ ಸಿಕ್ಕಿಲ್ಲ.
Advertisement
ಈ ನಡುವೆ ಮತ್ತೊಂದು ಸುದ್ದಿ ಸಖತ್ ಚರ್ಚೆಗೆ ಗ್ರಾಸವಾಗಿದ್ದು, ‘ಗೇಮ್ ಜೇಂಜರ್’ (Game Changer) ಸಿನಿಮಾ ಎರಡು ಭಾಗಗಳಾಗಿ ತೆರೆಯ ಮೇಲೆ ಅಬ್ಬರಿಸಲಿದೆಯಂತೆ. ಸದ್ಯ ಈ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
Advertisement
Advertisement
‘ಆರ್‌ಆರ್‌ಆರ್’ (RRR) ಸಿನಿಮಾದ ಸಕ್ಸಸ್ ನಂತರ ಎಸ್. ಶಂಕರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಗೇಮ್ ಚೇಂಜರ್’ ಸಿನಿಮಾದಲ್ಲಿ ರಾಮ್ ಚರಣ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಇತ್ತೀಚೆಗೆ ಮೈಸೂರಿನಲ್ಲಿ ನಡೆದಿತ್ತು. ಆದರೆ ಸಿನಿಮಾಗೂ ಮೈಸೂರಿಗೂ ಏನು ಲಿಂಕ್ ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲವಿದೆ.
Advertisement
‘ಬಾಹುಬಲಿ 2’ ರಿಲೀಸ್ ಆದ ಬಳಿಕ ಎರಡು ಭಾಗಗಳಲ್ಲಿ ಕಥೆ ಹೇಳುವ ಟ್ರೆಂಡ್ ಜೋರಾಗಿದೆ. ಇದೀಗ ಬಹುತೇಕ ಸ್ಟಾರ್ ನಟರ ಸಿನಿಮಾಗಳು ಎರಡು ಭಾಗಗಳಾಗಿ ಬರುತ್ತಿವೆ. ಹಾಗಾಗಿ ‘ಗೇಮ್ ಚೇಂಜರ್’ ನಿರ್ಮಾಪಕ ದಿಲ್ ರಾಜು ಎರಡು ಪಾರ್ಟ್‌ಗಳಲ್ಲಿ ಸಿನಿಮಾ ತರೋದಕ್ಕೆ ಪ್ಲ್ಯಾನ್ ಮಾಡಿದ್ದಾರೆ. ನಾಯಕಿಯಾಗಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ನಟಿಸಿದ್ದಾರೆ.