ಬೆಂಗಳೂರು: ಹುಬ್ಬಳ್ಳಿ ಗಲಭೆ (Hubballi Riots) ವಿಚಾರವಾಗಿ ಹಿಂದೂ (Hindu) ಕಾರ್ಯಕರ್ತರ ಬಂಧನ ಉದ್ದೇಶಪೂರ್ವಕ ಅಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ (Parameshwar) ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಹಳೆ ಪ್ರಕರಣಗಳನ್ನು ಕ್ಲೀಯರ್ ಮಾಡಿ ಎಂದುಆದೇಶ ಕೊಟ್ಟಿದ್ದೇವೆ. ಅದರಲ್ಲಿ ಹುಬ್ಬಳ್ಳಿಯಲ್ಲಿ ಅವರನ್ನು ಅರೆಸ್ಟ್ ಮಾಡಿದ್ದಾರೆ. ಕಾನೂನು ಅಡಿಯಲ್ಲಿ ಪೊಲಿಸ್ (Police) ಇಲಾಖೆ ಕ್ರಮ ಕೈಗೊಳ್ಳುತ್ತದೆ. ಹಿಂದೂ (Hindu) ಕಾರ್ಯಕರ್ತರು ಅಂತ ಅಲ್ಲ. ಅದಕ್ಕೆ ಆ ಬಣ್ಣವನ್ನು ಕಟ್ಟುವುದು ಸೂಕ್ತವಲ್ಲ ಎಂದರು. ಇದನ್ನೂ ಓದಿ: ರಾಮಜನ್ಮಭೂಮಿ ಹೋರಾಟದ ಕೇಸ್‌ಗೆ ಮರುಜೀವ – 31 ವರ್ಷದ ಬಳಿಕ ಹುಬ್ಬಳ್ಳಿ ಆರೋಪಿ ಬಂಧನ
Advertisement
Advertisement
ಒಬ್ಬರನ್ನೇ ಬಂಧನ ಮಾಡಿಲ್ಲ, ಆಕಸ್ಮಿಕವಾಗಿ ಆಗಿರಬಹುದು. ಈ ಸಮಯದಲ್ಲಿ ಉದ್ದೇಶ ಪೂರ್ವಕವಾಗಿ ಯಾರಾದರೂ ಬಂಧನ ಮಾಡುತ್ತಾರಾ? ವರ್ಷಾನುಗಟ್ಟಲೇ ಬಾಕಿ ಉಳಿದಿರುವ ಕೇಸ್‌ಗಳನ್ನು ಕ್ಲೀಯರ್ ಮಾಡಲು ಹೇಳಿದ್ದೇವೆ. ಅದರಲ್ಲಿ ಹುಬ್ಬಳ್ಳಿಯಲ್ಲಿ 32 ಕೇಸುಗಳು ಪೆಂಡಿಂಗ್ ಇತ್ತು . ಅದನ್ನು ಓಪನ್ ಮಾಡಿ ಕ್ಲೀಯರ್ ಮಾಡುವ ವೇಳೆ ಈ ಕೇಸ್ ಬಂದಿದೆ. ಈ ಪ್ರಕರಣದಲ್ಲಿ ಅರೆಸ್ಟ್ ಮಾಡಿ ಕಸ್ಟಡಿಗೆ ಕೊಟ್ಟಿದಾರೆ. ಎಲ್ಲರಿಗೂ ಹೇಗೆ ಮಾಡಿದ್ದಾರೆ ಇವರಿಗೂ ಹಾಗೆ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಅಂದು ಹೋರಾಡಿದ್ದಕ್ಕೆ ಈಗ ರಾಮಭಕ್ತರನ್ನು ಬಂಧಿಸ್ತಿದ್ದಾರೆ, ನನ್ನನ್ನೂ ಬಂಧಿಸ್ತಾರಾ? – ಆರ್.ಅಶೋಕ್ ಕಿಡಿ
Advertisement
ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಟ್ಟುಕೊಂಡಿಲ್ಲ. ಹಿಂದೂ ಕಾರ್ಯಕರ್ತರು ಇನ್ನೊಂದು ಕಾರ್ಯಕರ್ತರು ಎನ್ನುವ ಟಾರ್ಗೆಟ್ ಮಾಡಿ ಮಾಡುವ ಪ್ರಯತ್ನ ಮಾಡಿಲ್ಲ.ಕಾನೂನಿನ ಪ್ರಕಾರ ಯಾವ ಕ್ರಮ ಆಗಬೇಕು ಪೊಲೀಸ್ ಇಲಾಖೆ ಮಾಡುತ್ತದೆ. ಇದಕ್ಕೆ ಕೋಮು ಬಣ್ಣ ಕಟ್ಟುವುದು ಸೂಕ್ತ ಅಲ್ಲ ಎಂದು ಹೇಳಿದರು.
Advertisement
ಈ ರೀತಿ ಬಹಳ ಕಡೆ ಕೇಸುಗಳನ್ನು ಬಿಟ್ಟು ಬಿಡುತ್ತಾರೆ. ಯಾವಾಗಲೂ ಒಮ್ಮೆ ಕೇಸ್ ರೀ ಓಪನ್ ಆಗುತ್ತದೆ. ಅಂಥದ್ದು ಏನಿತ್ತು ಈ ಪ್ರಕರಣದಲ್ಲಿ ಎನ್ನುವುದರ ಬಗ್ಗೆ ಆಯುಕ್ತರ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದರು.