ಬೆಂಗಳೂರು: ಹುಬ್ಬಳ್ಳಿಯಲ್ಲಿ (Hubballi) ಇಬ್ಬರನ್ನು ಹಳೇ ಕೇಸ್‌ಗೆ ಈಗ ಬಂಧಿಸಿದ್ದಾರೆ. 30 ವರ್ಷದ ಪ್ರಕರಣಕ್ಕೆ ಮರುಜೀವ ಕೊಡುತ್ತಿದ್ದಾರೆ. ಕಾಂಗ್ರೆಸ್ (Congress) ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 30 ವರ್ಷಗಳ ಬಳಿಕ ಹುಬ್ಬಳ್ಳಿಯಲ್ಲಿ ರಾಮಜನ್ಮ ಭೂಮಿ ಕಾರ್ಯಕರ್ತರನ್ನು ಜೈಲಿಗಟ್ಟಿದ್ದಾರೆ. ರಾಮಭಕ್ತರ ಮೇಲೆ ಕೇಸ್ ಹಾಕಿದ್ದಾರೆ. ಆಗ ಕಲ್ಲು ತೂರಾಟ ಮಾಡಿದ್ದಾರೆ ಎಂದು ಈಗ ಕೇಸ್ ರೀ ಓಪನ್ ಮಾಡಿ ಬಂಧಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: 2024ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ – ಸಿದ್ದರಾಮಯ್ಯ
ರಾಮಮಂದಿರ ನಿರ್ಮಾಣ ಚರಿತ್ರೆಯಲ್ಲಿ ದಾಖಲಾಗುವ ಐತಿಹಾಸಿಕ ಕ್ಷಣ. ನಾವು ಕರಸೇವೆ ಮಾಡಿದ್ದೇವೆ, ಹಲವರು ಪ್ರಾಣ ತ್ಯಾಗ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಈಗ ಕರಸೇವಕರನ್ನು ಭಯಭೀತಗೊಳಿಸಲು ಹೊರಟಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಅಯೋಧ್ಯೆಯಲ್ಲಿರೋದು ಬಿಜೆಪಿ ರಾಮ, ನಮ್ಮ ರಾಮ ಸಿದ್ದರಾಮಯ್ಯ: ಹೆಚ್. ಆಂಜನೇಯ
ದ್ವೇಷದ ರಾಜಕಾರಣಕ್ಕೆ ಸರ್ಕಾರ ಪ್ರತಿಫಲ ಅನುಭವಿಸುತ್ತದೆ. ಯಡಿಯೂರಪ್ಪ (BS Yediyurappa) ಅವರು ಕೂಡ ರಾಮಜನ್ಮ ಭೂಮಿ ಹೋರಾಟಕ್ಕೆ ಹೋಗಿದ್ದರು. ನಾನು ರಾಮಜನ್ಮ ಭೂಮಿ ಹೋರಾಟದಲ್ಲಿ ಭಾಗವಹಿಸಿದ್ದೆ. ನನ್ನನ್ನು ಬಂಧಿಸುತ್ತೀರಾ ಎಂದು ಸವಾಲು ಹಾಕಿದರು. ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳ ಕಗ್ಗೊಲೆಗಳು ಆಗಿದ್ದವು. ಈಗ ರಾಮಭಕ್ತರ ಬಂಧನ ಸರ್ಕಾರದ ಟಿಪ್ಪು ಸಂಸ್ಕೃತಿಯನ್ನು ತೋರಿಸುತ್ತೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪ್ರತಾಪ್ ಸಿಂಹ, ಅವರ ಸಹೋದರ ಹೆದರುವ ಅಗತ್ಯವಿಲ್ಲ, ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ: ವಿಜಯೇಂದ್ರ