ನವದೆಹಲಿ: ತಿರುಪತಿ ಲಡ್ಡು (Tirupati Laddoos) ಪ್ರಸಾದದಲ್ಲಿ ಮೀನಿನ ಎಣ್ಣೆಯನ್ನು ಬೆರೆಸಿರುವುದು ತಪಾಸಣೆಯಿಂದ ಸ್ಪಷ್ಟವಾಗಿದೆ ಎಂದು ರಾಮಜನ್ಮಭೂಮಿಯ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (Acharya Satyendra Das) ತಿಳಿಸಿದ್ದಾರೆ.
ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ ಕುರಿತು ಮಾತನಾಡಿದ ಅವರು, ಇದೆಲ್ಲ ಯಾವಾಗ ನಡೆದಿದೆ ಎಂಬುದು ಇನ್ನೂ ತಿಳಿದಿಲ್ಲ. ಇದು ಪಿತೂರಿಯಾಗಿದೆ ಮತ್ತು ಸನಾತನ ಧರ್ಮದ ಮೇಲಿನ ದಾಳಿಯಾಗಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ – ಜಗನ್ ಅವಧಿಯಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ!
Advertisement
Advertisement
ತಿರುಪತಿ ದೇವಸ್ಥಾನ ಲಡ್ಡು ಪ್ರಸಾದದಲ್ಲಿ ಹಿಂದಿನ ಜಗನ್ಮೋಹನ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರ ತುಪ್ಪದ ಬದಲು ಪ್ರಾಣಿಗಳ ಕೊಬ್ಬು ಬಳಸುತ್ತಿತ್ತು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ.
Advertisement
Advertisement
ಸಿಎಂ ಆರೋಪಗಳಿಗೆ ಸಾಕ್ಷಿಯಾಗಿ ಪ್ರಯೋಗಾಲಯದ ವರದಿಯೊಂದನ್ನು ಬಿಡುಗಡೆ ಮಾಡಲಾಗಿದೆ. ತಿರುಪತಿ ಲಡ್ಡು ಪ್ರಸಾದದ ತುಪ್ಪದಲ್ಲಿ ಮೀನಿನ ಎಣ್ಣೆ, ದನದ ಕೊಬ್ಬು ಹಾಗೂ ಹಂದಿಕೊಬ್ಬಿನ ಕುರುಹುಗಳಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ವೈಎಸ್‌ಆರ್ ಕಾಂಗ್ರೆಸ್ ಸರ್ಕಾರದಲ್ಲಿ ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ: ಆಂಧ್ರ ಸಿಎಂ ಆರೋಪ