ಹುಬ್ಬಳ್ಳಿ: ರಾಜ್ಯದಲ್ಲಿ ಬರೋಬ್ಬರಿ 31 ವರ್ಷಗಳ ಬಳಿಕ ರಾಮಜನ್ಮಭೂಮಿ (Ram Janambhoomi) ಹೋರಾಟದ ಪ್ರಕರಣಕ್ಕೆ ಮರುಜೀವ ಸಿಕ್ಕಿರುವುದು ನಾನಾ ರೀತಿಯ ಚರ್ಚೆಗೆ ಆಸ್ಪದವಾಗಿದೆ.
ಅಯೋಧ್ಯೆ ಕರಸೇವೆಗೂ (Ayodhya Karaseva) ಮುನ್ನ 1992ರ ಡಿಸೆಂಬರ್ 5ರಂದು ಹುಬ್ಬಳ್ಳಿ ನಗರದಲ್ಲಿ ಗಲಭೆ (Hubballi Riots) ಸಂಭವಿಸಿತ್ತು. ಒಂದು ಮಳಿಗೆಗೆ ಬೆಂಕಿ ಹಚ್ಚಿದ್ದ ಆರೋಪ ಸಂಬಂಧ 9 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಹುಬ್ಬಳ್ಳಿಯ ಶಹರ ಠಾಣೆ ಪೊಲೀಸರು ಮರುಜೀವ ನೀಡಿದ್ದಾರೆ.
Advertisement
Advertisement
ಘಟನೆ ನಡೆದ 31 ವರ್ಷಗಳ ಬಳಿಕ, 52 ವರ್ಷದ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಶ್ರೀಕಾಂತ್ ಪೂಜಾರಿಯನ್ನು ಕಳೆದ ಶುಕ್ರವಾರವೇ ಕೋರ್ಟ್ ಮುಂದೆ ಹಾಜರುಪಡಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಅಲ್ಲದೇ, ಪ್ರಕರಣದ ಉಳಿದ ಆರೋಪಿಗಳ ಪತ್ತೆಗೂ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಅಂದು ಹೋರಾಡಿದ್ದಕ್ಕೆ ಈಗ ರಾಮಭಕ್ತರನ್ನು ಬಂಧಿಸ್ತಿದ್ದಾರೆ, ನನ್ನನ್ನೂ ಬಂಧಿಸ್ತಾರಾ? – ಆರ್.ಅಶೋಕ್ ಕಿಡಿ
Advertisement
ಗಲಭೆ ನಡೆದಾಗ ಈ ಆರೋಪಿಗಳೆಲ್ಲಾ 30 ವಯಸ್ಸಿನ ಆಸುಪಾಸಿನವರಾಗಿದ್ದರು. ಇದೀಗ ಇವರಿಗೆಲ್ಲಾ 65-70 ವರ್ಷ ವಯಸ್ಸಾಗಿದೆ. ಆರೋಪಿಗಳ ಪೈಕಿ ಮೂವರು ಮೃತಪಟ್ಟಿದ್ದಾರೆ.
Advertisement
ದಿಢೀರ್ ಎಂದು 31 ವರ್ಷದ ಹಿಂದಿನ ಕೇಸ್‌ಗೆ ಮರುಜೀವ ನೀಡಿದ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗ್ತಿದೆ. ಇದು ರಾಜಕೀಯಪ್ರೇರಿತ ಎಂದು ಕಾಂಗ್ರೆಸ್ ವಿರುದ್ಧ ಆರೋಪಿ ರಾಜು ಧರ್ಮಸಾ ಆಕ್ರೋಶ ಹೊರಹಾಕಿದ್ದಾರೆ.