ಲಕ್ನೋ: ಅಯೋಧ್ಯೆ ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ (Ram Mandir Donation Row) ಸಂಬಂಧಿಸಿದಂತೆ 8 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿಶೇಷ ತನಿಖಾ ತಂಡದ (SIT) ಪ್ರಾಥಮಿಕ ವರದಿಯಲ್ಲಿ ಮಾಡಿದ ಶಿಫಾರಸಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಮೂಲಗಳ ಪ್ರಕಾರ, 6 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವರಿಂದ ಹಣ ವಶಪಡಿಸಿಕೊಂಡ ನಂತರ ಅನುಕಲ್ಪ್ ಮಿಶ್ರಾ ಮತ್ತು ಲವಕುಶ್ ಮಿಶ್ರಾ ಎಂಬ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ಇದನ್ನೂ ಓದಿ: ರಾಮ ಮಂದಿರ ದೇಣಿಗೆ ದುರ್ಬಳಕೆ ಆರೋಪ – ಸಿಬಿಐ ತನಿಖೆಗೆ ನಿರ್ದೇಶನ ಕೋರಿ ಸುಪ್ರೀಂಗೆ ಅರ್ಜಿ

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ (Shri Ram Janmabhoomi Teerth Kshetra Trust) ಸದಸ್ಯ ಕೃಷ್ಣ ಮೋಹನ್ ಅವರು ನೀಡಿದ ದೂರಿನ ಮೇರೆಗೆ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 306, 316(5), 317(4), 317(5), 61 ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಲು ಉತ್ತರ ಪ್ರದೇಶ ಸರ್ಕಾರ ನಿರ್ದೇಶಿಸಿದೆ.
8 ಪ್ರಮುಖ ಆರೋಪಿಗಳು ಯಾರು?
ಎಫ್‌ಐಆರ್‌ನಲ್ಲಿ 8 ಪ್ರಮುಖ ಆರೋಪಿಗಳು ಸೇರಿದಂತೆ ಹಲವಾರು ಅಪರಿಚಿತ ವ್ಯಕ್ತಿಗಳ ಹೆಸರುಗಳನ್ನು ಸಹ ದಾಖಲಿಸಲಾಗಿದೆ. ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, ಮನೀಶ್ ಯಾದವ್, ರಾಮಶಂಕರ್ ಮಿಶ್ರಾ, ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು, ಸುಭಾಷ್ ಚಂದ್ರ, ಕರುಣೇಶ್ ಪಾಂಡೆ ಪ್ರಮುಖ ಆರೋಪಿಗಳಾಗಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ – 1.30 ಲಕ್ಷ ಮೆಟ್ರಿಕ್ ಟನ್ ತೋತಾಪುರಿ ಖರೀದಿಗೆ ಒಪ್ಪಿಗೆ
