ಲಕ್ನೋ: ಅಯೋಧ್ಯೆಯಲ್ಲಿನ (Ayodhya) ಭವ್ಯವಾದ ರಾಮ ಮಂದಿರದಲ್ಲಿ (Ram Mandir) ಭಕ್ತರ (Devotees) ದರ್ಶನವು 2024ರ ಜನವರಿಯಿಂದ ಪ್ರಾರಂಭವಾಗುತ್ತದೆ ಎಂದು ಅದರ ನಿರ್ಮಾಣದ ಮೇಲ್ವಿಚಾರಣೆಗಾಗಿ ಸ್ಥಾಪಿಸಲಾದ ಟ್ರಸ್ಟ್‌ನ ಪ್ರಮುಖ ಸದಸ್ಯ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ. 50ರಷ್ಟು ದೇಗುಲ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಒಟ್ಟಾರೆ ಪ್ರಗತಿ ತೃಪ್ತಿಕರವಾಗಿದೆ. ಮಕರ ಸಂಕ್ರಾಂತಿ ಹಬ್ಬದಂದು ದೇಗುಲದ ಗರ್ಭಗುಡಿಯಲ್ಲಿ ರಾಮಲಲ್ಲಾನ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ನಂತರ 2024ರ ಜನವರಿಯಲ್ಲಿ ದೇವಾಲಯಗಳನ್ನು ಭಕ್ತರಿಗೆ ತೆರೆಯಲಾಗುವುದು ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದರು.
ಮುಂದಿನ ವರ್ಷ ಡಿಸೆಂಬರ್ ವೇಳೆಗೆ ದೇವಾಲಯದ ನೆಲ ಮಹಡಿ ಸಿದ್ಧಗೊಳ್ಳಲಿದ್ದು, 2024ರ ಜನವರಿ 14ರ ಸುಮಾರಿಗೆ ರಾಮನ ವಿಗ್ರಹ ಪ್ರತಿಷ್ಠಾಪಿಸಲಾಗುವುದು. ರಾಮ ಮಂದಿರ ನಿರ್ಮಾಣಕ್ಕೆ ಅಂದಾಜು 1,800 ಕೋಟಿ ರೂ. ವೆಚ್ಚವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಕುದ್ರೋಳಿಯಲ್ಲಿ ದೀಪಾವಳಿ ಸಂಭ್ರಮ- ಎಲ್ಲರನ್ನೂ ಆಕರ್ಷಿಸಿದ ಗೂಡುದೀಪದ ಕಾರ್ಯಕ್ರಮ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2020ರ ಆ. 5ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ಮಾಡಿದ್ದರು. ಇದನ್ನೂ ಓದಿ: ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಕೋತಿಗಳ ಕಾಟ- ಕೈಯಲ್ಲಿರೋ ಬ್ಯಾಗನ್ನೂ ಬಿಡದೇ ಚೆಲ್ಲಾಟ