ಲಕ್ನೋ: ಮುಂಬರುವ ಲೋಕಸಭಾ ಚುನಾವಣೆಯೊಳಗೆ ರಾಮಮಂದಿರ ನಿರ್ಮಾಣ ಮಾಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಸೋಮವಾರ ಅಯೋಧ್ಯೆಯಲ್ಲಿ ನಡೆದ `ಸಂತ ಸಮ್ಮೇಳನದಲ್ಲಿ’ ಪಾಲ್ಗೊಂಡ ಅವರು, 2019ರ ಲೋಕಸಭಾ ಚುನಾವಣೆಯೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತದೆ. ನಾವು ಪ್ರಪಂಚದಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ನ್ಯಾಯಾಂಗ, ಶಾಸಕಾಂಗ ತಮ್ಮದೇ ಆದ ಅಧಿಕಾರವನ್ನು ಹೊಂದಿವೆ. ಆದ್ದರಿಂದ ಇವುಗಳನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ಚುನಾವಣೆಯೊಳಗೆ ರಾಮಮಂದಿರ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ. ಸಾಧು-ಸಂತರು ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಡಿ ಎಂದು ಹೇಳಿದ್ದಾರೆ.
Advertisement
ಮರ್ಯಾದಾ ಪುರುಷೋತ್ತಮ ಶ್ರೀರಾಮ ಬ್ರಹ್ಮಾಂಡದ ಒಡೆಯನಾಗಿದ್ದಾನೆ. ಅವನ ದಯೆಯಿಂದ ಅಯೋಧ್ಯೆಯಲ್ಲಿ ರಾಮಮಂದಿರ ಶತಸಿದ್ಧ. ಇದರ ಬಗ್ಗೆ ಯಾವುದೇ ಗೊಂದಲವಿಲ್ಲ. ಈ ಬಗ್ಗೆ ಸಾಧು-ಸಂತರಲ್ಲಿ ಅನುಮಾನವಿದ್ದು, ಪ್ರಪಂಚವು ಆಶಾವಾದದ ಮೇಲೆ ನಿಂತಿದೆ. ಆದ್ದರಿಂದ ಎಲ್ಲರೂ ಸ್ವಲ್ಪ ಸಮಯದವರೆಗೆ ತಾಳ್ಮೆ ಕಳೆದುಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸ ಪ್ರಕರಣ – ಅಡ್ವಾಣಿ, ಉಮಾಭಾರತಿ ಸೇರಿ 12 ಮಂದಿಗೆ ಜಾಮೀನು
Advertisement
When Lord Ram will shower his blessings on Ayodhya, the Ram Mandir will definitely be built & there should be no doubt about it. At least there shouldn't be any doubt among saints: UP CM Yogi Adityanath in Ayodhya pic.twitter.com/dSdbHjLTtM
— ANI UP/Uttarakhand (@ANINewsUP) June 25, 2018
Advertisement
ಬಿಜೆಪಿಯ ಮಾಜಿ ಸಂಸದ ರಾಮ್ ವಿಲಾಸ್ ವೆಂದಾತಿಯವರು ಹೇಳಿದ ಹೇಳಿಕೆಯನ್ನು ಪ್ರಸ್ತಾಪಿಸಿದ ಅವರು, ಮೊಗಲ್ ಚಕ್ರವರ್ತಿ ಬಾಬರನು ಯಾವುದೇ ಹಿಂದೂ ದೇವಾಲಯಗಳನ್ನು ಕೆಡವಲು ಯಾವ ನ್ಯಾಯಾಲಯಗಳ ಅಪ್ಪಣೆ ಕೇಳಿದ್ದಿಲ್ಲ. ಹೀಗಾಗಿ ನ್ಯಾಯಾಲಯದ ಅಪ್ಪಣೆ ಕೇಳದೆ 1992ರಲ್ಲಿ ಬಾಬ್ರಿ ಮಸೀದಿಯನ್ನು ಒಡೆದು ಹಾಕಲಾಗಿದೆ. ಅಲ್ಲದೇ ಸ್ಥಳದಲ್ಲಿ ಸಿಕ್ಕ ರಾಮನ ಮೂರ್ತಿಯಿಂದ ಪ್ರೇರೇಪಣೆಗೊಂಡು ಒಂದೇ ದಿನದಲ್ಲಿ ದೇವಾಲಯ ನಿರ್ಮಾಣಕ್ಕೆ ಮುಂದಾದ ವಿಚಾರವನ್ನು ಪ್ರಸ್ತಾಪಿಸಿದ್ರು. ಇದನ್ನೂ ಓದಿ: ಮೋದಿ ಸರ್ಕಾರದ ಅವಧಿ ಪೂರ್ಣವಾಗುವ ಮೊದಲೇ ರಾಮ ಮಂದಿರ ನಿರ್ಮಾಣ!
Advertisement
ಇದೇ ವೇಳೆ ವಿಶ್ವ ಹಿಂದೂ ಪರಿಷತ್ ರಾಮ ಮಂದಿರ ನಿರ್ಮಾಣ ಕುರಿತು ಪ್ರಸ್ತಾಪಿಸಿ, ಮುಂದಿನ ಮೂರ್ನಾಲ್ಕು ತಿಂಗಳುಗಳಲ್ಲಿ ರಾಮ ಮಂದಿರ ವಿಚಾರವಾಗಿ ಸುಪ್ರೀಂ ಕೋರ್ಟ್ ಯಾವುದೇ ತೀರ್ಮಾನ ತೆಗೆದುಕೊಳ್ಳದಿದ್ದರೆ, ಭವಿಷ್ಯದ ಉಳಿವಿಗಾಗಿ ಮತ್ತೊಮ್ಮೆ ರಾಮಮಂದಿರ ನಿರ್ಮಾಣ ಚಳುವಳಿಯನ್ನು ಪ್ರಾರಂಭಿಸಬೇಕೆಂದು ಸಾಧು-ಸಂತರಿಗೆ ಕರೆ ನೀಡಿದ್ರು. ಇದೇ ಗುರುವಾರ ರಾಮಮಂದಿರ ಹಾಗೂ ಬಾಬ್ರಿ ಮಸೀದಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್‍ನಲ್ಲಿ ವಿಚಾರಣೆ ಮುಂದುವರೆಯಲಿದೆ. ಈ ಮೊದಲು ನಡೆದ ವಿಚಾರಣೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಶಂಕೆ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರುಗಳಾದ ಎಲ್.ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಹಾಗೂ ಇನ್ನೂ ಅನೇಕ ಮುಖಂಡರನ್ನು ಕೋರ್ಟ್ ವಿಚಾರಣೆ ನಡೆಸಿತ್ತು. ಇದನ್ನೂ ಓದಿ:ರಾಮಮಂದಿರ ಕಟ್ಟೋವರೆಗೂ ನಿದ್ರಿಸಬೇಡಿ, ನಾನೂ ನಿದ್ರಿಸಲ್ಲ- ಪೇಜಾವರ ಶ್ರೀ