ಅಯೋಧ್ಯೆ: ರಾಮಮಂದಿರದಲ್ಲಿ (Ram Mandir) ಬಾಲರಾಮನ ಪ್ರಾಣ ಪ್ರತಿಷ್ಠಾ (Prana Pratishtha) ಕಾರ್ಯಕ್ರಮ ಸಮಿಪಿಸುತ್ತಿದ್ದಂತೆ, ಇಂದು (ಶುಕ್ರವಾರ) ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಹ್ವಾನಿತ ಗಣ್ಯರಿಗಾಗಿ ಪ್ರವೇಶ ಪತ್ರದ ಮಾದರಿಯನ್ನು ಬಿಡುಗಡೆ ಮಾಡಿದೆ. ಪ್ರವೇಶ ಪತ್ರದಲ್ಲಿರುವ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದ ನಂತರ ದೇವಾಲಯಕ್ಕೆ ಪ್ರವೇಶ ಸಿಗಲಿದೆ ಎಂದು ಸ್ಪಷ್ಟಪಡಿಸಿದೆ.
ಅಯೋಧ್ಯೆ (Ayodhya) ರಾಮಮಂದಿರದ ಬಾಲರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ 3,000 ವಿವಿಐಪಿಗಳು ಸೇರಿ 7,000 ಕ್ಕೂ ಹೆಚ್ಚು ಗಣ್ಯ ಅತಿಥಿಗಳಿಗೆ ಆಮಂತ್ರಣ ಪತ್ರಿಕೆ ಮತ್ತು ಪ್ರವೇಶ ಪತ್ರಗಳನ್ನು ಕಳುಹಿಸಿದೆ. ಕ್ಯೂಆರ್ ಕೋಡ್ ಹೊಂದಿದ್ದು, ಅದನ್ನು ಸ್ಕ್ಯಾನ್ ಮಾಡಿದ ಬಳಿಕ ಮಾತ್ರ ಕಾರ್ಯಕ್ರಮಕ್ಕೆ ಪ್ರವೇಶ ಸಿಗಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಅಯೋಧ್ಯೆಯ ಬಾಲರಾಮನ ವಿಗ್ರಹದ ವಿಶೇಷತೆ ಏನು..?
Advertisement
Advertisement
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಎಕ್ಸ್‍ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಬಾಲರಾಮನ ಪ್ರಾಣಪ್ರತಿಷ್ಠಾ ಉತ್ಸವಕ್ಕೆ ಪ್ರವೇಶ ಪಡೆಯಬೇಕಾದರೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ನೀಡಿದ ಪ್ರವೇಶ ಪತ್ರದಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬೇಕು. ಆಮಂತ್ರಣ ಪತ್ರಿಕೆ ಮಾತ್ರ ಹಿಡಿದು ಬಂದರೆ ಉತ್ಸವಕ್ಕೆ ಪ್ರವೇಶ ನೀಡುವುದು ಸಾಧ್ಯವಿಲ್ಲ. ಪ್ರವೇಶ ಪತ್ರದ ಮಾದರಿ ಪ್ರತಿಯನ್ನು ಇಲ್ಲಿ ಲಗತ್ತಿಸಲಾಗಿದೆ ಎಂದು ಮಾಹಿತಿ ಹಂಚಿಕೊಳ್ಳಲಾಗಿದೆ.
Advertisement
Advertisement
ಪುರೋಹಿತರು, ದಾನಿಗಳು ಮತ್ತು ಗಣ್ಯ ರಾಜಕಾರಣಿಗಳನ್ನು ಒಳಗೊಂಡು 3,000 ವಿವಿಐಪಿಗಳು ಸೇರಿ 7,000 ಕ್ಕೂ ಹೆಚ್ಚು ಗಣ್ಯ ಅತಿಥಿಗಳಿಗೆ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಮಂತ್ರಣ ಪತ್ರಿಕೆಯನ್ನು ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ ನೀಡಿದೆ.
ಈಗಾಗಲೇ ಪ್ರಾಣಪ್ರತಿಷ್ಠಾಪನೆಗೆ ರಾಮಮಂದಿರದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಗತ್ಯ ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿವೆ. ಜ.22 ರಂದು ಬಾಲರಾಮನ ಪ್ರಾಣಪ್ರತಿಷ್ಠಾಪನೆ ಬಳಿಕ, ಜ.23ರಿಂದ ಬಾಲರಾಮನ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತದೆ. ಇದನ್ನೂ ಓದಿ: Ram Mandir: ಮೈಸೂರಿನ ಶಿಲ್ಪಿ ಕೆತ್ತಿರುವ ರಾಮಲಲ್ಲಾ ವಿಗ್ರಹ ಹೇಗಿದೆ ನೋಡಿ – Photos