ನವದೆಹಲಿ: 2024 ಜನವರಿ 22 ರಂದು ಉತ್ತರ ಪ್ರದೇಶದ (Uttar Pradesh) ಅಯೋಧ್ಯೆಯಲ್ಲಿರುವ (Ayodhya) ರಾಮಮಂದಿರ (Sri Ram Mandir) ಉದ್ಘಾಟನೆಗೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಅಧಿಕೃತ ಆಹ್ವಾನ ನೀಡಿದೆ.
ಈ ಬಗ್ಗೆ ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ನರೇಂದ್ರ ಮೋದಿ, ಇಂದು ನನಗೆ ಅತ್ಯಂತ ಭಾವನಾತ್ಮಕ ದಿನವಾಗಿದೆ. ಇಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಅಧಿಕಾರಿಗಳು ನನ್ನ ನಿವಾಸಕ್ಕೆ ನನ್ನನ್ನು ಭೇಟಿಯಾಗಲು ಬಂದಿದ್ದರು. ಶ್ರೀರಾಮ ಮಂದಿರದ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಅಯೋಧ್ಯೆಗೆ ಬರುವಂತೆ ಅವರು ನನ್ನನ್ನು ಆಹ್ವಾನಿಸಿದರು. ನಾನು ತುಂಬಾ ಧನ್ಯನಾಗಿದ್ದೇವೆ. ನನ್ನ ಜೀವನದಲ್ಲಿ ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ ಎಂದು ಮೋದಿ ತಿಳಿಸಿದ್ದಾರೆ.
जय सियाराम!
आज का दिन बहुत भावनाओं से भरा हुआ है। अभी श्रीराम जन्मभूमि तीर्थ क्षेत्र ट्रस्ट के पदाधिकारी मुझसे मेरे निवास स्थान पर मिलने आए थे। उन्होंने मुझे श्रीराम मंदिर में प्राण-प्रतिष्ठा के अवसर पर अयोध्या आने के लिए निमंत्रित किया है।
मैं खुद को बहुत धन्य महसूस कर रहा… pic.twitter.com/rc801AraIn
— Narendra Modi (@narendramodi) October 25, 2023
ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಚಂಪತ್ ರಾಯ್ ಅವರು ಜನವರಿ 22 ರಂದು ದೇವಾಲಯದಲ್ಲಿ ಶ್ರೀರಾಮನ ವಿಗ್ರಹವನ್ನು ಸ್ಥಾಪಿಸಲಾಗುವುದು ಎಂದು ಖಚಿತಪಡಿಸಿದ್ದಾರೆ ಮತ್ತು ಪ್ರಧಾನಿ ಮೋದಿ ಅವರ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಮೈಸೂರಿನ ಆಧುನಿಕ ಶ್ರವಣ ಕುಮಾರ – ಹಳೆ ಸ್ಕೂಟರ್‌ನಲ್ಲಿ ತಾಯಿಯೊಂದಿಗೆ 4 ದೇಶ ಸುತ್ತಿದ
2019ರ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ರಾಮಮಂದಿರ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟಿತು. ನಂತರ ಕೇಂದ್ರವು ದೇವಾಲಯ ನಿರ್ಮಾಣ ಹಂತದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಅನ್ನು ಸ್ಥಾಪಿಸಿತು. 2020ರ ಆಗಸ್ಟ್ 5 ರಂದು ಪ್ರಧಾನಿ ಮೋದಿ ದೇವಾಲಯದ ಶಂಕುಸ್ಥಾಪನೆ ನೆರವೇರಿಸಿದರು. ಸದ್ಯ ಟ್ರಸ್ಟ್‌ನ ಮೇಲ್ವಿಚಾರಣೆಯಲ್ಲಿ ದೇವಾಲಯ ನಿರ್ಮಾಣದ ಕೆಲಸ ಸ್ಥಿರವಾದ ವೇಗದಲ್ಲಿ ಸಾಗುತ್ತಿದೆ. ಇದನ್ನೂ ಓದಿ: ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಭೇಟಿಯಾದ ನಟಿ ಕಂಗನಾ ರಣಾವತ್
Web Stories